IPL 2022 Points Table: ಪಂದ್ಯದ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್? ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಖತ್ ಸದ್ದು ಮಾಡುತ್ತಿದ್ದು, ಟೂರ್ನಿಯ ಲೀಗ್ ಹಂತದ ಪಂದ್ಯಗಳು ಆರಂಭಗೊಂಡು ಹತ್ತು ತಂಡಗಳ ನಡುವೆ ಸೆಣಸಾಟ ಆರಂಭಗೊಂಡಿದೆ. ಇನ್ನು ಟೂರ್ನಿಯಲ್ಲಿ ಏಪ್ರಿಲ್ 1ರ ಶುಕ್ರವಾರದವರೆಗೂ ಒಟ್ಟು 8 ಪಂದ್ಯಗಳು ನಡೆದಿದ್ದು, ಅಂಕಪಟ್ಟಿಯಲ್ಲಿ ಈಗಾಗಲೇ ಅಗ್ರಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಇಲ್ಲಿಯವರೆಗೆ ಲಕ್ನೋ ಸೂಪರ್ ಜೈಂಟ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ತಲಾ ಎರಡು ಪಂದ್ಯಗಳನ್ನಾಡಿ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಎರಡು ಪಂದ್ಯಗಳನ್ನಾಡಿ ಎರಡರಲ್ಲಿಯೂ ಸೋಲನ್ನು ಕಂಡಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಾತ್ರ ಇಲ್ಲಿಯವರೆಗೆ ಒಟ್ಟು ಮೂರು ಪಂದ್ಯಗಳನ್ನಾಡಿದ್ದು, ಈ ಪೈಕಿ ಎರಡು ಪಂದ್ಯಗಳನ್ನಾಡಿ ಉಳಿದ ಪಂದ್ಯವೊಂದರಲ್ಲಿ ಸೋಲುಂಡಿದೆ. ಹಾಗೂ ಈ ತಂಡಗಳನ್ನು ಹೊರತುಪಡಿಸಿ ಉಳಿದ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿವೆ. ಇನ್ನು ಏಪ್ರಿಲ್ 1ರ ಶುಕ್ರವಾರದಂದು ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಪಂದ್ಯ ನಡೆದಿದ್ದು, ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ತಂಡದ ಬೌಲಿಂಗ್ ವಿಭಾಗದಲ್ಲಿ ಉಮೇಶ್ ಯಾದವ್ ಉತ್ತಮ ಪ್ರದರ್ಶನ ನೀಡಿದರೆ, ಬ್ಯಾಟಿಂಗ್ ವಿಭಾಗದಲ್ಲಿ ಆಂಡ್ರೆ ರಸೆಲ್ ಅಬ್ಬರಿಸಿದರು.
ಹೀಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಮಿಂಚಿದ ಕೋಲ್ಕತ್ತಾ ನೈಟ್ ರೈಡರ್ಸ್ ಈ ಬಾರಿಯ ಟೂರ್ನಿಯಲ್ಲಿ ಎರಡನೇ ಜಯ ಸಾಧಿಸಿದ್ದು, ಶ್ರೇಯಸ್ ಐಯ್ಯರ್ ತಮ್ಮ ನಾಯಕತ್ವದಲ್ಲಿ ಸಾಲು ಸಾಲು ಗೆಲುವನ್ನು ಸಾಧಿಸಿ ಮಿಂಚುತ್ತಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸಿದ ನಂತರ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಯಾಗಿದ್ದು, ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿಯೂ ಹೊಸ ಆಟಗಾರರು ಅಗ್ರಸ್ಥಾನಕ್ಕೇರಿದ್ದಾರೆ. ಹೀಗೆ ಈ ಪಂದ್ಯ ಮುಕ್ತಾಯಗೊಂಡ ನಂತರ ಅಂಕಪಟ್ಟಿ, ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಅಂಕಪಟ್ಟಿ
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಆರಂಭಕ್ಕೂ ಮುನ್ನ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯ ಮುಕ್ತಾಯದ ನಂತರ ಅಗ್ರಸ್ಥಾನಕ್ಕೇರಿದೆ. ಒಟ್ಟು 3 ಪಂದ್ಯಗಳನ್ನಾಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಎರಡರಲ್ಲಿ ಗೆದ್ದು, ಉಳಿದೊಂದು ಪಂದ್ಯದಲ್ಲಿ ಸೋತು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಒಂದನೇ ಸ್ಥಾನಕ್ಕೇರಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದು ಅಗ್ರಸ್ಥಾನಕ್ಕೇರಿದ್ದ ರಾಜಸ್ಥಾನ್ ರಾಯಲ್ಸ್ ಇದೀಗ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಮೂರನೇ ಸ್ಥಾನ ಮತ್ತು ಗುಜರಾತ್ ಟೈಟನ್ಸ್ ನಾಲ್ಕನೇ ಸ್ಥಾನದಲ್ಲಿದೆ. ಇನ್ನುಳಿದಂತೆ ಎರಡು ಪಂದ್ಯಗಳನ್ನಾಡಿ ಒಂದರಲ್ಲಿ ಗೆದ್ದು, ಉಳಿದೊಂದು ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ಪಟ್ಟಿ
ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ನಂತರ ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಆಂಡ್ರೆ ರಸೆಲ್ ಅಗ್ರಸ್ಥಾನಕ್ಕೇರಿದ್ದಾರೆ. ಟೂರ್ನಿಯಲ್ಲಿ ಒಟ್ಟು 3 ಪಂದ್ಯಗಳ ಪೈಕಿ 2 ಪಂದ್ಯಗಳನ್ನಾಡಿರುವ ರಸೆಲ್ 95 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಈ ಪಂದ್ಯಕ್ಕೂ ಮುನ್ನ ಅಗ್ರಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ( 93 ) ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನುಳಿದಂತೆ 81 ರನ್ ಗಳಸಿರುವ ಇಶಾನ್ ಕಿಶನ್ ಮೂರನೇ ಸ್ಥಾನ, 78 ರನ್ ಗಳಿಸಿರುವ ರಾಬಿನ್ ಉತ್ತಪ್ಪ ನಾಲ್ಕನೇ ಸ್ಥಾನ ಹಾಗೂ ಈ ಪಂದ್ಯದಲ್ಲಿ ಅಬ್ಬರಿಸಿದ ಪಂಜಾಬ್ ಕಿಂಗ್ಸ್‌ನ ಭಾನುಕಾ ರಾಜಪಕ್ಸೆ 74 ರನ್‌ಗಳೊಂದಿಗೆ ಐದನೇ ಸ್ಥಾನದಲ್ಲಿದೆ.

ಪರ್ಪಲ್ ಕ್ಯಾಪ್ ಪಟ್ಟಿ
ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ನಂತರ ಟೂರ್ನಿಯಲ್ಲಿ ಅತಿಹೆಚ್ಚು ವಿಕಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಂದ್ಯದಲ್ಲಿ ನಾಲ್ಕು ವಿಕೆಟ್ ಗೊಂಚಲನ್ನು ಪಡೆದ ಉಮೇಶ್ ಯಾದವ್ ಒಟ್ಟು 8 ವಿಕೆಟ್‌ಗಳನ್ನು ಪಡೆದು ಇದಕ್ಕೂ ಮುನ್ನ 5 ವಿಕೆಟ್ ಪಡೆದಿದ್ದ ವನಿಂದು ಹಸರಂಗ ಅಗ್ರಸ್ಥಾನದಲ್ಲಿದ್ದರು. ಆದರೆ ಇದೀಗ ವನಿಂದು ಹಸರಂಗ ಮೂರನೇ ಸ್ಥಾನಕ್ಕೆ ಕುಸಿದಿದ್ದು, 5 ವಿಕೆಟ್ ಪಡೆದಿರುವ ಮತ್ತೋರ್ವ ಆಟಗಾರ ಟಿಮ್ ಸೌಥಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನುಳಿದಂತೆ ತಲಾ 4 ವಿಕೆಟ್ ಪಡೆದಿರುವ ಡ್ವೇಯ್ಮನ್ ಬ್ರಾವೋ ಮತ್ತು ಆಕಾಶ್ ದೀಪ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications