IPL 2022, GT vs RR ಕ್ವಾಲಿಫೈಯರ್ 1: ಪಂದ್ಯದ ಸಂಭಾವ್ಯ ಆಡುವ ಬಳಗ ಮತ್ತು ಪಿಚ್ ವರದಿ

ಕಳೆದ ಮಾರ್ಚ್ ತಿಂಗಳ ಅಂತಿಮ ವಾರದಲ್ಲಿ ಆರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಭಾನುವಾರ ನಡೆದ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡದ ಪಂದ್ಯದ ಮೂಲಕ ಮುಕ್ತಾಯಗೊಂಡಿದ್ದು, ಟೂರ್ನಿಯ ಪ್ಲೇಆಫ್ ಸುತ್ತಿನ ಪಂದ್ಯಗಳು ನಾಳೆಯಿಂದ ( ಮೇ 24 ) ಆರಂಭವಾಗುತ್ತಿದೆ.
ಇನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಫರ್ ಜೈಂಟ್ಸ್ ಮತ್ತು ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿದ್ದು, ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಒಂದನೇ ಕ್ವಾಲಿಫೈಯರ್ ಪಂದ್ಯಕ್ಕೆ ಆಯ್ಜೆಯಾಗಿವೆ. ಇನ್ನು ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪಂದ್ಯಕ್ಕೆ ಲಗ್ಗೆ ಇಟ್ಟಿವೆ.
ಇನ್ನು ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯ ಯಾವಾಗ, ಯಾವ ಕ್ರೀಡಾಂಗಣದಲ್ಲಿ ನಡೆಯಲಿದೆ ಹಾಗೂ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಸಂಭಾವ್ಯ ಆಡುವ ಬಳಗದ ಮಾಹಿತಿ ಮತ್ತು ಪಿಚ್ ವರದಿ ಈ ಕೆಳಕಂಡಂತಿದೆ..

ಪಂದ್ಯದ ಮಾಹಿತಿ
ಪಂದ್ಯ: ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ - ಕ್ವಾಲಿಫೈಯರ್ 1
ದಿನಾಂಕ ಮತ್ತು ಸಮಯ: ಮಂಗಳವಾರ, ಮೇ 24, 7:30 PM IST
ಸ್ಥಳ: ಈಡನ್ ಗಾರ್ಡನ್ಸ್, ಕೋಲ್ಕತ್ತಾ
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್‌ಸ್ಟಾರ್

ಪಿಚ್ ವರದಿ
ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಆದರೆ ಕಳೆದ ಎರಡು ದಿನಗಳಲ್ಲಿ ಮಳೆ ಇರುವ ಕಾರಣ ಇದು ಸ್ಪಿನ್ನರ್‌ಗಳಿಗೆ ಸಾಕಷ್ಟು ಸಹಾಯ ಸಿಗುವ ನಿರೀಕ್ಷೆಯಿದೆ. ಈ ಪಿಚ್ ಆರಂಭದಲ್ಲಿ ಬೌಲರ್‌ಗಳಿಗೆ ಸಹಕಾರಿಯಾಗಿರಲಿದ್ದು ನಂತರ ಬ್ಯಾಟರ್‌ಗಳು ತಮ್ಮ ಹೊಡೆತಗಳನ್ನು ಮುಕ್ತವಾಗಿ ಆಡಬಹುದು. ಇನ್ನು ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸಲಿದ್ದಾರೆ. ಐಪಿಎಲ್ ಮಾದರಿಯಂತೆ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ದುಕೊಂಡು ನಂತರ ಚೇಸಿಂಗ್ ಮಾಡುವ ನಿರ್ಧಾರವನ್ನು ಕಾಣಲಿದೆ.

ಸಂಭಾವ್ಯ ಆಡುವ ಬಳಗಗಳು
ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ ಬಳಗ: ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ),ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications