IPL 2022: ಪಂಜಾಬ್‌ಗೆ ಭರ್ಜರಿ ಗೆಲುವು, ಕುತೂಹಲ ಮೂಡಿಸಿದ ಪಾಯಿಂಟ್ಸ್ ಟೇಬಲ್

ಐಪಿಎಲ್ 2022ರ ಸೀಸನ್‌ನ 48ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬಲಿಷ್ಠ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಟೂರ್ನಮೆಂಟ್‌ನಲ್ಲಿ ಕೇವಲ ಎರಡನೇ ಸೋಲು ಕಂಡಂತಹ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್‌ಗೆ ಪಂಜಾಬ್ ಸೋಲಿನ ರುಚಿ ತೋರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಗುಜರಾತ್ ಟಾಪ್ ಆರ್ಡರ್ ಬ್ಯಾಟಿಂಗ್ ವೈಫಲ್ಯದಿಂದಾಗಿ 8 ವಿಕೆಟ್ ಕಳೆದುಕೊಂಡು ಕೇವಲ 143ರನ್ ಕಲೆಹಾಕುವಷ್ಟೇ ಶಕ್ತವಾಯಿತು. ಗುಜರಾತ್ ಟೈಟನ್ಸ್ ಪರ ಸಾಯಿ ಸುದರ್ಶನ್ 50 ಎಸೆತಗಳಲ್ಲಿ ಅಜೇಯ 65 ರನ್ ಕಲೆಹಾಕಿದ್ದು ತಂಡದ ಪರ ಗರಿಷ್ಠ ಸ್ಕೋರ್ ಆಗಿತ್ತು.ಪಂಜಾಬ್ ಪರ ಬೊಂಬಾಟ್ ಬೌಲಿಂಗ್ ಮಾಡಿದ ರಬಾಡ 4 ವಿಕೆಟ್ ಉರುಳಿಸಿದ್ರು.
ಗುಜರಾತ್ ನೀಡಿದ 144ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಆರಂಭ ಕೂಡ ಉತ್ತಮವಾಗಿರಲಿಲ್ಲ. ಆರಂಭದಲ್ಲೇ ಜಾನಿ ಬೈಸ್ಟ್ರೋವ್ 1ರನ್‌ಗೆ ಔಟಾದ್ರು. ಆದ್ರೆ ಓಪನರ್ ಶಿಖರ್ ಧವನ್ ಅಜೇಯ 62, ರಾಜಪಕ್ಷೆ 40ರನ್, ಲಿಯಾಮ್ ಲಿವಿಂಗ್‌ಸ್ಟೋನ್ ಸ್ಫೋಟಕ 30ರನ್‌ಗಳ ನೆರವಿನಿಂದ ಪಂಜಾಬ್ ಕಿಂಗ್ಸ್ ಇನ್ನೂ ನಾಲ್ಕು ಓವರ್ ಬಾಕಿ ಇರುವಂತೆಯೇ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.
ಅದ್ರಲ್ಲೂ 16ನೇ ಓವರ್‌ನಲ್ಲಿ ಶಮಿ ಬೌಲಿಂಗ್‌ನಲ್ಲಿ ಲಿವಿಂಗ್‌ಸ್ಟೋನ್ ಹ್ಯಾಟ್ರಿಕ್ ಸಿಕ್ಸರ್, ಎರಡು ಬೌಂಡರಿ ಸೇರಿದಂತೆ ಒಟ್ಟು 28ರನ್ ಚಚ್ಚಿದ್ರು. ಲಿವಿಂಗ್‌ಸ್ಟೋನ್ ಕೇವಲ 10 ಎಸೆತಗಳಲ್ಲಿ 30 ರನ್ ಸಿಡಿಸಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು.
ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಪ್ಲೇ ಆಫ್ ಕನಸು ಜೀವಂತಗವಾಗಿದ್ದು, ಪಾಯಿಂಟ್ಸ್ ಟೇಬನಲ್‌ನಲ್ಲಿ ಏರಿಕೆಗೊಂಡಿದೆ. ಹಾಗಾದರೆ ಈ ಪಂದ್ಯದ ಬಳಿಕ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಯಾವ ಸ್ಥಾನದಲ್ಲಿದೆ. ಪರ್ಪಲ್ ಕ್ಯಾಪ್ ಪಟ್ಟಿ ಹಾಗೂ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆಗಿರುವ ಬದಲಾವಣೆಗಳು ಏನು? ಮುಂದೆ ಓದಿ..

ಪಾಯಿಂಟ್ಸ್ ಟೇಬಲ್
ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎಂಟು ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಐದನೇ ಸ್ಥಾನಕ್ಕೆ ಜಿಗಿದು ಆರ್‌ಸಿಬಿಯನ್ನ ಹಿಂದಿಕ್ಕಿದೆ. ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ 10 ಪಂದ್ಯಗಳಲ್ಲಿ ತಲಾ ಐದು ಗೆಲುವು ಮತ್ತು ಸೋಲನ್ನ ಕಂಡಿದ್ದು 10 ಪಾಯಿಂಟ್ಸ್ ಕಲೆಹಾಕಿದೆ. ಜೊತೆಗೆ ರನ್‌ರೇಟ್ ಸಹ (-0.229) ಬೆಳವಣಿಗೆಯಾಗಿದೆ.
ಮೊದಲ ಮೂರು ಸ್ಥಾನದಲ್ಲಿ ಗುಜರಾತ್ ಟೈಟನ್ಸ್ (16) ನಂತರದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ 14, ಮೂರನೇ ಸ್ಥಾನದಲ್ಲಿ ರಾಜಸ್ತಾನ್ ರಾಯಲ್ಸ್ 12 ಪಾಯಿಂಟ್ಸ್‌ನೊಂದಿಗಿದ್ದು, ಸನ್‌ರೈಸರ್ಸ್ ಹೈದ್ರಾಬಾದ್ ಉತ್ತಮ ರನ್‌ರೇಟ್ ಮೂಲಕ ನಾಲ್ಕನೇ ಸ್ಥಾನ ಅಲಂಕರಿಸಿದೆ.

ಆರೆಂಜ್ ಕ್ಯಾಪ್
ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಮೂರು ಶತಕದ ಮೂಲಕ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 10 ಪಂದ್ಯಗಳಲ್ಲಿ ಬಟ್ಲರ್ 588 ರನ್‌ಗಳಿಸಿದ್ದಾರೆ. ಇದರಲ್ಲಿ ಮೂರು ಶತಕ ಹಾಗೂ ಮೂರು ಅರ್ಧ ಶತಕ ಸೇರಿದೆ. ಎರಡನೇ ಸ್ಥಾನದಲ್ಲಿ ಕೆ.ಎಲ್ ರಾಹುಲ್ ಇದ್ದು 451 ರನ್‌ಗಳಿಸಿದ್ದಾರೆ. ಶ್ರೇಯಸ್ ಅಯ್ಯರ್ 234 ರನ್‌ಗಳೊಂದಿಗೆ ಮೂರನೇ ಸ್ಥಾನ, ಅಭಿಷೇಕ್ ಶರ್ಮಾ 324 ರನ್‌ಗಳ ಮೂಲಕ 4ನೇ ಸ್ಥಾನ ಹಾಗೂ ಐದನೇ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ 309ರನ್‌ಗಳಿಸಿದ್ದಾರೆ.

ಪರ್ಪಲ್ ಕ್ಯಾಪ್
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ನೀಡುವ ಪರ್ಪಲ್ ಕ್ಯಾಪ್ ಕೂಡ ಆರ್‌ಆರ್ ಆಟಗಾರನ ಬಳಿಯೇ ಉಳಿದುಕೊಂಡಿದೆ. ಯುಜುವೇಂದ್ರ ಚಾಹಲ್ ಈ ಪಟ್ಟಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಾಹಲ್ ಒಟ್ಟು 19 ವಿಕೆಟ್‌ಗಳನ್ನು ಸಂಪಾದಿಸಿದ್ದು ಈ ಪಟ್ಟಿಯಲ್ಲಿಯೂ ಆರ್‌ಆರ್ ಆಟಗಾರ ಎಲ್ಲರಿಗಿಂತ ಮುಂದಿದ್ದಾನೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್ ಕಬಳಿಸಿದ ಕೆಕೆಆರ್ ಸ್ಪಿನ್ನರ್ ಕುಲ್‌ದೀಪ್ ಯಾದವ್, ಎರಡನೇ ಸ್ಥಾನಕ್ಕೆ ಜಿಗಿದಿದ್ದು, 17 ವಿಕೆಟ್‌ಗಳೊಂದಿಗೆ, ಚಹಾಲ್‌ಗಿಂತ ಒಂದು ವಿಕೆಟ್ ಹಿಂದಿದ್ದಾರೆ. 17 ವಿಕೆಟ್‌ಗಳ ಮೂಲಕ ಎಸ್‌ಆರ್‌ಎಚ್‌ನ ಟಿ. ನಟರಾಜನ್ ಮೂರನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications