IPL 2022 Points Table: ಅಂಕಪಟ್ಟಿಯಲ್ಲಿ ಮೇಲೇರಿದ ಆರ್‌ಸಿಬಿ: ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ!

ಐಪಿಎಲ್‌ನ 15ನೇ ಆವೃತ್ತಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡ ಮೊದಲ ಗೆಲುವು ಸಾಧಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬೌಲರ್‌ಗಳು ಅಮೋಘ ಪ್ರದರ್ಶನ ನೀಡಿದ್ದು ಆರ್‌ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದೆ. ಅದರಲ್ಲೂ ವನಿಂದು ಹಸರಂಗಾ ಹಾಗೂ ಹರ್ಷಲ್ ಪಟೇಲ್ ಬೌಲಿಂಗ್ ಪ್ರದರ್ಶನ ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಇದಕ್ಕೂ ಹಿಂದೆ ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನಡೆಸಿತ್ತು.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಕೆಕೆಆರ್ ಪಡೆ ಕೇವಲ 128 ರನ್‌ಗಳಿಸಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತ್ತು. ಇದನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ ಕೂಡ ಭಾರೀ ಪರದಾಟವನ್ನು ನಡೆಸಿ ಅಂತಿಮ ಓವರ್‌ನಲ್ಲಿ ಗೆಲುವು ಸಾಧಿಸಲು ಯಶಸ್ವಿಯಾಯಿತು.
ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡ ಅಂಕಪಟ್ಟಿಯಲ್ಲಿ ಮೇಲೇರಿದೆ. ಇನ್ನು ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಕೂಡ ಆರ್‌ಸಿಬಿ ಆಟಗಾರರೇ ಅಗ್ರಸ್ಥಾನದಲ್ಲಿರುವುದು ವಿಶೇಷವಾಗಿದೆ.

ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ ಆರ್‌ಸಿಬಿ
ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಮುಖಾಮುಖಿಯಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದ ಬಳಿಕ ಆರ್‌ಸಿಬಿ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಎರಡು ಪಂದ್ಯಗಳನ್ನಾಡಿರುವ ಆರ್‌ಸಿಬಿ ಎರಡು ಅಂಕಗಳನ್ನು ತನ್ನ ಖಾತೆಯಲ್ಲಿ ಹೊಂದಿದ್ದು -0.048 ನೆಟ್ ರನ್‌ರೇಟ್ ಹೊಂದಿದೆ. ಇನ್ನು ಆರ್‌ಸಿಬಿ ವಿರುದ್ಧ ಸೋಲು ಅನುಭವಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ಆರ್‌ಸಿಬಿ ತಂಡಕ್ಕಿಂತ ಒಂದು ಸ್ಥಾನ ಮೇಲಿದ್ದು ರನ್‌ರೆಟ್‌ನಲ್ಲಿ ಮುಂದಿದೆ. ರಾಜಸ್ಥಾನ್ ರಾಯಲ್ಸ್ ಅಗ್ರಸ್ಥಾನದಲ್ಲಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡ 2ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ಮೂರನೇ ಸ್ಥಾನದಲ್ಲಿ ಹಾಗೂ ಗುಜರಾತ್ ಟೈಟನ್ಸ್ 4ನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ವಿವರ
ಮೊದಲ ಪಂದ್ಯದಲ್ಲಿ ಭರ್ಜರಿ 88 ರನ್‌ಗಳಿಸಿ ಮಿಂಚಿದ್ದ ಫಾಫ್ ಡು ಪ್ಲೆಸಿಸ್ ಎರಡನೇ ಪಂದ್ಯದಲ್ಲಿ 5 ರನ್‌ಗಳಿಗೆ ಔಟ್ ಆಗುವ ಮೂಲಕ ವಿಫಲವಾಗಿದ್ದಾರೆ. ಆದರೆ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಸದ್ಯ ಫಾಫ್ ಡು ಪ್ಲೆಸಿಸ್ ಮುಂದುವರಿದಿದ್ದಾರೆ. ಎರಡನೇ ಸ್ಥಾನದಲ್ಲಿರುವ ಇಶಾನ್ ಕಿಶನ್ 81 ರನ್‌ಗಳಿಸಿದ್ದು ಮುಂದಿನ ಪಂದ್ಯದಲ್ಲಿ ಆರೆಂಜ್ ಕ್ಯಾಪ್ ಮೇಲೆ ಕಣ್ಣಿಟ್ಟಿದ್ದಾರೆ.
ಆರೆಂಜ್‌ಕ್ಯಾಪ್‌ನ ಸಂಪೂರ್ಣ ಪಟ್ಟಿಗೆ ಕ್ಲಿಕ್ ಮಾಡಿ

ಪರ್ಪಲ್ ಕ್ಯಾಪ್ ಪಟ್ಟಿ
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಆರ್‌ಸಿಬಿ ತಂಡದ ಪ್ರಮುಖ ಆಲ್‌ರೌಂಡರ್ ವನಿಂದು ಹಸರಂಗ ಮುಂದಿದ್ದಾರೆ. ಮೊದಲ ಪಂದ್ಯದಲ್ಲಿ ನಿರಾಸೆ ಮೂಡಿಸಿದ್ದ ಹಸರಂಗ ಎರಡನೇ ಪಂದ್ಯದಲ್ಲಿ 4 ವಿಕೆಟ್ ಕೀಳುವ ಮೂಲಕ ಪಂದ್ಯದಲ್ಲಿ ಆರ್‌ಸಿಬಿ ಮುನ್ನಡೆಗೆ ಕಾರಣವಾದರು. ಹೀಗಾಗಿ ಎರಡು ಪಂದ್ಯಗಳಲ್ಲಿ ಒಟ್ಟು 5 ವಿಕೆಟ್ ಪಡೆದಿರುವ ಹಸರಂಗ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ತಲಾ ನಾಲ್ಕು ವಿಕೆಟ್ ಪಡೆದಿರುವ ಉಮೇಶ್ ಯಾದವ್ ಹಾಗೂ ಆಕಾಶ್ ದೀಪ್ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications