ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಲಕ್ನೋ, ಆರ್‌ಸಿಬಿ ಗೆದ್ದ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್? ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

IPL 2022: Points table, orange cap and purple cap updated lists after LSG vs MI and RCB vs DC matches

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಏಪ್ರಿಲ್ 16ರ ಶನಿವಾರದಂದು 2 ಪಂದ್ಯಗಳು ನಡೆದಿದ್ದು, ಪ್ರಥಮ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸಿದವು. ಇನ್ನು ಪ್ರಥಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ 18 ರನ್‌ಗಳ ಸೋಲುಣಿಸಿದರೆ, ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ರನ್‌ಗಳ ಸೋಲುಣಿಸಿದೆ.

RCB vs DC: ಮಿಂಚಿದ ಬೌಲರ್ಸ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಕಂಬ್ಯಾಕ್ ಮಾಡಿದ ಆರ್‌ಸಿಬಿRCB vs DC: ಮಿಂಚಿದ ಬೌಲರ್ಸ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಕಂಬ್ಯಾಕ್ ಮಾಡಿದ ಆರ್‌ಸಿಬಿ

ಒಂದೆಡೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ನಾಯಕ ಕೆಎಲ್ ರಾಹುಲ್ 60 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿ ಅಬ್ಬರಿಸಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರೆ, ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ 55 ರನ್‌ ಮತ್ತು ದಿನೇಶ್ ಕಾರ್ತಿಕ್ ಅಜೇಯ 66 ರನ್ ಚಚ್ಚಿ ಅಬ್ಬರಿಸಿದರು.

ಎಲ್ಲಿ ತಪ್ಪಾಗ್ತಿದೆ ಎಂದು ಅರ್ಥವಾಗ್ತಿಲ್ಲ; ಮುಂಬೈನ ಸತತ 6 ಸೋಲಿಗೆ ಹೊಣೆ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್ ಶರ್ಮಾಎಲ್ಲಿ ತಪ್ಪಾಗ್ತಿದೆ ಎಂದು ಅರ್ಥವಾಗ್ತಿಲ್ಲ; ಮುಂಬೈನ ಸತತ 6 ಸೋಲಿಗೆ ಹೊಣೆ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್ ಶರ್ಮಾ

ಇನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಸೋಲುವುದರ ಮೂಲಕ ಟೂರ್ನಿಯಲ್ಲಿ ಸತತ ಆರನೇ ಸೋಲನ್ನು ಕಂಡಿದ್ದು, ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿಯೇ ಉಳಿದುಕೊಂಡು ಗೆಲುವಿನ ಖಾತೆ ತೆರೆಯಲಾಗದೇ ಪರದಾಡುತ್ತಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಅಂಕಪಟ್ಟಿಯಲ್ಲಿ ಇಳಿಕೆಯನ್ನು ಕಂಡಿದೆ. ಇನ್ನು ಈ 2 ಪಂದ್ಯಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಜಿಗಿತ ಕಂಡಿವೆ. ಹೀಗೆ ಈ ಪಂದ್ಯಗಳ ಮುಕ್ತಾಯದ ನಂತರ ಅಂಕಪಟ್ಟಿಯಲ್ಲಿ ಆಗಿರುವ ಬದಲಾವಣೆಗಳೇನು ಮತ್ತು ಆರೇಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಗಳಲ್ಲಿ ಆಗಿರುವ ಬದಲಾವಣೆಗಳೇನು ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ ಓದಿ.

ಅಂಕ ಪಟ್ಟಿ ಹೀಗಿದೆ

ಅಂಕ ಪಟ್ಟಿ ಹೀಗಿದೆ

ಈ ಪಂದ್ಯಗಳ ಮುಕ್ತಾಯದ ನಂತರ 5 ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳನ್ನು ಪಡೆದಿದ್ದ ಗುಜರಾತ್ ಟೈಟನ್ಸ್ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ 6 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿಕೆ ಕಂಡಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಇನ್ನು 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ಪಟ್ಟಿ ಹೀಗಿದೆ

ಆರೆಂಜ್ ಕ್ಯಾಪ್ ಪಟ್ಟಿ ಹೀಗಿದೆ

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 60 ಎಸೆತಗಳನ್ನು ಎದುರಿಸಿ 103 ರನ್ ಬಾರಿಸಿ ಶತಕ ಸಿಡಿಸಿರುವ ಕೆಎಲ್ ರಾಹುಲ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಕೆಎಲ್ ರಾಹುಲ್ 6 ಪಂದ್ಯಗಳನ್ನಾಡಿ 235 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೆ, ರಾಜಸ್ತಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ 5 ಪಂದ್ಯಗಳನ್ನಾಡಿ 272 ರನ್ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಕೆಎಲ್ ರಾಹುಲ್ ದ್ವಿತೀಯ ಸ್ಥಾನಕ್ಕೆ ಜಿಗಿತ ಕಂಡಿರುವ ಕಾರಣ ಮೂರನೇ ಸ್ಥಾನಕ್ಕೆ ಕುಸಿದಿರುವ ಹಾರ್ದಿಕ್ ಪಾಂಡ್ಯ 5 ಪಂದ್ಯಗಳನ್ನಾಡಿ 228 ರನ್ ಕಲೆಹಾಕಿದ್ದಾರೆ.

ಡೇವಿಡ್ ವಾರ್ನರ್ ಅವರನ್ನು ಅಂಪೈರ್ ಔಟ್ ಕೊಡಲಿಲ್ಲ , ಆದರೆ | Oneindia Kannada
ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ

ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 1 ವಿಕೆಟ್ ಪಡೆದಿರುವ ಕುಲ್ದೀಪ್ ಯಾದವ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. 5 ಪಂದ್ಯಗಳನ್ನಾಡಿ 11 ವಿಕೆಟ್ ಪಡೆದಿರುವ ಕುಲ್ದೀಪ್ ಯಾದವ್ ದ್ವಿತೀಯ ಸ್ಥಾನದಲ್ಲಿದ್ದರೆ, 5 ಪಂದ್ಯಗಳನ್ನಾಡಿ 12 ವಿಕೆಟ್ ಪಡೆದಿರುವ ಯುಜುವೇಂದ್ರ ಚಾಹಲ್ ಅಗ್ರಸ್ಥಾನದಲ್ಲಿದ್ದಾರೆ ಹಾಗೂ 5 ಪಂದ್ಯಗಳನ್ನಾಡಿ 11 ವಿಕೆಟ್ ಪಡೆದಿರುವ ಟಿ ನಟರಾಜನ್ ತೃತೀಯ ಸ್ಥಾನದಲ್ಲಿದ್ದಾರೆ.

Story first published: Sunday, April 17, 2022, 7:17 [IST]
Other articles published on Apr 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X