ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

GT vs RCB: ಗುಜರಾತ್ ವಿರುದ್ಧ ಆರ್‌ಸಿಬಿ ಸೋತರೆ ಈ ತಂಡ ಪ್ಲೇಆಫ್‌ಗೆ; ಗೆದ್ದರೆ ಈ 2 ತಂಡ ಮನೆಗೆ!

IPL 2022 Playoffs Scenario: SRH and PBKS will be eliminated from tournament if RCB wins over GT

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ತಲುಪಿದ್ದು, ಲೀಗ್ ಹಂತದ ಕೊನೆಯ 4 ಪಂದ್ಯಗಳು ಇದೀಗ ಪ್ಲೇಆಫ್ ಪ್ರವೇಶಿಸಲಿರುವ ಕೊನೆಯ ಎರಡು ತಂಡಗಳ ಮೇಲೆ ಭಾರೀ ಪ್ರಭಾವವನ್ನು ಬೀರುತ್ತಿವೆ. ಅದರಲ್ಲಿ ಇಂದು ( ಮೇ 19 ) ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಮುಖಾಮುಖಿ ಪಂದ್ಯ ಕೂಡ ಪ್ರಮುಖದ್ದಾಗಿದ್ದು, ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಪ್ರವೇಶವನ್ನು ನಿರ್ಧರಿಸಲಿದೆ.

RCB vs GT: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರಿವರುRCB vs GT: ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಬಹುದಾದ ಮೂವರು ಆಟಗಾರರಿವರು

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ 13 ಪಂದ್ಯಗಳಲ್ಲಿ ಜಯ ಕಣಕ್ಕಿಳಿದಿದ್ದು, 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಇಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದರೆ 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಲಿದ್ದು, ನಾಲ್ಕನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಐದನೇ ಸ್ಥಾನಕ್ಕೆ ಕುಸಿಯಲಿದೆ. ಇನ್ನು ಗುಜರಾತ್ ಟೈಟನ್ಸ್ ಈಗಾಗಲೇ 20 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಆಕ್ರಮಿಸಿಕೊಂಡಿದ್ದು, ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ. ಹೀಗಾಗಿ ಇತ್ತಂಡಗಳ ನಡುವಿನ ಈ ಪಂದ್ಯ ಗುಜರಾತ್ ಟೈಟನ್ಸ್ ತಂಡಕ್ಕಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೆಚ್ಚು ಮುಖ್ಯವಾಗಿದ್ದು, ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.

CSK vs RR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?CSK vs RR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ ಸಾಧಿಸಿದರೆ ಹಾಗೂ ಶನಿವಾರ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಿಂದ ಹೊರಬೀಳಲಿದ್ದು, ಫಾಫ್ ಡು ಪ್ಲೆಸಿಸ್ ಬಳಗ ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಈ ಸೆಣಸಾಟದ ಫಲಿತಾಂಶ ಕೇವಲ ಒಂದು ತಂಡದ ಮೇಲೆ ಪರಿಣಾಮ ಬೀರದೇ ಇತರೆ ತಂಡಗಳ ಪ್ಲೇಆಫ್ ಪ್ರವೇಶದ ಮೇಲೂ ಸಹ ಪ್ರಭಾವವನ್ನು ಬೀರಲಿದೆ. ಹೌದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದರೆ ಎರಡು ತಂಡಗಳು ಟೂರ್ನಿಯಿಂದಲೇ ಹೊರಬೀಳಲಿದ್ದು, ಒಂದುವೇಳೆ ಆರ್‌ಸಿಬಿ ಸೋತರೆ ತಂಡವೊಂದು ನೇರವಾಗಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ. ಈ ಕುರಿತಾದ ವಿವರ ಈ ಕೆಳಕಂಡಂತಿದೆ.

ಆರ್‌ಸಿಬಿ ಗೆದ್ದರೆ ಈ ಎರಡೂ ತಂಡಗಳು ಟೂರ್ನಿಯಿಂದ ಹೊರಕ್ಕೆ

ಆರ್‌ಸಿಬಿ ಗೆದ್ದರೆ ಈ ಎರಡೂ ತಂಡಗಳು ಟೂರ್ನಿಯಿಂದ ಹೊರಕ್ಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್‌ ಟೈಟನ್ಸ್ ನಡುವಿನ ಮುಖಾಮುಖಿಯಲ್ಲಿ ಫಾಫ್ ಡು ಪ್ಲೆಸಿಸ್ ಬಳಗ ಗೆದ್ದರೆ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ಪ್ಲೇಆಫ್ ಕನಸು ನುಚ್ಚು ನೂರಾಗಲಿದೆ. ಹೌದು, ಈ ಗೆಲುವಿನೊಂದಿಗೆ ಆರ್‌ಸಿಬಿ 16 ಅಂಕಗಳನ್ನು ತಲುಪಲಿದ್ದು, ತಲಾ 12 ಅಂಕಗಳನ್ನು ಹೊಂದಿರುವ ಸನ್ ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ತಮ್ಮ ಅಂತಿಮ ಪಂದ್ಯದಲ್ಲಿ ಗೆದ್ದರೂ ಅಂತಿಮವಾಗಿ 14 ಅಂಕಗಳನ್ನು ಮುಟ್ಟಲಿದ್ದು ಪ್ಲೇಆಫ್ ಪ್ರವೇಶಿಸಲು ಬೇಕಾದ ಅಂಕಗಳು ಇಲ್ಲದೇ ಟೂರ್ನಿಯಿಂದ ಹೊರಬೀಳಲಿವೆ. ಒಂದುವೇಳೆ ಆರ್‌ಸಿಬಿ ಸೋತರೆ ಈ ತಂಡಗಳ ಪ್ಲೇಆಫ್ ಕನಸು ಜೀವಂತವಾಗಿ ಉಳಿದುಕೊಳ್ಳಲಿದೆ.

ಆರ್‌ಸಿಬಿ ಸೋತರೆ ಈ ತಂಡ ಪ್ಲೇಆಫ್‌ಗೆ

ಆರ್‌ಸಿಬಿ ಸೋತರೆ ಈ ತಂಡ ಪ್ಲೇಆಫ್‌ಗೆ

ಇನ್ನು ಗುಜರಾತ್ ಟೈಟನ್ಸ್ ವಿರುದ್ಧದ ಸೆಣಸಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತರೆ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ. ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಈ ಸೋಲಿನ ಮೂಲಕ ಪ್ಲೇಆಫ್ ಆಸೆಯನ್ನು ತ್ಯಜಿಸಬೇಕಾಗುತ್ತದೆ.

Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada
ಆರ್‌ಸಿಬಿ ಸೋಲು ಡೆಲ್ಲಿ ಕ್ಯಾಪಿಟಲ್ಸ್‌ಗೂ ಲಾಭ

ಆರ್‌ಸಿಬಿ ಸೋಲು ಡೆಲ್ಲಿ ಕ್ಯಾಪಿಟಲ್ಸ್‌ಗೂ ಲಾಭ

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಲಾ 14 ಅಂಕಗಳನ್ನು ಪಡೆದುಕೊಂಡಿರುವ ಕಾರಣ ಎರಡೂ ತಂಡಗಳ ನಡುವೆ ಪ್ಲೇಆಫ್ ಸುತ್ತಿಗಾಗಿ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತರೆ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಹಾದಿ ಸುಗಮವಾಗಲಿದ್ದು, ಡೆಲ್ಲಿ ತನ್ನ ಮುಂದಿನ ಪಂದ್ಯದಲ್ಲಿ ಗೆದ್ದರೆ ಅಥವಾ ನೆಟ್ ರನ್ ರೇಟ್ ಉತ್ತಮ ಹಂತದಲ್ಲಿರುವ ಹಾಗೆ ಸೋತರೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್‌ಗೆ ಲಗ್ಗೆ ಇಡಲಿದೆ. ಹೀಗಾಗಿ ಗುಜರಾತ್ ವಿರುದ್ಧ ಆರ್‌ಸಿಬಿ ಸೋತರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಲಾಭವಾಗಲಿದೆ.

Story first published: Friday, May 20, 2022, 9:37 [IST]
Other articles published on May 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X