IPL 2022 Playoffs : ಪ್ಲೇಆಫ್ ಬಗ್ಗೆ ಬಿಸಿಸಿಐ ಮಹತ್ವದ ನಿರ್ಧಾರ: ತಾಣಗಳ ಬಗ್ಗೆ ಶೀಘ್ರ ಘೋಷಣೆ!

ಈ ಬಾರಿಯ ಐಪಿಎಲ್‌ನ 21 ಪಂದ್ಯಗಳು ಮುಗಿದಿದ್ದು ಟೂರ್ನಿ ರೋಚಕವಾಗಿ ಸಾಗುತ್ತಿದೆ. ಬಹುತೇಕ ಪಂದ್ಯಗಳು ಜಿದ್ದಾಜಿದ್ದಿನಿಂದ ಕೂಡಿದ್ದು ಅಂತಿಮ ಹಂತದವರೆಗೂ ರೋಚಕತೆಯನ್ನು ಉಳಿಸಿಕೊಳ್ಳುತ್ತಿದೆ. ಹೀಗಾಗಿ ಅಭಿಮಾನಿಗಳು ಭರಪೂರ ಮನರಂಜನೆಯನ್ನು ಪಡೆಯುತ್ತಿದ್ದಾರೆ. ಈ ಮಧ್ಯೆ ಬಿಸಿಸಿಐ ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳ ತಾಣಗಳ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದು ಶೀಘ್ರದಲ್ಲಿಯೇ ಈ ಬಗ್ಗೆ ಘೋಷಣೆ ಮಾಡಲಿದೆ.
ಕೊರೊನಾವೈರಸ್‌ನ ಕಾರಣದಿಂದಾಗಿ ಈ ಭಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಪಂದ್ಯಗಳನ್ನು ಮುಂಬೈ ಹಾಗೂ ಪುಣೆ ನಡೆರದಲ್ಲಿ ಮಾತ್ರವೇ ಆಯೋಜಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದ್ದು ಟೂರ್ನಿ ಯಶಸ್ವಿಯಾಗಿ ನಡೆಯುತ್ತಿದೆ. ಹೀಗಾಗಿ ಮುಂದಿನ ಹಂತದ ಪಂದ್ಯಗಳ ಬಗ್ಗೆ ಬಿಸಿಸಿಐ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯವನ್ನು ಅಹ್ಮದಾಬಾದ್‌ನ ಮೊಟೇರಾ ಸ್ಟೇಡಿಯಂನಲ್ಲಿ ನಡೆಸುವುದನ್ನು ಬಿಸಿಸಿಐ ಈ ಹಿಂದೆಯೇ ನಿರ್ಧರಿಸಿತ್ತು. ಕೊರೊನಾ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗದಿದ್ದರೆ ಕ್ವಾಲಿಫೈಯರ್ 1 ಹಾಗೂ ಎಲಿಮಿನೇಟರ್ ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾಲಿಫೈಯರ್ 2 ಅಹ್ಮದಾಬಾದ್‌ನಲ್ಲಿ ಆಯೋಜನೆಯಾಗಲಿದೆ. ಈ ಬಗ್ಗೆ ಬಿಸಿಸಿಐ ಶೀಘ್ರದಲ್ಲಿಯೇ ಘೋಷಣೆ ಮಾಡಲಿದೆ.

ಐಪಿಎಲ್ 2022 ಪ್ಲೇಆಫ್ ಪಂದ್ಯಗಳ ತಾಣ
ಕ್ವಾಲಿಫೈಯರ್ 1: ಈಡನ್ ಗಾರ್ಡನ್ ಕೊಲ್ಕತ್ತಾ
ಎಲಿಮಿನೇಟರ್: ಈಡನ್ ಗಾರ್ಡನ್ ಕೊಲ್ಕತ್ತಾ
ಕ್ವಾಲಿಫೈಯರ್ 2: ಅಹ್ಮದಾಬಾದ್
ಐಪಿಎಲ್ 2022: ಫೈನಲ್
ಮುಂದಿನ ಕೆಲ ದಿನಗಳಲ್ಲಿಯೇ ಐಪಿಎಲ್ ಆಡಳಿತ ಮಂಡಳಿ ಸಭೆ ನಡೆಯಲಿದೆ. ಈ ಸಭೆಯ ಬಳಿಕ ಬಿಸಿಸಿಐ ಅಧಿಕೃತ ಘೋಷಣೆಯನ್ನು ಮಾಡಲಿದೆ. ಈ ಮಧ್ಯೆ ಯುಪಿ ಕ್ರಿಕೆಟ್ ಅಸೊಸಿಯೇಶನ್ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಒಂದು ಪ್ಲೇಆಫ್ ಪಂದ್ಯವನ್ನು ಆಯೋಜನೆ ಮಾಡುವಂತೆ ಮನವಿ ಮಾಡಿದೆ. ಆದರೆ ಈ ಮನವಿಗೆ ಒಪ್ಪಿಗೆ ಸೂಚಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications