ಸಾಲು ಸಾಲು ಸೋಲುಂಡ ಆರ್‌ಸಿಬಿಗೆ ಪ್ಲೇಆಫ್ ತಲುಪಲು ಉಳಿದಿರುವುದು ಇದೊಂದೇ ಮಾರ್ಗ!

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದು ಆರಂಭದಲ್ಲಿ ಪಂದ್ಯವೊಂದನ್ನು ಸೋತ ನಂತರ ಹ್ಯಾಟ್ರಿಕ್ ಜಯ ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಹ್ಯಾಟ್ರಿಕ್ ಸೋಲುಂಡು ಪ್ಲೇ ಆಫ್ ಪ್ರವೇಶ ಗಿಟ್ಟಿಸಿಕೊಳ್ಳಲು ಪರದಾಡುತ್ತಿದೆ.
ಹೌದು, ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 68 ರನ್‌ಗಳಿಗೆ ಆಲ್ ಔಟ್ ಆಗುವ ಮೂಲಕ ಹೀನಾಯವಾಗಿ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಂತರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿಯೂ ಗೆಲ್ಲುವ ಅವಕಾಶವನ್ನು ಕೈ ತಪ್ಪಿಸಿಕೊಂಡು ಸೋಲನ್ನು ಅನುಭವಿಸಿತ್ತು ಹಾಗೂ ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧವೂ ಅಂತಿಮ ಹಂತದಲ್ಲಿ ಎಡವಿ ಸೋಲನ್ನು ಅನುಭವಿಸಿ ಹ್ಯಾಟ್ರಿಕ್ ಸೋಲನ್ನು ಕಂಡಿದೆ.
ಹೌದು, ಇಂದು ( ಏಪ್ರಿಲ್ 30 ) ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಮತ್ತು ರಜತ್ ಪಾಟಿದಾರ್ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಕಲೆ ಹಾಕಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ 171 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾದ ಗುಜರಾತ್ ಟೈಟನ್ಸ್ ಡೇವಿಡ್ ಮಿಲ್ಲರ್ ಹಾಗೂ ರಾಹುಲ್ ತೆವಾಟಿಯಾ ಜವಾಬ್ದಾರಿಯುತ ಪ್ರದರ್ಶನದ ನೆರವಿನಿಂದ 19.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿ 6 ವಿಕೆಟ್‍ಗಳ ಜಯ ಸಾಧಿಸಿತು ಹಾಗೂ ಈ ರೋಚಕ ಹಣಾಹಣಿಯಲ್ಲಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹ್ಯಾಟ್ರಿಕ್ ಸೋಲನ್ನು ಕಂಡಿತು. ಹೀಗೆ ಗೆಲ್ಲಬಹುದಾಗಿದ್ದ 2 ಪಂದ್ಯಗಳನ್ನು ಕೈಚೆಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಪ್ಲೇ ಆಫ್ ಪ್ರವೇಶಿಸಬೇಕೆಂದರೆ ಉಳಿದಿರುವ 4 ಪಂದ್ಯಗಳ ಪೈಕಿ ಎಷ್ಟು ಪಂದ್ಯಗಳಲ್ಲಿ ಗೆಲ್ಲಬೇಕು ಎಂಬುದರ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.

ಇಷ್ಟು ಪಂದ್ಯಗಳಲ್ಲಿ ಗೆಲ್ಲಲೇಬೇಕು
ಸದ್ಯ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಪ್ರವೇಶಿಸಬೇಕಾದರೆ ಉಳಿದ 4 ಪಂದ್ಯಗಳ ಪೈಕಿ ಮೂರರಲ್ಲಿ ಗೆಲ್ಲಲೇಬೇಕಾಗಿದೆ. ಹೀಗೆ ಉಳಿದ 4 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಗೆದ್ದರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಪ್ರವೇಶಿಸಲು ಸಾಧ್ಯತೆಗಳಿರಲಿವೆ.

3 ಪಂದ್ಯಗಳನ್ನು ಗೆದ್ದರೂ ಇರಲಿದೆ ಅಡೆತಡೆ!
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಉಳಿದ 4 ಪಂದ್ಯಗಳ ಪೈಕಿ ಮೂರರಲ್ಲಿ ಕೇವಲ ಗೆಲುವು ಸಾಧಿಸಿದರೆ ಪ್ಲೇ ಆಫ್ ಪ್ರವೇಶ ಸುಲಭವಾಗಿಬಿಡುವುದಿಲ್ಲ. ಬದಲಾಗಿ ಈ 3 ಗೆಲುವುಗಳು ದೊಡ್ಡ ಅಂತರದಲ್ಲಿ ಗೆದ್ದರಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಪ್ರವೇಶಿಸುವ ಹಾದಿ ಸುಗಮವಾಗಲಿದೆ. ಏಕೆಂದರೆ ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೆಟ್ ರನ್ ರೇಟ್ -0.558 ಇರುವ ಕಾರಣ ಇತರೆ ತಂಡಗಳಿಗೆ ಪೈಪೋಟಿ ನೀಡಿ ಟಾಪ್ 4ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಬೇಕೆಂದರೆ ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕಾಗಿದೆ. ಅಥವಾ ಉಳಿದ 4 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿಯೂ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿದೆ.

2 ಪಂದ್ಯ ಗೆದ್ದು ಪ್ಲೇ ಆಫ್ ಪ್ರವೇಶಿಸುವುದು ಅಸಾಧ್ಯ
ಇನ್ನು ಉಳಿದ 4 ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡರಲ್ಲಿ ಗೆದ್ದರೆ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಬಹುದು. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಪಂದ್ಯಗಳಲ್ಲಿ ಸೋತರೆ ತಂಡದ ನೆಟ್ ರನ್ ರೇಟ್ ಕಡಿಮೆಯಾಗಲಿದ್ದು ಒಂದುವೇಳೆ ಇತರೆ ತಂಡಗಳಷ್ಟೇ ಅಂಕಗಳನ್ನು ಪಡೆದುಕೊಂಡರೂ ಸಹ ನೆಟ್ ರನ್ ರೇಟ್ ಕೊರತೆಯಿಂದ ಪ್ಲೇ ಆಫ್ ಪ್ರವೇಶಿಸುವ ಅವಕಾಶವನ್ನು ಕೈ ತಪ್ಪಿಸಿಕೊಳ್ಳಲಿದೆ.
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಪ್ರವೇಶಿಸಬೇಕಾದರೆ ಇರುವ ಏಕೈಕ ಮಾರ್ಗವೆಂದರೆ 4 ಪಂದ್ಯಗಳಲ್ಲಿ 3 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾಗಿರುವುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications