IPL 2022 : ಗುಜರಾತ್ ಗೆದ್ದ ಬಳಿಕ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ, ಆರೆಂಜ್ ಕ್ಯಾಪ್‌ಗಾಗಿ ಈ ಇಬ್ಬರ ನಡುವೆ ಶುರು ಪೈಪೋಟಿ!

ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಮಾರ್ಚ್ 26ರ ಶನಿವಾರದಂದು ಆರಂಭವಾಗಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ನಡೆಯುತ್ತಿದ್ದು, ಏಪ್ರಿಲ್ 2ರ ಶನಿವಾರದವರೆಗೆ ಒಟ್ಟು 10 ಲೀಗ್ ಪಂದ್ಯಗಳು ನಡೆದಿವೆ.
ಏಪ್ರಿಲ್ 2ರ ಶನಿವಾರದಂದು ಒಟ್ಟು 2 ಪಂದ್ಯಗಳು ನಡೆದಿದ್ದು, ಮೊದಲನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಿದರೆ, ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾದವು.
ಇನ್ನು ಈ ಪಂದ್ಯಗಳ ಪೈಕಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ತಾನ್ ರಾಯಲ್ಸ್ ಸೋಲುಣಿಸಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಟೂರ್ನಿಯಲ್ಲಿ ತಮ್ಮ ಸತತ ಎರಡನೇ ಜಯವನ್ನು ದಾಖಲಿಸಿದರೆ, ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿನ ತನ್ನ ಎರಡನೇ ಸೋಲನ್ನು ಕಂಡಿದೆ. ಇನ್ನು ನಂತರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಸೆಣಸಾಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಹಾರ್ದಿಕ್ ಪಾಂಡ್ಯ ನಾಯಕತ್ವದ ನೂತನ ತಂಡ ಗುಜರಾತ್ ಟೈಟಾನ್ಸ್ ಗೆದ್ದು ಬೀಗಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿನ ತನ್ನ ಸತತ ಎರಡನೇ ಜಯವನ್ನು ದಾಖಲಿಸಿದರೆ, ಮೊದಲನೇ ಪಂದ್ಯ ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ ಸೋತಿದೆ. ಹೀಗೆ ಏಪ್ರಿಲ್ 2ರ ಶನಿವಾರದ ಪಂದ್ಯಗಳು ಮುಕ್ತಾಯಗೊಂಡ ನಂತರ ಅಂಕಪಟ್ಟಿಯಲ್ಲಿ ಆಗಿರುವ ಬದಲಾವಣೆ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಪಟ್ಟಿಗಳಲ್ಲಿ ಆಗಿರುವ ಬದಲಾವಣೆಯ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ..

ಅಂಕಪಟ್ಟಿಯಲ್ಲಿ ರಾಜಸ್ಥಾನ್ ಟಾಪ್
ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಸತತ ಎರಡನೇ ಜಯವನ್ನು ಕಂಡ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ದ್ವಿತೀಯ ಸ್ಥಾನಕ್ಕೆ ತಳ್ಳಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಕಂಡಿರುವ ಗುಜರಾತ್ ಟೈಟನ್ಸ್ ಮೂರನೇ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್‌ಗಾಗಿ ಪೈಪೋಟಿ ಶುರು
ಏಪ್ರಿಲ್ 2ರ ಶನಿವಾರದಂದು ನಡೆದ ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್ ಪಂದ್ಯಗಳು ಮುಕ್ತಾಯವಾದ ನಂತರ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದೆ. ಈ ಪಂದ್ಯಗಳಿಗೂ ಮುನ್ನ 95 ರನ್ ಗಳಿಸಿ ಅಗ್ರ ಸ್ಥಾನದಲ್ಲಿದ್ದ ಆಂಡ್ರೆ ರಸೆಲ್ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ ಜೋಸ್ ಬಟ್ಲರ್ 135 ರನ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರೆ, 135 ರನ್ ಗಳಿಸಿರುವ ಮತ್ತೋರ್ವ ಆಟಗಾರ ಇಶಾನ್ ಕಿಶನ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಹೀಗೆ ಜೋಸ್ ಬಟ್ಲರ್ ಮತ್ತು ಇಶಾನ್ ಕಿಶನ್ ನಡುವೆ ಸದ್ಯ ಆರೆಂಜ್ ಕ್ಯಾಪ್‌ಗಾಗಿ ಪೈಪೋಟಿ ಏರ್ಪಟ್ಟಿದೆ.

ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಟಾಪ್ 5 ಸೇರಿದ ಚಹಲ್, ಮೊಹಮ್ಮದ್ ಶಮಿ
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಪಡೆದ ಗುಜರಾತ್ ಟೈಟಾನ್ಸ್ ಬೌಲರ್ ಮೊಹಮ್ಮದ್ ಶಮಿ ಈ ಬಾರಿಯ ಟೂರ್ನಿಯಲ್ಲಿ ಒಟ್ಟು 5 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದರೆ, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದ ರಾಜಸ್ಥಾನ್ ರಾಯಲ್ಸ್ ತಂಡದ ಯುಜುವೇಂದ್ರ ಚಹಲ್ ಟೂರ್ನಿಯಲ್ಲಿ 5 ವಿಕೆಟ್ ಹೊಂದಿ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ವಿಕೆಟ್ ಪಡೆದು ಕೊಂಡಿರುವ ಉಮೇಶ್ ಯಾದವ್ ಅಗ್ರಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications