IPL 2022: ಚೆನ್ನೈ ವಿರುದ್ಧ ಗೆದ್ದು, ನಾಲ್ಕನೇ ಸ್ಥಾನಕ್ಕೆ ಜಿಗಿದ ಆರ್‌ಸಿಬಿ, ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್

ಐಪಿಎಲ್ 2022ರ ಸೀಸನ್‌ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ದಾಖಲಿಸಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಜಿಗಿತ ಸಾಧಿಸಿದೆ.
ಆರ್‌ಸಿಬಿ ನೀಡಿದ್ದ 174ರನ್‌ಗಳ ಗುರಿ ಬೆನ್ನತ್ತಿದ ಸಿಎಸ್‌ಕೆ 160 ರನ್‌ಗಳಿಗೆ ಕುಸಿತಗೊಂಡಿದೆ. ಪರಿಣಾಮ ಆರ್‌ಸಿಬಿ 13ರನ್‌ಗಳಿಂದ ಪಂದ್ಯವನ್ನ ಗೆದ್ದು ಬೀಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಓಪನರ್‌ಗಳಾದ ವಿರಾಟ್ ಕೊಹ್ಲಿ 30, ಡುಪ್ಲೆಸಿಸ್ 38 ರನ್‌ಗಳ ನೆರವಿನಿಂದ ಅರ್ಧಶತಕದ ಜೊತೆಯಾಟ ಸಾಧಿಸಿತು. ಆದ್ರೆ ನಂತರದಲ್ಲಿ ಮ್ಯಾಕ್ಸ್‌ವೆಲ್ ಬಹುಬೇಗನೆ ಔಟಾದ್ರೂ ಸಹ ಮಹಿಪಾಲ್ ಲೊಮ್ರಾರ್ 42, ದಿನೇಶ್ ಕಾರ್ತಿಕ್ ಅಜೇಯ 26 ರನ್‌ಗಳ ನೆರವನಿಂದ 8 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿತು.
ಈ ಗುರಿ ಬೆನ್ನತ್ತಿದ ಸಿಎಸ್‌ಕೆ ಉತ್ತಮ ಆರಂಭ ಪಡೆಯಿತಾದ್ರೂ ಸಹ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಸೋಲಿಗೆ ಶರಣಾಗಬೇಕಾಯಿತು. ಡೆವೊನ್ ಕಾನ್ವೆ 56, ರುತುರಾಜ್ ಗಾಯಕ್ವಾಡ್ 28 ರನ್‌ಗಳ ಕೊಡುಗೆಯಿಂದ ಉತ್ತಮ ಜೊತೆಯಾಟ ಪಡೆಯಿತು. ಆದ್ರೆ ರಾಬಿನ್ ಉತ್ತಪ್ಪ, ರಾಯುಡು ವೈಫಲ್ಯದಿಂದಾಗಿ ಸೋಲನ್ನ ಒಪ್ಪಿಕೊಳ್ಳಬೇಕಾಯಿತು.
ಮೊಯಿನ್ ಅಲಿ 34ರನ್‌ಗಳ ಕೊಡುಗೆ ತಂಡದ ಗೆಲುವಿಗೆ ಸಹಾಯವಾಗಲಿಲ್ಲ. ಜಡೇಜಾ, ಧೋನಿ ಬಹುಬೇಗ ಔಟಾದ ಪರಿಣಾಮ ಸಿಎಸ್‌ಕೆ 13ರನ್‌ಗಳಿಂದ ಸೋಲು ಕಂಡಿತು.
ಆರ್‌ಸಿಬಿ ಪರ ಹರ್ಷಲ್ ಪಟೇಲ್ 3, ಗ್ಲೆನ್ ಮ್ಯಾಕ್ಸ್‌ವೆಲ್ 2, ಹಸರಂಗ, ಶಬಾಜ್ ಅಹ್ಮದ್, ಜೋಶ್ ಹೇಜಲ್‌ವುಡ್ ತಲಾ ಒಂದು ವಿಕೆಟ್ ಪಡೆದರು.
ಈ ಗೆಲುವಿನೊಂದಿಗೆ ಆರ್‌ಸಿಬಿ ಆಫ್ ನತ್ತ ಹೆಜ್ಜೆಯಿಟ್ಟಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಏರಿಕೆಗೊಂಡಿದೆ. ಹಾಗಾದರೆ ಈ ಪಂದ್ಯದ ಬಳಿಕ ಆರ್‌ಸಿಬಿ ಮತ್ತು ಸಿಎಸ್‌ಕೆ ಅಂಕಪಟ್ಟಿಯಲ್ಲಿ ಯಾವ ಸ್ಥಾನದಲ್ಲಿದೆ. ಪರ್ಪಲ್ ಕ್ಯಾಪ್ ಪಟ್ಟಿ ಹಾಗೂ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆಗಿರುವ ಬದಲಾವಣೆಗಳು ಏನು? ಮುಂದೆ ಓದಿ..

ಪಾಯಿಂಟ್ಸ್ ಟೇಬಲ್
ಈ ಪಂದ್ಯದಲ್ಲಿ ಆರ್‌ಸಿಬಿ 13ರನ್‌ಗಳಿಂದ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಡುಪ್ಲೆಸಿಸ್ ನಾಯಕತ್ವದ ಆರ್‌ಸಿಬಿ 11 ಪಂದ್ಯಗಳಲ್ಲಿ 6 ಗೆಲುವು ಮತ್ತು 5 ಪಂದ್ಯಗಳಲ್ಲಿ ಸೋಲನ್ನ ಕಾಣುವ ಮೂಲಕ 12 ಪಾಯಿಂಟ್ಸ್‌ಗಳಿಸಿದೆ.
ಮೊದಲ ಮೂರು ಸ್ಥಾನದಲ್ಲಿ ಗುಜರಾತ್ ಟೈಟನ್ಸ್ (16) ನಂತರದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ 14, ಮೂರನೇ ಸ್ಥಾನದಲ್ಲಿ ರಾಜಸ್ತಾನ್ ರಾಯಲ್ಸ್ 12 ಪಾಯಿಂಟ್ಸ್‌ನೊಂದಿಗಿದ್ದು, ಆರ್‌ಸಿಬಿ ನಂತರದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ಉತ್ತಮ ರನ್‌ರೇಟ್ ಮೂಲಕ ಐದನೇ ಸ್ಥಾನ ಅಲಂಕರಿಸಿದೆ.

ಆರೆಂಜ್ ಕ್ಯಾಪ್
ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಮೂರು ಶತಕದ ಮೂಲಕ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 10 ಪಂದ್ಯಗಳಲ್ಲಿ ಬಟ್ಲರ್ 588 ರನ್‌ಗಳಿಸಿದ್ದಾರೆ. ಇದರಲ್ಲಿ ಮೂರು ಶತಕ ಹಾಗೂ ಮೂರು ಅರ್ಧ ಶತಕ ಸೇರಿದೆ. ಎರಡನೇ ಸ್ಥಾನದಲ್ಲಿ ಕೆ.ಎಲ್ ರಾಹುಲ್ ಇದ್ದು 451 ರನ್‌ಗಳಿಸಿದ್ದಾರೆ. ಶಿಖರ್ ಧವನ್ 369 ರನ್ ಗಳಿಸಿ ಮೂರನೇ ಸ್ಥಾನ ಪಡೆದಿದ್ದಾರೆ. ಶ್ರೇಯಸ್ ಅಯ್ಯರ್ 324, ಅಭಿಷೇಕ್ ಶರ್ಮಾ 324 ರನ್‌ಗಳ ಮೂಲಕ 4ನೇ ಸ್ಥಾನ ಹಾಗೂ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ನೀಡುವ ಪರ್ಪಲ್ ಕ್ಯಾಪ್ ಕೂಡ ಆರ್‌ಆರ್ ಆಟಗಾರನ ಬಳಿಯೇ ಉಳಿದುಕೊಂಡಿದೆ. ಯುಜುವೇಂದ್ರ ಚಾಹಲ್ ಈ ಪಟ್ಟಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಾಹಲ್ ಒಟ್ಟು 19 ವಿಕೆಟ್‌ಗಳನ್ನು ಸಂಪಾದಿಸಿದ್ದು ಈ ಪಟ್ಟಿಯಲ್ಲಿಯೂ ಆರ್‌ಆರ್ ಆಟಗಾರ ಎಲ್ಲರಿಗಿಂತ ಮುಂದಿದ್ದಾನೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್ ಕಬಳಿಸಿದ ಕೆಕೆಆರ್ ಸ್ಪಿನ್ನರ್ ಕುಲ್‌ದೀಪ್ ಯಾದವ್, ಎರಡನೇ ಸ್ಥಾನಕ್ಕೆ ಜಿಗಿದಿದ್ದು, 17 ವಿಕೆಟ್‌ಗಳೊಂದಿಗೆ, ಚಹಾಲ್‌ಗಿಂತ ಒಂದು ವಿಕೆಟ್ ಹಿಂದಿದ್ದಾರೆ. 17 ವಿಕೆಟ್‌ಗಳ ಮೂಲಕ ಪಂಜಾಬ್ ಕಿಂಗ್ಸ್‌ನ ಕಗಿಸೊ ರಬಾಡ ಮತ್ತು ಎಸ್‌ಆರ್‌ಎಚ್‌ನ ಟಿ. ನಟರಾಜನ್ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ. 15 ವಿಕೆಟ್‌ಗಳೊಂದಿಗೆ ಉಮೇಶ್ ಯಾದವ್ ಐದನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications