For Quick Alerts
ALLOW NOTIFICATIONS  
For Daily Alerts
 

ಕೋಲ್ಕತ್ತಾ ವಿರುದ್ಧ ಮುಂಬೈ ಸೋತ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್? ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

IPL 2022: Points table, orange cap and purple cap updated list after MI vs KKR match

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಿದ್ದು, ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐದು ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿರುವ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಸೂರ್ಯಕುಮಾರ್ ಯಾದವ್ ಅರ್ಧಶತಕ ಹಾಗೂ ತಿಲಕ್ ವರ್ಮಾ ಮತ್ತು ಕೀರನ್ ಪೊಲಾರ್ಡ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 162 ರನ್‌ಗಳ ಗುರಿಯನ್ನು ನೀಡಿತು. ಮುಂಬೈ ಇಂಡಿಯನ್ಸ್ ತಂಡದ ಮೊದಲ ಮೂರು ವಿಕೆಟ್‌ಗಳನ್ನು ಸರಿಯಾದ ಸಮಯಕ್ಕೆ ಉರುಳಿಸಿ ಅಂತಿಮ ಹಂತದಲ್ಲಿ ಹೆಚ್ಚು ರನ್ ಬಿಟ್ಟುಕೊಟ್ಟ ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಪಾಲಿನ ಬ್ಯಾಟಿಂಗ್‌ನಲ್ಲಿ ಮುಂಬೈ ಇಂಡಿಯನ್ಸ್ ಬೌಲರ್‌ಗಲ ಬೆವರಿಳಿಸಿತು.

ಮುಂಬೈ ಇಂಡಿಯನ್ಸ್ ನೀಡಿದ್ದ 162 ರನ್‌ಗಳ ಗುರಿಯನ್ನು ಕೇವಲ 16 ಓವರ್‌ಗಳಲ್ಲಿಯೇ ಮುಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ಪರ ವೆಂಕಟೇಶ್ ಐಯ್ಯರ್ ಆರಂಭದಲ್ಲಿ ಜವಾಬ್ದಾರಿಯುತ ಆಟವನ್ನಾಡಿ ಅರ್ಧಶತಕ ಸಿಡಿಸಿ ನೆರವಾದರೆ, ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ಯಾಟ್ ಕಮಿನ್ಸ್ 15 ಎಸೆತಗಳಲ್ಲಿ ಅಜೇಯ 56 ರನ್ ಚಚ್ಚಿ ಮಿಂಚಿದರು. ಹೀಗೆ ಕೋಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ ಸಾಧಿಸಿದರೆ, ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲನ್ನು ಕಂಡಿದೆ. ಇನ್ನು ಇತ್ತಂಡಗಳ ನಡುವಿನ ಈ ರೋಚಕ ಹಣಾಹಣಿ ಮುಕ್ತಾಯಗೊಂಡ ನಂತರ ಅಂಕಪಟ್ಟಿಯಲ್ಲಿ ಯಾವ ತಂಡ ಅಗ್ರಸ್ಥಾನದಲ್ಲಿದೆ, ಯಾವ ಆಟಗಾರ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಹೊಂದಿದ್ದಾರೆ ಹಾಗೂ ಯಾವ ಬೌಲರ್ ಬಳಿ ಪರ್ಪಲ್ ಕ್ಯಾಪ್ ಇದೆ ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ.

ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ ಕೆಕೆಆರ್

ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ ಕೆಕೆಆರ್

ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಈ ಪಂದ್ಯದಲ್ಲಿ ಜಯ ಸಾಧಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಜಯ ಸಾಧಿಸಿ ಉಳಿದೊಂದು ಪಂದ್ಯದಲ್ಲಿ ಸೋತಿದೆ. ಇನ್ನು ಇಲ್ಲಿಯವರೆಗೂ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಸೋತು ಉಳಿದೊಂದು ಪಂದ್ಯದಲ್ಲಿ ಸೋತಿರಯವ ರಾಜಸ್ಥಾನ್ ರಾಯಲ್ಸ್ ದ್ವಿತೀಯ ಸ್ಥಾನದಲ್ಲಿದೆ. 2 ಪಂದ್ಯಗಳನ್ನಾಡಿ ಎರಡೂ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದು, 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯ ಸಾಧಿಸಿರುವ ಪಂಜಾಬ್ ಕಿಂಗ್ಸ್ ನಾಲ್ಕನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್

ಆರೆಂಜ್ ಕ್ಯಾಪ್

ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿ 205 ರನ್ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಆಟಗಾರ ಜೋಸ್ ಬಟ್ಲರ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿ 149 ರನ್ ಗಳಿಸಿರುವ ಮುಂಬೈ ಇಂಡಿಯನ್ಸ್ ತಂಡದ ಇಶಾನ್ ಕಿಶನ್ ದ್ವಿತೀಯ ಸ್ಥಾನದಲ್ಲಿದ್ದಾರೆ. 3 ಪಂದ್ಯಗಳನ್ನಾಡಿ 122 ರನ್ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ತೃತೀಯ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್

ಪರ್ಪಲ್ ಕ್ಯಾಪ್

ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಮುಕ್ತಾಯಗೊಂಡ ನಂತರವೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಉಮೇಶ್ ಯಾದವ್ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿರುವ ಉಮೇಶ್ ಯಾದವ್ 9 ವಿಕೆಟ್ ಪಡೆದಿದ್ದಾರೆ. ಇನ್ನು 3 ಪಂದ್ಯಗಳನ್ನಾಡಿ 7 ವಿಕೆಟ್ ಪಡೆದಿರುವ ಯುಜುವೇಂದ್ರ ಚಹಲ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. 3 ಪಂದ್ಯಗಳನ್ನಾಡಿ 7 ವಿಕೆಟ್ ಪಡೆದಿರುವ ಮತ್ತೋರ್ವ ಆಟಗಾರ ಅವೇಶ್ ಖಾನ್ ತೃತೀಯ ಸ್ಥಾನದಲ್ಲಿದ್ದಾರೆ.

Story first published: Thursday, April 7, 2022, 17:50 [IST]
Other articles published on Apr 7, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+