For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಪಂಜಾಬ್ vs ಹೈದರಾಬಾದ್; ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ XI

IPL 2022: PBKS vs SRH Preview, Playing 11, Weather Forecast and Pitch Report details

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತದ ಅಂತಿಮ ಪಂದ್ಯ ಭಾನುವಾರ ನಡೆಯಲಿದ್ದು ಈ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಮಧ್ಯೆ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಯಾವ ತಂಡ ಸೋತರೂ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೆ ಟೂರ್ನಿಯನ್ನು ಗೌರವಯುತವಾಗಿ ಅಂತ್ಯಗೊಳಿಸಲು ಎರಡು ತಂಡಗಳು ಕೂಡ ಜಿದ್ದಾಜಿದ್ದಿನ ಪ್ರದರ್ಶನ ನಿಡುವುದರಲ್ಲಿ ಅನುಮಾನವಿಲ್ಲ.

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ಈ ಎರಡು ತಂಡಗಳು ಕುಡ ಈ ಬಾರಿಯ ಐಪಿಎಲ್‌ನ ಲೀಗ್ ಹಂತದಿಂದ ಈಗಾಗಲೇ ಹೊರಬಿದ್ದಿದೆ. ಸಾಕಷ್ಟು ಅದ್ಭುತ ಪ್ರದರ್ಶನ ನಿಡಿದ ಈ ಎರಡು ತಂಡಗಳು ಕೂಡ ಕೆಲ ನಿರ್ಣಾಯಕ ಪಂದ್ಯದಲ್ಲಿ ಸೋಲು ಅನುಭವಿಸಿದ ಕಾರಣ ಪ್ಲೇಆಫ್‌ಗೆ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಲೀಗ್‌ ಹಂತದಲ್ಲಿ ಈವರೆಗೆ ಎರಡು ತಂಡಗಳು ಕೂಡ 13 ಪಂದ್ಯಗಳನ್ನು ಆಡಿದ್ದು ಎರಡು ತಂಡಗಳು ಕೂಡ ತಲಾ 6 ಗೆಲುವು ಹಾಗೂ 7 ಸೋಲು ಅನುಭವಿಸಿದೆ. ಅಂಕಪಟ್ಟಿಯಲ್ಲಿ 12 ಅಂಗಳನ್ನು ಹೊಂದಿರುವ ಈ ತಂಡಗಳು ನೆಟ್‌ರನ್‌ರೆಟ್‌ನ ಆಧಾರದಲ್ಲಿ 7 ಹಾಗೂ 8ನೇ ಸ್ಥಾನದಲ್ಲಿದೆ.

ಭಾನುವಾರ ನಡೆಯಲಿರುವ ಈ ಲೀಗ್ ಹಂತದ ಅಂತಿಮ ಪಂದ್ಯದ ಕೆಲ ಪ್ರಮುಖ ಮಾಹಿತಿಗಳು ಇಲ್ಲಿದೆ.

ಸ್ಕ್ವಾಡ್‌ಗಳು: ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಮೇ 22 ರಂದು ಭಾನುವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

IPL 2022: PBKS vs SRH Preview, Playing 11, Weather Forecast and Pitch Report details

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಎಸ್‌ಆರ್‌ಹೆಚ್ ಹಾಗೂ ಪಿಬಿಕೆಎಸ್‌ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದೆ. ಆದರೆ ಪಿಚ್ ನಿಧಾನವಾಗಿ ವರ್ತಿಸುವ ಕಾರಣ ಸ್ಪಿನ್ನರ್‌ಗಳು ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪರಿಣಾಮ ಬೀಳುವ ಕಾರಣ ಬ್ಯಾಟರ್‌ಗಳು ಇದರ ಲಾಭ ಪಡೆಯಲಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ರಿಯಾಂ ಗಾರ್ಗ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಂ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್ (ನಾಯಕ), ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್, ಟಿ ನಟರಾಜನ್

ಪಂಜಾಬ್ ಕಿಂಗ್ಸ್: ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಮಯಾಂಕ್ ಅಗರ್ವಾಲ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

Story first published: Saturday, May 21, 2022, 17:57 [IST]
Other articles published on May 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+