ಕೆಕೆಆರ್ ವಿರುದ್ಧ ರಾಜಸ್ಥಾನ್ ಗೆದ್ದ ನಂತರ ಅಂಕಪಟ್ಟಿ ಹೇಗಿದೆ? ಆರೆಂಜ್, ಪರ್ಪಲ್ ಕ್ಯಾಪ್ ಎರಡೂ ರಾಯಲ್ಸ್ ಪಾಲು!

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 30ನೇ ಪಂದ್ಯ ಏಪ್ರಿಲ್ 18ರ ಸೋಮವಾರದಂದು ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅಬ್ಬರದ ಶತಕ ಸಿಡಿಸಿ ಮಿಂಚಿದರು. 61 ಎಸೆತಗಳಲ್ಲಿ 103 ರನ್ ಚಚ್ಚಿದ ಜೋಸ್ ಬಟ್ಲರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡನೇ ಶತಕವನ್ನು ದಾಖಲಿಸಿದರು. ಹೀಗೆ ಜೋಸ್ ಬಟ್ಲರ್ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 217 ರನ್ ಕಲೆಹಾಕಿ ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 218 ರನ್‌ಗಳ ಗುರಿ ನೀಡಿತು.
ಇನ್ನು ರಾಜಸ್ಥಾನ್ ರಾಯಲ್ಸ್ ನೀಡಿದ 218 ರನ್‌ಗಳ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲನೇ ಎಸೆತದಲ್ಲಿಯೇ ಸುನಿಲ್ ನರೈನ್ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಅನುಭವಿಸಿತು. ನಂತರ ಆ್ಯರನ್ ಫಿಂಚ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕಗಳನ್ನು ಸಿಡಿಸಿ ಅಬ್ಬರಿಸಿದರು. ಆದರೆ ನಂತರದಲ್ಲಿ ಕಣಕ್ಕಿಳಿದ ಆಟಗಾರರು ರಾಜಸ್ಥಾನ್ ರಾಯಲ್ಸ್ ಬೌಲರ್‌ಗಳ ದಾಳಿಗೆ ತತ್ತರಿಸಿದರು. ಒಟ್ಟಾರೆ 19.4 ಓವರ್‌ಗಳಲ್ಲಿ 210 ರನ್‌ಗಳಿಗೆ ಆಲ್ ಔಟ್ ಆದ ಕೋಲ್ಕತ್ತ ನೈಟ್ ರೈಡರ್ಸ್ 7 ರನ್‌ಗಳ ಸೋಲನ್ನು ಅನುಭವಿಸಿತು. ರಾಜಸ್ಥಾನ್ ರಾಯಲ್ಸ್ ಪರ ಯಜುವೇಂದ್ರ ಚಾಹಲ್ ಹ್ಯಾಟ್ರಿಕ್ ವಿಕೆಟ್ ಪಡೆದು ಓವರ್ ಒಂದರಲ್ಲಿಯೇ 4 ವಿಕೆಟ್ ಕಬಳಿಸಿ ರನ್ ಚೇಸ್ ಮಾಡುವ ಯತ್ನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಖಳನಾಯಕನಾದರು. ಹೀಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸೋಲುಣಿಸಿದ ನಂತರ ಅಂಕಪಟ್ಟಿ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಪಟ್ಟಿ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಅಂಕ ಪಟ್ಟಿ ಹೀಗಿದೆ
ಈ ಪಂದ್ಯದಲ್ಲಿ ಜಯ ಸಾಧಿಸಿದ ರಾಜಸ್ಥಾನ್ ರಾಯಲ್ಸ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಂಡಿದೆ. ರಾಜಸ್ಥಾನ್ ರಾಯಲ್ಸ್ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿದೆ. ಇನ್ನು 6 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯ ಗಳಿಸಿರುವ ಗುಜರಾತ್ ಟೈಟನ್ಸ್ ಅಗ್ರಸ್ಥಾನದಲ್ಲಿಯೇ ಉಳಿದುಕೊಂಡಿದೆ. ಇನ್ನುಳಿದಂತೆ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತೃತೀಯ ಸ್ಥಾನದಲ್ಲಿದ್ದರೆ, 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿರುವ ಮತ್ತೊಂದು ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ಪಟ್ಟಿ
ಈ ಪಂದ್ಯದಲ್ಲಿ ಟೂರ್ನಿಯ ತನ್ನ ಎರಡನೇ ಶತಕವನ್ನು ಬಾರಿಸಿ ಮಿಂಚಿದ ಜೋಸ್ ಬಟ್ಲರ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ತಮ್ಮ ಅಬ್ಬರವನ್ನು ಮುಂದುವರೆಸಿದ್ದಾರೆ. 6 ಪಂದ್ಯಗಳನ್ನಾಡಿ 375 ರನ್ ಕಲೆಹಾಕಿರುವ ಜೋಸ್ ಬಟ್ಲರ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿ 236 ರನ್ ಗಳಿಸಿರುವ ಶ್ರೇಯಸ್ ಅಯ್ಯರ್ ದ್ವಿತೀಯ ಸ್ಥಾನದಲ್ಲಿದ್ದಾರೆ ಹಾಗೂ 6 ಪಂದ್ಯಗಳನ್ನಾಡಿ 235 ರನ್ ಕಲೆ ಹಾಕಿರುವ ಕೆಎಲ್ ರಾಹುಲ್ ತೃತೀಯ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ರಾಜಸ್ಥಾನ್ ಆಟಗಾರ ಟಾಪ್
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಓವರ್ ಒಂದರಲ್ಲಿಯೇ 4 ವಿಕೆಟ್ ಪಡೆಯುವುದರ ಮೂಲಕ ಒಟ್ಟು 5 ವಿಕೆಟ್ ಕಬಳಿಸಿದ ಯುಜುವೇಂದ್ರ ಚಾಹಲ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. 6 ಪಂದ್ಯಗಳನ್ನಾಡಿ 17 ವಿಕೆಟ್ ಪಡೆದಿರುವ ಚಾಹಲ್ ಅಗ್ರಸ್ಥಾನದಲ್ಲಿದ್ದರೆ, 6 ಪಂದ್ಯಗಳನ್ನಾಡಿ 12 ವಿಕೆಟ್ ಪಡೆದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ಟಿ ನಟರಾಜನ್ ದ್ವಿತೀಯ ಸ್ಥಾನದಲ್ಲಿದ್ದಾರೆ ಹಾಗೂ 5 ಪಂದ್ಯಗಳನ್ನಾಡಿ 11 ವಿಕೆಟ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕುಲ್ದೀಪ್ ಯಾದವ್ ತೃತೀಯ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications