IPL 2022 Points Table: RR vs SRH ಪಂದ್ಯ ಮುಗಿದ ನಂತರ ಅಂಕಪಟ್ಟಿ, ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮಾರ್ಚ್ 26ರಿಂದ ಆರಂಭವಾಗಿದ್ದು, ಮಾರ್ಚ್ 29ರಂದು ಟೂರ್ನಿಯ ಐದನೇ ಪಂದ್ಯ ಮುಕ್ತಾಯವಾದ ಸಮಯಕ್ಕೆ ಟೂರ್ನಿಯಲ್ಲಿ ಭಾಗವಹಿಸಿರುವ ಎಲ್ಲಾ ಹತ್ತು ತಂಡಗಳೂ ತಲಾ ಒಂದೊಂದು ಪಂದ್ಯವನ್ನು ಆಡಿ ಮುಗಿಸಿವೆ. ಈ ಪೈಕಿ ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟನ್ಸ್ ತಮ್ಮ ಚೊಚ್ಚಲ ಪಂದ್ಯಗಳಲ್ಲಿ ಗೆದ್ದು ಶುಭಾರಂಭವನ್ನು ಮಾಡಿದ್ದರೆ, ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಟೂರ್ನಿಯಲ್ಲಿನ ತಮ್ಮ ಚೊಚ್ಚಲ ಪಂದ್ಯಗಳಲ್ಲಿ ಸೋತು ಕಳಪೆ ಆರಂಭವನ್ನು ಪಡೆದುಕೊಂಡಿವೆ.
ಇನ್ನು ಟೂರ್ನಿಯ ಐದನೇ ಪಂದ್ಯ ಮಾರ್ಚ್ 29ರ ಮಂಗಳವಾರದಂದು ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಸೆಣಸಾಟ ನಡೆಸಿದವು ಹಾಗೂ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಬೃಹತ್ ಮೊತ್ತದ ಗುರಿಯನ್ನು ನೀಡಿತು. ಇಷ್ಟು ದೊಡ್ಡ ಮೊತ್ತದ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತನ್ನ ಮೊದಲ ಪಂದ್ಯದಲ್ಲಿಯೇ 61 ರನ್‌ಗಳ ಬೃಹತ್ ಗೆಲುವು ದಾಖಲಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹೀಗೆ ಸನ್ ರೈಸರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯವನ್ನು ಸಾಧಿಸಿದೆ. ಈ ಪಂದ್ಯ ಮುಗಿದ ನಂತರ ಟೂರ್ನಿಯ ಅಂಕಪಟ್ಟಿ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಪಟ್ಟಿ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಅಂಕಪಟ್ಟಿ ಹೀಗಿದೆ
ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ನಡುವಿನ ಪಂದ್ಯ ( ಮಾರ್ಚ್ 29 ) ಮುಕ್ತಾಯವಾದ ನಂತರ ಅಂಕಪಟ್ಟಿಯಲ್ಲಿ +3.050 ನೆಟ್ ರನ್ ರೇಟ್ ಹೊಂದಿರುವ ರಾಜಸ್ಥಾನ್ ರಾಯಲ್ಸ್ 2 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ. ಇನ್ನುಳಿದಂತೆ ಆಡಿದ ಮೊದಲ ಪಂದ್ಯ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ಕ್ರಮವಾಗಿ ಎರಡು, ಮೂರು, ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿವೆ. ಇನ್ನು ಟೂರ್ನಿಯಲ್ಲಿನ ತಮ್ಮ ಮೊದಲ ಪಂದ್ಯಗಳಲ್ಲಿ ಸೋತಿರುವ ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಕ್ರಮವಾಗಿ ಆರು, ಏಳು, ಎಂಟು, ಒಂಬತ್ತು ಮತ್ತು ಹತ್ತನೇ ಸ್ಥಾನದಲ್ಲಿವೆ.

ಆರೆಂಜ್ ಕ್ಯಾಪ್ ಟಾಪ್ 5
ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ನಡುವಿನ ಪಂದ್ಯ ಮುಗಿದ ನಂತರವೂ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕ ಫಾಫ್ ಡು ಪ್ಲೆಸಿಸ್ ಅತಿಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಂದ್ಯದಲ್ಲಿ ಅರ್ಧಶತಕಗಳನ್ನು ಸಿಡಿಸಿದ ಸಂಜು ಸ್ಯಾಮ್ಸನ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ಏಡನ್ ಮಾರ್ಕ್ರಮ್ ಆರೆಂಜ್ ಕ್ಯಾಪ್ ಟಾಪ್ ಐದರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗೆ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಮುಕ್ತಾಯಗೊಂಡ ನಂತರ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿನ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ..
1. ಫಾಫ್ ಡು ಪ್ಲೆಸಿಸ್ - ರಾಯಲ್ ಚಾಲೆಂಜರ್ಸ್ ಬೆಂಗಳೂರು - 88 ರನ್
2. ಇಶಾನ್ ಕಿಶನ್ - ಮುಂಬೈ ಇಂಡಿಯನ್ಸ್ - 81 ರನ್
3. ಏಡನ್ ಮಾರ್ಕ್ರಮ್ - ಸನ್ ರೈಸರ್ಸ್ ಹೈದರಾಬಾದ್ - 57 ರನ್
4. ಸಂಜು ಸ್ಯಾಮ್ಸನ್ - ರಾಜಸ್ಥಾನ್ ರಾಯಲ್ಸ್ - 55 ರನ್
5. ದೀಪಕ್ ಹೂಡ - ಲಕ್ನೋ ಸೂಪರ್ ಜೈಂಟ್ಸ್ - 55 ರನ್

ಪರ್ಪಲ್ ಕ್ಯಾಪ್ ಟಾಪ್ 5
ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ನಂತರ ಟೂರ್ನಿಯ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಟಾಪ್ 5 ಆಟಗಾರರ ಪಟ್ಟಿ ಹೀಗಿದೆ.
1. ಕುಲ್‌ದೀಪ್ ಯಾದವ್ - ಡೆಲ್ಲಿ ಕ್ಯಾಪಿಟಲ್ಸ್ - 3 ವಿಕೆಟ್‌ಗಳು
2. ಡ್ವೆಯ್ನ್ ಬ್ರಾವೋ - ಚೆನ್ನೈ ಸೂಪರ್ ಕಿಂಗ್ಸ್ - 3 ವಿಕೆಟ್‌ಗಳು
3. ಯುಜುವೇಂದ್ರ ಚಹಲ್ - ರಾಜಸ್ಥಾನ್ ರಾಯಲ್ಸ್ - 3 ವಿಕೆಟ್‌ಗಳು
4. ಮೊಹಮ್ಮದ್ ಶಮಿ - ಗುಜರಾತ್ ಟೈಟನ್ಸ್ - 3 ವಿಕೆಟ್‌ಗಳು
5. ಬಸಿಲ್ ತಂಪಿ - ಮುಂಬೈ ಇಂಡಿಯನ್ಸ್ - 3 ವಿಕೆಟ್‌ಗಳು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications