IPL 2022: ಅಂಕಪಟ್ಟಿಯಲ್ಲಿ ರಾಯಲ್ಸ್ ಅಧಿಪತ್ಯ: ಎಲ್ಲಾ ವಿಭಾಗದಲ್ಲೂ ಆರ್‌ಆರ್ ಟಾಪ್

ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ರೋಚಕವಾಗಿ ಅಂತ್ಯವಾಗಿದ್ದು ಸಂಜು ಸ್ಯಾಮ್ಸನ್ ಪಡೆ ರೋಚಕ ಗೆಲುವು ಸಾಧಿಸಿದೆ. ಬೃಹತ್ ಮೊತ್ತವನ್ನು ಗುರಿಯನ್ನಾಗಿ ನೀಡಿದ ಹೊರತಾಗಿಯೂ ಆರ್‌ಆರ್ ಪಡೆಯ ಗೆಲುವು ಸುಲಭವಾಗಿರಲಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂತಿಮ ಹಂತದವರೆಗೂ ಅದ್ಭುತ ಹೋರಾಟವನ್ನು ನಡೆಸಿದ್ದು ಕಡೇ ಕ್ಷಣದಲ್ಲಿ ಆರ್‌ಆರ್ ಪಡೆ ಗೆಲುವಿನ ನಗೆ ಬೀರುವವಲ್ಲಿ ಯಶಸ್ವಿಯಾಯಿತು. ಈ ಮೂಲಕ
ಅಂತಿಮ ಓವರ್‌ನಲ್ಲಿ 36 ರನ್‌ಗಳಿಸುವ ಅಸಾಧ್ಯ ಗುರಿ ಮುಂದಿದ್ದರೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಪೋವೆಲ್ ಅಂತಿಮ ಓವರ್‌ನ ಆರಂಭಿಕ ಮೂರು ಎಸೆತಗಳನ್ನು ಭರ್ಜರಿಯಾಗಿ ಸಿಕ್ಸರ್‌ಗೆ ಅಟ್ಟಿದ್ದರು. ಹೀಗಾಗಿ ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆಯಾ ಎಂಬ ಕುತೂಹಲ ಅಭಿಮಾನಿಗಳನ್ನು ಮೂಡಿತ್ತು. ಅಂತಿಮ ಮೂರು ಎಸೆತಗಳನ್ನು ಉತ್ತಮವಾಗಿ ಮಾಡಿದ ಆರ್ಆರ್ ವೇಗಿ ಒಬೆಡ್ ಮೆಕ್‌ಕಾಯ್ ಮೂರು ಎಸೆತಗಳಲ್ಲಿ ಕೂಡ ನಿಯಂತ್ರಣ ಸಾಧಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ಸಾಧಿಸಿದೆ.
ಹಾಗಾದರೆ ಈ ಪಂದ್ಯದ ಬಳಿಕ ಆರ್‌ಆರ್ ಅಂಕಪಟ್ಟಿಯಲ್ಲಿ ಯಾವ ಸ್ಥಾನದಲ್ಲಿದೆ. ಪರ್ಪಲ್ ಕ್ಯಾಪ್ ಪಟ್ಟಿ ಹಾಗೂ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆಗಿರುವ ಬದಲಾವಣೆಗಳು ಏನು? ಮುಂದೆ ಓದಿ..

ಅಂಕ ಪಟ್ಟಿ ಹೀಗಿದೆ
ಈ ಪಂದ್ಯದಲ್ಲಿ ಜಯ ಸಾಧಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಅಂಕ ಪಟ್ಟಿಯಲ್ಲಿ ಏರಿಕೆ ಕಂಡಿದ್ದು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಆರ್‌ಆರ್ ತಂಡ 7 ಪಂದ್ಯಗಳನ್ನಾಡಿದ್ದು 5 ಪಂದ್ಯಗಳಲ್ಲಿ ಗೆದ್ದು 10 ಅಂಕಗಳನ್ನು ಪಡೆದುಕೊಂಡಿದೆ. ಇನ್ನು 6 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಗುಜರಾತ್ ಟೈಟನ್ಸ್ ಎರಡನೇ ಸ್ಥಾನಕ್ಕೆ ಕುಸಿದಿದೆ ಉಳಿದುಕೊಂಡಿದೆ. ಆರ್‌ಸಿಬಿ 3ನೇ ಸ್ಥಾನಕ್ಕೆ ಕುಸಿದಿದೆ. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಆರ್ಆರ್ ವಿರುದ್ಧಧ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 6ನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ಪಟ್ಟಿ
ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಇಂದು ಮತ್ತೊಂದು ಶತಕ ಸಿಡಿಸಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಮೂರನೇ ಶತಕ ಸಿಡಿಸಿದಂತಾಗಿದೆ. ಇನ್ನು ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಬಟ್ಲರ್ ಉಳಿದ ಎಲ್ಲಾ ಆಟಗಾರರಿಗಿಂತ ಭಾರೀ ಅಂತರವನ್ನು ಕಾಯ್ದುಕೊಂಡಿದ್ದಾರೆ. 7 ಪಂದ್ಯಗಳಲ್ಲಿ ಬಟ್ಲರ್ 491 ರನ್‌ಗಳಿಸಿದ್ದಾರೆ. ಇ್ರಲ್ಲಿ ಮೂರು ಶತಕ ಹಾಗೂ ಎರಡು ಅರ್ಧ ಶತಕ ಸೇರಿದೆ. ಎರಡನೇ ಸ್ಥಾನದಲ್ಲಿ ಕೆಎಲ್ ರಾಹುಲ್ ಇದ್ದು 265 ರನ್‌ಗಳಿಸಿದ್ದಾರೆ. ಪೃಥ್ವಿ ಶಾ 254 ರನ್‌ಗಳೊಂದಿಗೆ 3ನೇ ಸ್ಥಾನಕ್ಕೇರಿದ್ದಾರೆ. 250 ರನ್‌ಗಳಿಸಿರುವ ಫಾಫ್ ಡು ಪ್ಲೆಸಿಸ್ 5ನೇ ಸ್ಥಾನದಲ್ಲಿದ್ದಾರೆ.

ಯುಜಿ ಬಳಿ ಪರ್ಪಲ್‌ಕ್ಯಾಪ್
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ನೀಡುವ ಪರ್ಪಲ್ ಕ್ಯಾಪ್ ಕೂಡ ಆರ್‌ಆರ್ ಆಟಗಾರನ ಬಳಿಯೇ ಉಳಿದುಕೊಂಡಿದೆ. ಯುಜುವೇಂದ್ರ ಚಾಹಲ್ ಈ ಪಟ್ಟಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಚಾಹಲ್ ಒಟ್ಟು 18 ವಿಕೆಟ್‌ಗಳನ್ನು ಸಂಪಾದಿಸಿದ್ದು ಈ ಪಟ್ಟಿಯಲ್ಲಿಯೂ ಆರ್‌ಆರ್ ಆಟಗಾರ ಭಾರೀ ಅಂತರವನ್ನು ಕಾಪಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ಕುಲ್‌ದೀಪ್ ಯಾದವ್ 13 ವಿಕೆಟ್ ಸಂಪಾದಿಸಿದ್ದಾರೆ. ಡ್ವೇಯ್ನ್ ಬ್ರಾವೋ, ಟಿ ನಟರಾಜನ್, ಖಲೀಲ್ ಅಹ್ಮದ್ ನಂತರದ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications