
ಐಪಿಎಲ್ ಅಂಗಳದಲ್ಲಿ ಮತ್ತೊಂದು ಡಬಲ್ ಹೆಡ್ಡರ್ ಶನಿವಾರ ನಡೆಯಲಿದೆ. ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಈ ಪೈಕಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ ತಂಡಗಳ ನಡುವಿನ ಪಂದ್ಯ 52ನೇ ಮುಖಾಮುಖಿಯಾಗಿದ್ದು ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೂ ಅಂತಿಮ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಅನುಭವಿಸಿದೆ. ಆದರೆ ಪಂಜಾಬ್ ಕಿಂಗ್ಸ್ ಅಂತಿಮ ಪಂದ್ಯದಲ್ಲಿ ಟೂರ್ನಿಯ ಅಗ್ರಸ್ಥಾನಿ ಗುಜರಾತ್ ಟೈಟನ್ಸ್ ವಿರುದ್ಧ ಗೆಲುವು ಸಂಪಾದಿಸಿದ್ದು ಆತ್ಮವಿಶ್ವಾಸದಲ್ಲಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಸ್ಕ್ವಾಡ್‌ಗಳು:
ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಮೇ 7 ರಂದು ಶನಿವಾರ ನಡೆಯಲಿದ್ದು ಮಧ್ಯಾಹ್ನ 3:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣ ಯಾವಾಗಲೂ ಬ್ಯಾಟರ್‌ಗಳಿಗೆ ನೆರವು ನೀಡುವ ಪಿಚ್ ಆಗಿದೆ. ಪಿಚ್ ಬೌನ್ಸ್ ಆಗುವ ಸಾಧ್ಯತೆಯಿದೆ. ಇನ್ನು ಕಡಿಮೆ ಅಂತರದಲ್ಲಿ ಬೌಂಡರಿ ಇರುವ ಕಾರಣದಿಂದಾಗಿ ಬ್ಯಾಟರ್‌ಗಳು ಇದರ ನೆರವು ಪಡೆಯಲಿದ್ದಾರೆ. ಇಬ್ಬನಿ ಹೆಚ್ಚಿನ ಪ್ರಭಾವ ಬೀಳುವ ಕಾರಣದಿಂದಾಗಿ ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೋಳ್ಳಲಿದೆ. ಎಂದಿನಂತೆ ಹೈಸ್ಕೋರಿಂಗ್ ಪಂದ್ಯವನ್ನು ಈ ಮೈದಾನದಲ್ಲಿ ನಿರೀಕ್ಷಿಸಬಹುದಾಗಿದೆ.
ಸಂಭಾವ್ಯ ತಂಡಗಳು:
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಸಂದೀಪ್ ಶರ್ಮಾ
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (c & wk), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ, ಕುಲದೀಪ್ ಸೇನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್