ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB Playoff Chances 2022 : ಗುಜರಾತ್ ವಿರುದ್ಧ ಗೆದ್ದರೂ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸುವುದು ಅನುಮಾನ! ಕಾರಣವೇನು?

IPL 2022 playoffs scenario: RCBs playoff entry is doubtful even if it wins against Gujarat Titans

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 67ನೇ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಟೇಬಲ್ ಟಾಪರ್ಸ್ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಾಲೇ ಯಶಸ್ವಿಯಾಗಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿರುವ ಗುಜರಾತ್ ಟೈಟನ್ಸ್ ತಂಡಕ್ಕಿಂತ ಪ್ಲೇಆಫ್ ರೇಸ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಬಹುಮುಖ್ಯದ್ದಾಗಿದೆ.

RCB vs GT: ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ಈ ಆಟಗಾರನದ್ದೇ ದೊಡ್ಡ ಚಿಂತೆ!RCB vs GT: ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ಈ ಆಟಗಾರನದ್ದೇ ದೊಡ್ಡ ಚಿಂತೆ!

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 13 ಪಂದ್ಯಗಳನ್ನಾಡಿ 10 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 20 ಅಂಕಗಳನ್ನು ಪಡೆದುಕೊಂಡಿರುವ ಗುಜರಾತ್ ಟೈಟನ್ಸ್ ಈ ಬಾರಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿದ್ದರೆ, ಇತ್ತೀಚಿಗಷ್ಟೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ ಪ್ಲೇ ಆಫ್ ಸುತ್ತಿಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದೆ. ಹೀಗೆ ಈ ಎರಡು ತಂಡಗಳು ಪ್ಲೇಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡ ನಂತರ ಮೂರನೇ ಮತ್ತು ನಾಲ್ಕನೇ ತಂಡಗಳಾಗಿ ಯಾವ ತಂಡಗಳು ಅರ್ಹತೆ ಪಡೆದುಕೊಳ್ಳಲಿವೆ ಎಂಬ ಕುತೂಹಲ ಹೆಚ್ಚಾಗಿದ್ದು, ಮೂರನೇ ತಂಡವಾಗಿ ರಾಜಸ್ಥಾನ್ ರಾಯಲ್ಸ್ ಪ್ರವೇಶ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ನಾಲ್ಕನೇ ಪ್ರವೇಶಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

IPL 2022: ಟೂರ್ನಿಯಿಂದ ಕೇನ್ ವಿಲಿಯಮ್ಸನ್ ಔಟ್; ಈ ಮೂವರಲ್ಲಿ ಯಾರಾಗ್ತಾರೆ ಸನ್‌ರೈಸರ್ಸ್ ನಾಯಕ?IPL 2022: ಟೂರ್ನಿಯಿಂದ ಕೇನ್ ವಿಲಿಯಮ್ಸನ್ ಔಟ್; ಈ ಮೂವರಲ್ಲಿ ಯಾರಾಗ್ತಾರೆ ಸನ್‌ರೈಸರ್ಸ್ ನಾಯಕ?

ಇನ್ನು ಪ್ಲೇಆಫ್ ರೇಸ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ( ಮೇ 19 ) ನಡೆಯಲಿರುವ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಆರ್‌ಸಿಬಿ ಪ್ಲೇಆಫ್ ಆಸೆಯೇನೋ ಜೀವಂತವಾಗಿ ಉಳಿದುಕೊಳ್ಳಲಿದೆಯೇ ಹೊರತು ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸುವುದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದರೂ ತಂಡದ ಪ್ಲೇಆಫ್ ಪ್ರವೇಶ ಅನುಮಾನ ಎನ್ನಬಹುದು. ಹೌದು, ಈ ಕೆಳಕಂಡಂತೆ ನಡೆದರೆ ಆರ್‌ಸಿಬಿ ಜಯದ ಹೊರತಾಗಿಯೂ ಪ್ಲೇಆಫ್ ಪ್ರವೇಶಿಸುವಲ್ಲಿ ವಿಫಲವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಆರ್‌ಸಿಬಿ ಗೆದ್ದರೂ ಪ್ಲೇಆಫ್ ಅನುಮಾನವೇಕೆ?

ಆರ್‌ಸಿಬಿ ಗೆದ್ದರೂ ಪ್ಲೇಆಫ್ ಅನುಮಾನವೇಕೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದು, ಶನಿವಾರ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶದ ಕನಸಿಗೆ ತಣ್ಣೀರು ಬೀಳಲಿದೆ. ಹೌದು, ಅಂಕಪಟ್ಟಿಯಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸರಿಸಮನಾದ ಅಂಕಗಳನ್ನು ಹೊಂದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಆರ್‌ಸಿಬಿಗಿಂತ ಹೆಚ್ಚಿನ ನೆಟ್ ರನ್ ರೇಟ್‌ನ್ನು ಹೊಂದಿದೆ. ಹೀಗಾಗಿ ಎರಡೂ ತಂಡಗಳೂ ತಮ್ಮ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಆರ್‌ಸಿಬಿಗಿಂತ ಡೆಲ್ಲಿ ಕ್ಯಾಪಿಟಲ್ಸ್ ಹೆಚ್ಚಿನ ನೆಟ್ ರನ್ ರೇಟ್ ಹೊಂದುವ ಮೂಲಕ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಿಂದ ಹೊರಬೀಳಲಿದೆ.

ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇದೊಂದೇ ಸುಲಭ ಮಾರ್ಗ

ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಇದೊಂದೇ ಸುಲಭ ಮಾರ್ಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದು, ಶನಿವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ನಡೆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ಅಂಕಗಳನ್ನು ಪಡೆದರೆ, ಗುಜರಾತ್ ಟೈಟನ್ಸ್ 14 ಅಂಕಗಳನ್ನು ಪಡೆಯಲಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಲು ಇರುವುದು ಇದೊಂದೇ ಸುಲಭ ಮಾರ್ಗ ಎನ್ನಬಹುದು.

ರಷ್ಯಾ ಜೊತೆಗಿನ ಭಾರತದ ಬಂಧ ಬಿಡಿಸಲು ಅಮೆರಿಕದಿಂದ ಭಾರತಕ್ಕೆ ಬಿಗ್ ಆಫರ್ | Oneindia Kannada
ಗುಜರಾತ್ ವಿರುದ್ಧ ಸೋತರೆ ಆರ್‌ಸಿಬಿ ಕನಸೇ ಅಂತ್ಯ

ಗುಜರಾತ್ ವಿರುದ್ಧ ಸೋತರೆ ಆರ್‌ಸಿಬಿ ಕನಸೇ ಅಂತ್ಯ

ಇನ್ನು ಇಂದು ಗುಜರಾತ್ ಟೈಟನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತರೆ ತಂಡದ ಪ್ಲೇಆಫ್ ಪ್ರವೇಶಿಸುವ ಕನಸು ಬಹುತೇಕ ಅಂತ್ಯವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ವಿರುದ್ಧ ಸೋತು, ಶನಿವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಆರ್‌ಸಿಬಿ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.

Story first published: Thursday, May 19, 2022, 19:10 [IST]
Other articles published on May 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X