IPL 2022: ಲೀಗ್ ಹಂತದ ಅಂತಿಮ ಪಂದ್ಯದ ಬಳಿಕ ಪಾಯಿಂಟ್ಸ್ ಟೇಬಲ್ ಹೀಗಿದೆ!

ಲೀಗ್ ಹಂತದ ಅಂತಿಮ ಪಂದ್ಯ ಮುಕ್ತಾಯವಾಗಿದೆ. ಪಂಜಾಬ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಭರ್ಜರಿಯಾಗಿ ಸೋಲಿಸಿದೆ. ಗೆಲ್ಲಲು 158 ರನ್‌ಗಳ ಸಾಧಾರಣ ಗುರಿ ಪಡೆದಿದ್ದ ಪಂಜಾಬ್ ಕಿಂಗ್ಸ್ ತಂಡ ಇನ್ನೂ ಬಹುತೇಕ ಐದು ಓವರ್‌ಗಳು ಬಾಕಿಯಿರುವಂತೆಯೇ ಗೆಲುವು ಸಾಧಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಮಧ್ಯಮ ಕ್ರಮಾಂಕದ ಸ್ಪೋಟಕ ಆಟಗಾರ ಲಿಯಾಮ್ ಲಿವಿಂಗ್‌ಸ್ಟನ್ ಮತ್ತೊಂದು ಭರ್ಜರಿ ಇನ್ನಿಂಗ್ಸ್ ನೀಡಿದ್ದು ಪಂಜಾಬ್ ಸುಲಭ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ಎರಡು ತಂಡಗಳು ಕೂಡ ಈ ಪಂದ್ಯಕ್ಕೂ ಮುನ್ನವೇ ಐಪಿಎಲ್‌ನ ಲೀಗ್ ಹಂತ ಹೊರಬಿದ್ದಾಗಿತ್ತು. ಹೀಗಾಗಿ ಈ ಪಂದ್ಯ ಕೇವಲ ಔಪಚಾರಿಕ ಪಂದ್ಯವಾಗಿ ಮಾತ್ರವೇ ಉಳಿದುಕೊಂಡಿತ್ತು. ಆದರೆ ಅಂತಿಮ ಪಂದ್ಯವನ್ನು ಗೆದ್ದು ಟೂರ್ನಿಯನ್ನು ಅಂತ್ಯಗೊಳಿಸಬೇಕೆಂಬ ಉದ್ಧೇಶದಿಂದ ಎರಡೂ ತಂಡಗಳು ಕಾದಾಟ ನಡೆಸಿದ್ದು ಇದರಲ್ಲಿ ಪಂಜಾಬ್ ಕಿಂಗ್ಸ್ ತಂಡ ಯಶಸ್ಸು ಸಾಧಿಸಿದೆ.

ಮುಂಬೈ ವಿರುದ್ಧ ಸೋಲು; ಪಂತ್ ನಾಯಕತ್ವದ ಬಗ್ಗೆ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದೇನು?ಮುಂಬೈ ವಿರುದ್ಧ ಸೋಲು; ಪಂತ್ ನಾಯಕತ್ವದ ಬಗ್ಗೆ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದೇನು?

ಈ ಪಂದ್ಯದ ಬಳಿಕ ಅಂಕಪಟ್ಟಿ ಹೇಗಿದೆ, ಆರೆಂಜ್ ಕ್ಯಾಪ್ ಪರ್ಪಲ್ ಕ್ಯಾಪ್‌ ಪಟ್ಟಿಯಲ್ಲಿ ಯಾರಿದ್ದಾರೆ ನೋಡೋಣ.

ಐಪಿಎಲ್ 2022 ಪಾಯಿಂಟ್ಸ್ ಟೇಬಲ್

ಐಪಿಎಲ್ 2022 ಪಾಯಿಂಟ್ಸ್ ಟೇಬಲ್

ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯ ನಿರ್ಗಮನದ ಹಂತದಲ್ಲಿ ಪಂಜಾಬ್ ಪಡೆಗೆ ಸಣ್ಣ ಸಮಾಧಾನ ನೀಡಿದೆ. ಈ ಮೂಲಕ ಮಯಾಂಕ್ ಪಡೆ ಟೂರ್ನಿಯಲ್ಲಿ 6ನೇ ಸ್ಥಾನಿಯಾಗಿ ಅಂತ್ಯಗೊಳಿಸಿದೆ. ಇನ್ನು ಈ ಪಂದ್ಯದಲ್ಲಿ ಸೋಲು ಅನುಭವಿಸಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ 8ನೇ ಸ್ಥಾನವನ್ನು ಪಡೆದುಕೊಂಡಿದೆ. ಟೂರ್ನಿಯ ಅಗ್ರ ನಾಲ್ಕು ತಂಡಗಳಾಗಿ ಕ್ರಮವಾಗಿ ಗುಜರಾತ್ ಟೈಟನ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಲೀಗ್ ಹಂತವನ್ನು ಪೂರ್ಣಗೊಳಿಸಿದ್ದು ಪ್ಲೇಆಪ್‌ಗೆ ಪ್ರವೇಶ ಪಡೆದುಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ನಂತರ ಕ್ರಮವಾಗಿ ಅಂಕಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಯಾರಿಗೆ ಅಗ್ರಸ್ಥಾನ

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಯಾರಿಗೆ ಅಗ್ರಸ್ಥಾನ

ರಾಜಸ್ಥಾನ ರಾಯಲ್ಸ್ ತಂಡದ ಜೋಸ್ ಬಟ್ಲರ್ 14 ಪಂದ್ಯಗಳಲ್ಲಿ 629 ರನ್‌ಗಳೊಂದಿಗೆ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಟಾರ್ ಓಪನರ್‌ಗಳಾದ ಕೆಎಲ್ ರಾಹುಲ್ (537) ಮತ್ತು ಕ್ವಿಂಟನ್ ಡಿ ಕಾಕ್ (502) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ 460 ರನ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ 443 ರನ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

Wankhede Stadiumನಲ್ಲಿ RCB ಅಭಿಮಾನಿಗಳು ಮಾಡಿದ ವಿಶೇಷ ಕೆಲಸ | Oneindia Kannada
ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಯಾರಿಗೆ ಮುನ್ನಡೆ

ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಯಾರಿಗೆ ಮುನ್ನಡೆ

ರಾಜಸ್ಥಾನ ರಾಯಲ್ಸ್ ತಂಡದ ಯುಜ್ವೇಂದ್ರ ಚಹಲ್ 14 ಪಂದ್ಯಗಳಲ್ಲಿ 26 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅವರ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ನರ್ ವನಿಂದು ಹಸರಂಗಾ (24) ಇದ್ದರೆ, ಮೂರನೇ ಸ್ಥಾನದಲ್ಲಿ ಕಗಿಸೊ ರಬಾಡ (22) ಇದ್ದಾರೆ. ಉಮ್ರಾನ್ ಮಲಿಕ್ (22) ಕ್ರಮವಾಗಿ ನಾಲ್ಕುನೇ ಸ್ಥಾನದಲ್ಲಿದ್ದರೆ ಮತ್ತು ಐದನೇ ಸ್ಥಾನದಲ್ಲಿ ಕುಲದೀಪ್ ಯಾದವ್ (21) ಇದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Sunday, May 22, 2022, 23:57 [IST]
Other articles published on May 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X