Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KKR vs MI: ಮುಂಬೈ ವಿರುದ್ಧ ಗೆದ್ದ ಕೆಕೆಆರ್ ಪ್ಲೇ ಆಫ್ ಜೀವಂತ, ಪಾಯಿಂಟ್ಸ್ ಎಷ್ಟು?

KKR

ಐಪಿಎಲ್ 2022ರ ಸೀಸನ್‌ನ 56ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಭಾರೀ ಗೆಲುವು ದಾಖಲಿಸಿದೆ. ಕೆಕೆಆರ್ ನೀಡಿದ್ದ 166 ರನ್‌ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್, ಕೆಕೆಆರ್‌ನ ಪ್ರಬಲ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 113 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಟೀಂ 52 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ಪರ ಉತ್ತಮ ಆರಂಭ ನೀಡಿದ ವೆಂಕಟೇಶ್ ಅಯ್ಯರ್ ಹಾಗೂ ಅಜಿಂಕ್ಯ ರಹಾನೆ ಪವರ್‌ಪ್ಲೇ ಓವರ್‌ಗಳಲ್ಲಿ 60 ರನ್ ಸಿಡಿಸಿದ್ರು. ಅಯ್ಯರ್ 24 ಎಸೆತಗಳಲ್ಲಿ 43, ರಹಾನೆ 25, ನಿತಿಶ್ ರಾಣಾ 43 ಹಾಗೂ ರಿಂಕು ಸಿಂಗ್ 23ರನ್‌ಗಳ ಕೊಡಗೆಯಿಂದ ಕೆಕೆಆರ್ 9 ವಿಕೆಟ್ ನಷ್ಟಕ್ಕೆ 165 ರನ್ ಕಲೆಹಾಕಿತು.

ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಕೆಕೆಆರ್‌ಗೆ ಬೃಹತ್ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ. ಬುಮ್ರಾ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದು ತಂಡಕ್ಕೆ ಮೇಲುಗೈ ತಂದುಕೊಟ್ಟಿದರು.

ಆದ್ರೆ 166ರನ್‌ಗಳ ಮೊತ್ತ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯದಿಂದ ಕೆಕೆಆರ್‌ಗೆ ಶರಣಾಗಿದೆ. ಇಶಾನ್ ಕಿಶನ್ 51ರನ್‌ಗಳಿಸಿದ್ದು ಬಿಟ್ಟರೆ ಬೇರೆ ಯಾವೊಬ್ಬ ಬ್ಯಾಟ್ಸ್‌ಮನ್ ಮುಂಬೈ ತಂಡಕ್ಕೆ ಆಧಾರವಾಗಲಿಲ್ಲ. ಪರಿಣಾಮ 17.3 ಓವರ್‌ನಲ್ಲಿಯೇ ಮುಂಬೈ 113ರನ್‌ಗೆ ಆಲೌಟ್ ಆಗಿ ಐಪಿಎಲ್‌ನಲ್ಲಿ 2022ರಲ್ಲಿ 9ನೇ ಸೋಲು ಕಂಡು ಪಾಯಿಂಟ್ಸ್ ಟೇಬಲ್‌ನಲ್ಲಿ ತಳದಲ್ಲಿಯೇ ಉಳಿದಿದೆ.

ಕೆಕೆಆರ್ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಪ್ಯಾಟ್ ಕಮಿನ್ಸ್ 3, ಆ್ಯಂಡ್ರೆ ರಸೆಲ್ 2, ಟಿಮ್ ಸೌಥಿ ಮತ್ತು ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆದರು.

ಪಾಯಿಂಟ್ಸ್ ಟೇಬಲ್

ಪಾಯಿಂಟ್ಸ್ ಟೇಬಲ್

ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಭಾರೀ ಗೆಲುವಿನ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 10 ಪಾಯಿಂಟ್ಸ್‌ಗಳ ನೆಟ್ ರನ್‌ರೇಟ್‌ ಏಳನೇ ಸ್ಥಾನಕ್ಕೇರಿದೆ. ಆಡಿರುವ 12 ಪಂದ್ಯಗಳಲ್ಲಿ 5 ಗೆಲುವು ಮತ್ತು 7 ಪಂದ್ಯಗಳ ಸೋಲಿನ ಮೂಲಕ ಪ್ಲೇ ಆಫ್ ಜೀವಂತವಾಗಿರಿಸಿದೆ.

ಮೊದಲ ಮೂರು ಸ್ಥಾನದಲ್ಲಿ ಲಕ್ನೋ ಬಳಿಕ ಗುಜರಾತ್ ಟೈಟನ್ಸ್ (16) ರಾಜಸ್ತಾನ್ ರಾಯಲ್ಸ್ 14 ಪಾಯಿಂಟ್ಸ್‌ನೊಂದಿಗಿದ್ದು, ಆರ್‌ಸಿಬಿ ನಾಲ್ಕು ಹಾಗೂ ನಂತರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಉತ್ತಮ ರನ್‌ರೇಟ್ ಮೂಲಕ ಐದನೇ ಸ್ಥಾನ ಅಲಂಕರಿಸಿದೆ.

IPL ನಲ್ಲಿ ಉತ್ತಮ ಪ್ರದರ್ಶನ: ಭಾರತ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಬಲ್ಲ ಮೂವರು ದ. ಆಫ್ರಿಕಾ ಪ್ಲೇಯರ್ಸ್

ಆರೆಂಜ್ ಕ್ಯಾಪ್

ಆರೆಂಜ್ ಕ್ಯಾಪ್

ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಮೂರು ಶತಕದ ಮೂಲಕ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 11 ಪಂದ್ಯಗಳಲ್ಲಿ ಬಟ್ಲರ್ 618 ರನ್‌ಗಳಿಸಿದ್ದಾರೆ. ಇದರಲ್ಲಿ ಮೂರು ಶತಕ ಹಾಗೂ ಮೂರು ಅರ್ಧ ಶತಕ ಸೇರಿದೆ. ಎರಡನೇ ಸ್ಥಾನದಲ್ಲಿ ಕೆ.ಎಲ್ ರಾಹುಲ್ ಇದ್ದು 451 ರನ್‌ಗಳಿಸಿದ್ದಾರೆ. ನಂತರದಲ್ಲಿ ಫಾಫ್ ಡುಪ್ಲೆಸಿಸ್ 389 ರನ್, ಶಿಖರ್ ಧವನ್ 381 ರನ್‌ , ಡೇವಿಡ್ ವಾರ್ನರ್ 375 ರನ್‌ಗಳ ಮೂಲಕ ನಂತರದ ಸ್ಥಾನದಲ್ಲಿದ್ದಾರೆ.

LSG vs GT: ಪಂದ್ಯದ ಸಂಭಾವ್ಯ ಪ್ಲೇಯಿಂಗ್ 11, ಡ್ರೀಂ ಟೀಮ್, ಫ್ಯಾಂಟೆಸಿ ಟಿಪ್ಸ್‌

ಪೊಲ್ಲಾರ್ಡ್ ಗೆಟ್ ಔಟ್!! ಮುಂಬೈ ಅಭಿಮಾನಿಗಳಿಂದ ಪೊಲಾರ್ಡ್ ಫುಲ್ ಟ್ರೋಲ್ | Oneindia Kannada
ಪರ್ಪಲ್ ಕ್ಯಾಪ್‌

ಪರ್ಪಲ್ ಕ್ಯಾಪ್‌

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ನೀಡುವ ಪರ್ಪಲ್ ಕ್ಯಾಪ್ ಕೂಡ ಆರ್‌ಆರ್ ಆಟಗಾರನ ಬಳಿಯೇ ಉಳಿದುಕೊಂಡಿದೆ. ಯುಜುವೇಂದ್ರ ಚಾಹಲ್ ಈ ಪಟ್ಟಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಾಹಲ್ ಒಟ್ಟು 22 ವಿಕೆಟ್‌ಗಳನ್ನು ಸಂಪಾದಿಸಿದ್ದು ಈ ಪಟ್ಟಿಯಲ್ಲಿಯೂ ಆರ್‌ಆರ್ ಆಟಗಾರ ಎಲ್ಲರಿಗಿಂತ ಮುಂದಿದ್ದಾನೆ.

ಇವರ ನಂತರದ ಸ್ಥಾನದಲ್ಲಿ ಆರ್‌ಸಿಬಿ ಸ್ಪಿನ್ನರ್ ವಹಿಂದು ಹಸರಂಗ ಕೇವಲ ಒಂದು ವಿಕೆಟ್ ಅಂತರದಲ್ಲಿ ಹಿಂದುಳಿದಿದ್ದಾರೆ. ಹಸರಂಗ ಕಳೆದ ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಲ್ಲದೆ, ಸೀಸನ್‌ನ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ್ದಿದ್ದಾರೆ. 12 ಪಂದ್ಯಗಳಲ್ಲಿ ಈ ಲಂಕಾ ಸ್ಪಿನ್ನರ್ 21 ವಿಕೆಟ್ ಕಬಳಿಸಿದ್ದಾರೆ.

ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್‌ನ ಕಗಿಸೊ ರಬಾಡ (18), ಡೆಲ್ಲಿ ಕ್ಯಾಪಿಟಲ್ಸ್‌ನ ಸ್ಪಿನ್ನರ್ ಕುಲ್‌ದೀಪ್ ಯಾದವ್ (18), ಎಸ್‌ಆರ್‌ಎಚ್‌ನ ಟಿ. ನಟರಾಜನ್(17) ಮೂರು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

Story first published: Tuesday, May 10, 2022, 0:10 [IST]
Other articles published on May 10, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+