Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RR: ನಿಮ್ಮ ಡ್ರೀಮ್ ಟೀಮ್ ಗೆಲ್ಲಬೇಕೆಂದರೆ ಈ 5 ಆಟಗಾರರು ನಿಮ್ಮ ತಂಡದಲ್ಲಿರಲೇಬೇಕು!

IPL 2022: Players who may play well and play bad in MI vs RR match

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯ ಒಂಬತ್ತನೇ ಪಂದ್ಯದಲ್ಲಿ ಐದು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ. ಇಂದು (ಏಪ್ರಿಲ್ 2) ಟೂರ್ನಿಯ ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಟ ನಡೆಸಿದರೆ, ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ ನಡೆಸಲಿವೆ.

ಇನ್ನು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇತ್ತಂಡಗಳೂ ಇದುವರೆಗೂ ಟೂರ್ನಿಯಲ್ಲಿ ತಲಾ ಒಂದೊಂದು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೆ, ಆಡಿರುವ ಒಂದು ಪಂದ್ಯವನ್ನೂ ಸೋತಿರುವ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಹೀಗೆ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾಕ್ಕೇರುವ ಯೋಜನೆಯಲ್ಲಿದ್ದರೆ, ಇತ್ತ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಜಯ ಸಾಧಿಸುವ ಯೋಜನೆಯಲ್ಲಿದೆ. ಹೀಗೆ ಈ ಪಂದ್ಯದಲ್ಲಿ ಗೆಲ್ಲುವುದರ ಕಡೆ ಇತ್ತಂಡಗಳ ಆಟಗಾರರು ಗಮನ ಹರಿಸಿದ್ದರೆ, ಕ್ರಿಕೆಟ್ ಪ್ರೇಮಿಗಳು ಎರಡೂ ತಂಡಗಳ ಆಟಗಾರರನ್ನೊಳಗೊಂಡಂತೆ ತಮ್ಮದೇ ಆದ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಈ ಡ್ರೀಮ್ ಟೀಮ್‌ನಲ್ಲಿ ಯಾವ ಆಟಗಾರರನ್ನು ಸೇರಿಸಿಕೊಳ್ಳಬೇಕು, ಯಾವ ಆಟಗಾರರನ್ನು ತಂಡದಿಂದ ಹೊರಗಿಡಬೇಕು ಹಾಗೂ ಯಾವ ಆಟಗಾರರಿಗೆ ನಾಯಕ ಮತ್ತು ಉಪನಾಯಕನ ಸ್ಥಾನ ನೀಡಬೇಕು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಈ ಐವರು ತಂಡದಲ್ಲಿರಲೇಬೇಕು

ಈ ಐವರು ತಂಡದಲ್ಲಿರಲೇಬೇಕು

ಮುಂಬೈಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯಕ್ಕೆ ನೀವು ರಚಿಸಲಿರುವ ಡ್ರೀಮ್ ಟೀಮ್‌ನಲ್ಲಿ ಕಳೆದ ಪಂದ್ಯದಲ್ಲಿ 41 ರನ್ ಬಾರಿಸಿ ಅಬ್ಬರಿಸಿದ್ದ ರೋಹಿತ್ ಶರ್ಮಾರನ್ನು ಸೇರಿಸಿಕೊಳ್ಳುವುದು ಉತ್ತಮ. ಕಳೆದ ಪಂದ್ಯದಲ್ಲಿ ಮಿಚಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಮತ್ತಷ್ಟು ಸ್ಪೋಟಕ ಆಟವನ್ನಾಡುವ ನಿರೀಕ್ಷೆಗಳಿವೆ. ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ 81 ರನ್ ಚಚ್ಚಿ ಮಿಂಚಿದ್ದ ಇಶಾನ್ ಕಿಶನ್ ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದು, ಈ ಪಂದ್ಯದಲ್ಲಿ ತನ್ನ ಅಬ್ಬರವನ್ನು ಮುಂದುವರೆಸಲಿದ್ದಾರೆ ಎನ್ನಬಹುದು. ಮೊದಲ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆಯದ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ದೊಡ್ಡ ಮಟ್ಟದ ವಿಕೆಟ್ ಪಡೆಯುವ ಸಾಧ್ಯತೆಗಳಿವೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ಇಂದಿನ ಪಂದ್ಯದ ಡ್ರೀಮ್ ಟೀಮ್‌ಗೆ ಸೇರಿಸಿಕೊಳ್ಳಬೇಕು. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ 3 ವಿಕೆಟ್ ಪಡೆದು ಉತ್ತಮ ಆರಂಭ ಪಡೆದುಕೊಂಡು ಮಿಂಚಿದ್ದ ಯುಜುವೇಂದ್ರ ಚಹಲ್ ಇಂದಿನ ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಸಾಧ್ಯತೆಗಳಿವೆ. ಚಹಲ್ ಜೊತಗೆ ರಾಜಸ್ಥಾನ್ ರಾಯಲ್ಸ್ ಪರ ಕಳೆದ ಪಂದ್ಯದಲ್ಲಿ ಕಣಕ್ಕಿಳಿದು 2 ವಿಕಟ್ ಪಡೆದಿದ್ದ ಟ್ರೆಂಟ್ ಬೌಲ್ಟ್ ಅವರನ್ನೂ ಸಹ ನಿಮ್ಮ ಡ್ರೀಮ್ ಟೀಮ್‌ನಲ್ಲಿ ಸೇರಿಸಿಕೊಳ್ಳಿ.

ನಾಯಕ ಮತ್ತು ಉಪನಾಯಕ

ನಾಯಕ ಮತ್ತು ಉಪನಾಯಕ

ನಿಮ್ಮ ಡ್ರೀಮ್ ಟೀಮ್‌ನಲ್ಲಿ ಮೇಲ್ಕಂಡ ಐವರನ್ನು ಸೇರಿಸಿಕೊಳ್ಳುವುದರ ಜೊತೆಗೆ ರೋಹಿತ್ ಶರ್ಮಾ ಅಥವಾ ಇಶಾನ್ ಕಿಶನ್ ಅವರನ್ನು ನಾಯಕರನ್ನಾಗಿ ಆರಿಸಿ ಹಾಗೂ ಟ್ರೆಂಟ್ ಬೌಲ್ಟ್ ಅಥವಾ ಯುಜುವೇಂದ್ರ ಚಹಲಾ್ ಅವರನ್ನು ಉಪನಾಯಕರೆಂದು ನೇಮಿಸಿ.

ಡ್ರೀಮ್ ಟೀಮ್ ಹೀಗಿರಲಿ

ಡ್ರೀಮ್ ಟೀಮ್ ಹೀಗಿರಲಿ

ತಂಡ 1: ಕೀಪರ್ಸ್ - ಜೋಸ್ ಬಟ್ಲರ್, ಇಶಾನ್ ಕಿಶನ್

ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ ( ನಾಯಕ ), ಸೂರ್ಯಕುಮಾರ್ ಯಾದವ್, ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್

ಆಲ್ ರೌಂಡರ್ - ಡೇನಿಯಲ್ ಸ್ಯಾಮ್ಸ್

ಬೌಲರ್‌ಗಳು - ಟ್ರೆಂಟ್ ಬೌಲ್ಟ್ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಬಸಿಲ್ ಥಂಪಿ

ತಂಡ: 2 ಕೀಪರ್ಸ್ - ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ನಾಯಕ)

ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ದೇವದತ್ ಪಡಿಕ್ಕಲ್

ಆಲ್ ರೌಂಡರ್ - ಕೀರಾನ್ ಪೊಲಾರ್ಡ್

ಬೌಲರ್‌ಗಳು - ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್ (ಉಪನಾಯಕ), ಬೇಸಿಲ್ ಥಂಪಿ, ಟೈಮಲ್ ಮಿಲ್ಸ್

Story first published: Saturday, April 2, 2022, 13:33 [IST]
Other articles published on Apr 2, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+