
ಅಂಕ ಪಟ್ಟಿ ಹೀಗಿದೆ
ಈ ಪಂದ್ಯದಲ್ಲಿ ಜಯ ಸಾಧಿಸಿದ ರಾಜಸ್ಥಾನ್ ರಾಯಲ್ಸ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಂಡಿದೆ. ರಾಜಸ್ಥಾನ್ ರಾಯಲ್ಸ್ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿದೆ. ಇನ್ನು 6 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯ ಗಳಿಸಿರುವ ಗುಜರಾತ್ ಟೈಟನ್ಸ್ ಅಗ್ರಸ್ಥಾನದಲ್ಲಿಯೇ ಉಳಿದುಕೊಂಡಿದೆ. ಇನ್ನುಳಿದಂತೆ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತೃತೀಯ ಸ್ಥಾನದಲ್ಲಿದ್ದರೆ, 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿರುವ ಮತ್ತೊಂದು ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ಪಟ್ಟಿ
ಈ ಪಂದ್ಯದಲ್ಲಿ ಟೂರ್ನಿಯ ತನ್ನ ಎರಡನೇ ಶತಕವನ್ನು ಬಾರಿಸಿ ಮಿಂಚಿದ ಜೋಸ್ ಬಟ್ಲರ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ತಮ್ಮ ಅಬ್ಬರವನ್ನು ಮುಂದುವರೆಸಿದ್ದಾರೆ. 6 ಪಂದ್ಯಗಳನ್ನಾಡಿ 375 ರನ್ ಕಲೆಹಾಕಿರುವ ಜೋಸ್ ಬಟ್ಲರ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿ 236 ರನ್ ಗಳಿಸಿರುವ ಶ್ರೇಯಸ್ ಅಯ್ಯರ್ ದ್ವಿತೀಯ ಸ್ಥಾನದಲ್ಲಿದ್ದಾರೆ ಹಾಗೂ 6 ಪಂದ್ಯಗಳನ್ನಾಡಿ 235 ರನ್ ಕಲೆ ಹಾಕಿರುವ ಕೆಎಲ್ ರಾಹುಲ್ ತೃತೀಯ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ರಾಜಸ್ಥಾನ್ ಆಟಗಾರ ಟಾಪ್
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಓವರ್ ಒಂದರಲ್ಲಿಯೇ 4 ವಿಕೆಟ್ ಪಡೆಯುವುದರ ಮೂಲಕ ಒಟ್ಟು 5 ವಿಕೆಟ್ ಕಬಳಿಸಿದ ಯುಜುವೇಂದ್ರ ಚಾಹಲ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. 6 ಪಂದ್ಯಗಳನ್ನಾಡಿ 17 ವಿಕೆಟ್ ಪಡೆದಿರುವ ಚಾಹಲ್ ಅಗ್ರಸ್ಥಾನದಲ್ಲಿದ್ದರೆ, 6 ಪಂದ್ಯಗಳನ್ನಾಡಿ 12 ವಿಕೆಟ್ ಪಡೆದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ಟಿ ನಟರಾಜನ್ ದ್ವಿತೀಯ ಸ್ಥಾನದಲ್ಲಿದ್ದಾರೆ ಹಾಗೂ 5 ಪಂದ್ಯಗಳನ್ನಾಡಿ 11 ವಿಕೆಟ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕುಲ್ದೀಪ್ ಯಾದವ್ ತೃತೀಯ ಸ್ಥಾನದಲ್ಲಿದ್ದಾರೆ.


Click it and Unblock the Notifications












