For Quick Alerts
ALLOW NOTIFICATIONS  
For Daily Alerts
 

ಪಂಜಾಬ್ ವಿರುದ್ಧ ಆರ್‌ಸಿಬಿ ಸೋತ ನಂತರ ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆಲ್ಲಬೇಕು?

IPL 2022: Playoffs scenario after Royal Challengers Bangalore lost to Punjab Kings

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 60ನೇ ಪಂದ್ಯ ನಿನ್ನೆ ( ಮೇ 13 ) ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 54 ರನ್‌ಗಳ ಜಯ ಸಾಧಿಸಿದೆ. ಇನ್ನು ಈ ಗೆಲುವಿನ ಮೂಲಕ ಪಂಜಾಬ್ ಕಿಂಗ್ಸ್ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದರೆ, ಈ ಪಂದ್ಯಕ್ಕೂ ಮುನ್ನ ಸುಲಭವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸುಲಭವಾಗಿ ಪ್ಲೇಆಫ್ ಪ್ರವೇಶಿಸಲಿರುವ ತಂಡ ಎನಿಸಿಕೊಂಡಿತ್ತು. ಆದರೆ, ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ ಬೃಹತ್ ರನ್‌ಗಳ ಅಂತರದ ಸೋಲನ್ನು ಕಂಡಿರುವ ಆರ್‌ಸಿಬಿಯ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಈ ಫಲಿತಾಂಶ ಈ ಬಾರಿ ತಂಡಗಳ ಪ್ಲೇಆಫ್ ಪ್ರವೇಶಿಸಬಹುದಾದ ಅವಕಾಶಗಳ ಗತಿಯನ್ನೇ ಬದಲಿಸಿದ್ದು, ಈ ಪಂದ್ಯ ಮುಕ್ತಾಯವಾದ ನಂತರ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಯಾವ ರೀತಿ ಗೆದ್ದರೆ ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಲಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಕೋಲ್ಕತ್ತಾ ನೈಟ್ ರೈಡರ್ಸ್

ಕೋಲ್ಕತ್ತಾ ನೈಟ್ ರೈಡರ್ಸ್

ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆದ್ದರೆ 14 ಅಂಕಗಳನ್ನು ಪಡೆದುಕೊಳ್ಳಲಿದೆ. ಇನ್ನು ನಾಲ್ಕನೇ ಸ್ಥಾನ ಪಡೆದುಕೊಳ್ಳಲು 14 ಅಂಕಗಳನ್ನು ಪಡೆದುಕೊಂಡ ತಂಡಕ್ಕೆ ಅವಕಾಶವಿದ್ದರೆ ಮಾತ್ರ ಕೆಕೆಆರ್ ಪ್ಲೇಆಫ್ ಪ್ರವೇಶಿಸಬಹುದಾಗಿದ್ದು, ಈ ಸಂದರ್ಭ ನಿರ್ಮಾಣವಾದರೆ ಕೆಕೆಆರ್ ಉಳಿದ ತಂಡಗಳಿಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಬೇಕಾದ ಅಗತ್ಯವಿದೆ. ಇನ್ನು ಈ ರೀತಿ ನಡೆದು ಕೆಕೆಆರ್ ಪ್ಲೇಆಫ್ ಪ್ರವೇಶಿಸುವುದು ತೀರ ಕಷ್ಟಕರವಾಗಿದ್ದು, ಪ್ಲೇಆಫ್ ಪ್ರವೇಶಿಸುವ ಸಾಧ್ಯತೆ ಶೇಕಡಾ ಹತ್ತಕ್ಕಿಂತ ಕಡಿಮೆ ಇದೆ. ಹೀಗಾಗಿ ಕೆಕೆಆರ್ ಪ್ಲೇಆಫ್ ಪ್ರವೇಶಿಸುವ ರೇಸ್‌ನಿಂದ ಬಹುತೇಕ ಹೊರಬಿದ್ದಿದ್ದೆ ಎನ್ನಬಹುದು.

ಪಂಜಾಬ್ ಕಿಂಗ್ಸ್

ಪಂಜಾಬ್ ಕಿಂಗ್ಸ್

ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೃಹತ್ ಗೆಲುವನ್ನು ಸಾಧಿಸಿರುವ ಪಂಜಾಬ್ ಕಿಂಗ್ಸ್ ಸದ್ಯ 12 ಅಂಕಗಳನ್ನು ಪಡೆದುಕೊಂಡಿದ್ದು, ಇನ್ನುಳಿದ ತನ್ನ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಿದೆ. ಇನ್ನು ಪಂಜಾಬ್ ಕಿಂಗ್ಸ್ ಉಳಿದ ಎರಡು ಪಂದ್ಯಗಳಲ್ಲಿ ಗೆದ್ದರೆ 16 ಅಂಕಗಳನ್ನು ಪಡೆದುಕೊಳ್ಳಲಿದೆ. ಇನ್ನು ಇದರ ಜೊತೆಗೆ ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕಿಂತ ಮೇಲಿರುವ ತಂಡಗಳು ಉಳಿದ ಪಂದ್ಯಗಳನ್ನು ಗೆದ್ದರೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉಳಿದ ಪಂದ್ಯಗಳನ್ನು ಸೋತರೆ ಪಂಜಾಬ್ ಕಿಂಗ್ಸ್ ನಾಲ್ಕನೇ ಸ್ಥಾನ ಪಡೆದುಕೊಳ್ಳಲಿದ್ದು ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲಿದೆ.

ಸನ್ ರೈಸರ್ಸ್ ಹೈದರಾಬಾದ್

ಸನ್ ರೈಸರ್ಸ್ ಹೈದರಾಬಾದ್

ಸತತವಾಗಿ ಐದು ಪಂದ್ಯಗಳಲ್ಲಿ ಗೆದ್ದು ನಂತರ ಇದೀಗ ನಾಲ್ಕು ಪಂದ್ಯಗಳಲ್ಲಿ ಸೋತು ಮಂಕಾಗಿರುವ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇಲ್ಲಿಯವರೆಗೂ 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಮಾತ್ರ ಗೆದ್ದು 10 ಅಂಕಗಳನ್ನು ಹೊಂದಿದ್ದು, ಇನ್ನುಳಿದ ತನ್ನ ಮೂರು ಪಂದ್ಯಗಳಲ್ಲಿ ಗೆದ್ದರೆ 16 ಅಂಕಗಳನ್ನು ಮುಟ್ಟಲಿದೆ. ಇನ್ನು ಸನ್ ರೈಸರ್ಸ್ ಪ್ಲೇ ಆಫ್ ಪ್ರವೇಶಿಸಬೇಕೆಂದರೆ ಟಾಪ್ 3 ಸ್ಥಾನಗಳಲ್ಲಿರುವ ತಂಡಗಳು ಉಳಿದ ಪಂದ್ಯಗಳನ್ನು ಗೆಲ್ಲುವುದರ ಜೊತೆಗೆ ಸನ್ ರೈಸರ್ಸ್ ತನ್ನ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಉಳಿದ ಪಂದ್ಯಗಳನ್ನು ಸೋಲಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಹಾದಿ ಕಠಿಣವಾಗಿಬಿಟ್ಟಿದೆ. 13 ಪಂದ್ಯಗಳನ್ನಾಡಿ 14 ಪಂದ್ಯಗಳಲ್ಲಿ ಗೆದ್ದಿರುವ ಆರ್‌ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಕಡ್ಡಾಯವಾಗಿ ಗೆಲ್ಲಬೇಕಿದೆ. ಇನ್ನು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಉಳಿದ ಪಂದ್ಯಗಳಲ್ಲಿ ಗೆದ್ದರೆ ಹಾಗೂ ತನ್ನಷ್ಟೇ ಪ್ಲೇಆಫ್ ಪ್ರವೇಶದ ಅರ್ಹತೆಯನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಉಳಿದ ಪಂದ್ಯಗಳಲ್ಲಿ ಸೋತರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಲಿದೆ. ಇನ್ನು ಪಂಜಾಬ್ ಕಿಂಗ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ಆರ್‌ಸಿಬಿಯಷ್ಟೇ ಅಂಕಗಳನ್ನು ಹೊಂದಿದರೆ ತಂಡ ಕಡಿಮೆ ನೆಟ್ ರನ್ ರೇಟ್ ಹೊಂದಿರುವ ಕಾರಣ ಪ್ಲೇಆಫ್ ಪ್ರವೇಶಿಸದೇ ಹೊರಬೀಳಲಿದೆ.

ರಾಜಸ್ಥಾನ್ ರಾಯಲ್ಸ್

ರಾಜಸ್ಥಾನ್ ರಾಯಲ್ಸ್

ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿ 14 ಅಂಕಗಳನ್ನು ಪಡೆದುಕೊಂಡಿರುವ ರಾಜಸ್ಥಾನ್ ರಾಯಲ್ಸ್ ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆದ್ದರೆ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಲಿದೆ ಹಾಗೂ ಉಳಿದ ಎರಡು ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆದ್ದರೂ ಉತ್ತಮ ನೆಟ್ ರನ್ ರೇಟ್ ತಂಡವನ್ನು ಪ್ಲೇಆಫ್ ಸುತ್ತಿಗೆ ಏರಲು ಸಹಾಯ ಮಾಡಲಿದೆ. ಆದರೆ ರಾಜಸ್ಥಾನ್ ರಾಯಲ್ಸ್ ಉಳಿದ ಎರಡೂ ಪಂದ್ಯಗಳನ್ನು ಸೋತರೆ ತಂಡ ಪ್ಲೇಆಫ್ ಪ್ರವೇಶಿಸುವಲ್ಲಿ ಎಡವಲಿದೆ.

ಲಕ್ನೋ ಸೂಪರ್ ಜೈಂಟ್ಸ್

ಲಕ್ನೋ ಸೂಪರ್ ಜೈಂಟ್ಸ್

ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿದ್ದು 16 ಅಂಕಗಳನ್ನು ಪಡೆದುಕೊಂಡಿದೆ. ಹೀಗಾಗಿ ಉಳಿದ ಎರಡು ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯದಲ್ಲಿ ಗೆದ್ದರೂ ಲಕ್ನೋ ಸೂಪರ್ ಜೈಂಟ್ಸ್ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಲಿದೆ.

ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿ 12 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ಇನ್ನುಳಿದ ಎರಡು ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಿದೆ. ಹೀಗೆ ಡೆಲ್ಲಿ ಕ್ಯಾಪಿಟಲ್ಸ್ ಉಳಿದ ಪಂದ್ಯಗಳಲ್ಲಿ ಗೆದ್ದರೆ ಇತರೆ ತಂಡಗಳಿಗಿಂತ ಉತ್ತಮ ನೆಟ್ ರನ್ ರೇಟ್ ಹೊಂದಿರುವ ಕಾರಣ ಸುಲಭವಾಗಿ ಪ್ಲೇಆಫ್ ತಲುಪಲಿದೆ.

Story first published: Saturday, May 14, 2022, 19:26 [IST]
Other articles published on May 14, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+