ಲಕ್ನೋ ವಿರುದ್ಧ ವಿರುದ್ಧ ಆರ್‌ಸಿಬಿ ಗೆದ್ದ ನಂತರ ಅಂಕಪಟ್ಟಿ ಹೇಗಿದೆ? ಆರೆಂಜ್, ಪರ್ಪಲ್ ಕ್ಯಾಪ್ ಯಾರ ಮುಡಿಗೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದ ಬಳಿಕ ಆರ್‌ಸಿಬಿ ಅಂಕಪಟ್ಟಿಯಲ್ಲಿ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಆರ್‌ಸಿಬಿ ದಾಂಡಿಗರ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಯಿತು. ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಬುದೇಶಾಯಿ ಅವರಂತಾ ಆಟಗಾರರು ಹೆಚ್ಚು ರನ್‌ಗಳ ಕೊಡುಗೆ ನಿಡಲು ವಿಫಲವಾದರು. ಆದರೆ ನಾಯಕ ಫಾಫ್ ಡು ಪ್ಲೆಸಿಸ್ ಅಮೋಘ ಹೋರಾಟವನ್ನು ಪ್ರದರ್ಶಿಸಿದ್ದು ತಂಡದ ಮೊತ್ತ 181 ರನ್‌ಗಳಿಸಲು ಕಾರಣವಾದರು. ಈ ಪಂದ್ಯದಲ್ಲಿ ಫಾಫ್ 96 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದರು.
ಈ ಮೊತ್ತವನ್ನು ಬೆನ್ನಟ್ಟಿದ ಎಲ್‌ಎಸ್‌ಜಿ ತಂಡದ ಆರಂಭ ಕೂಡ ಹೇಳಿಕೊಳ್ಳುವಂತಿರಲಿಲ್ಲ. ಆದರೆ ನಾಯಕ ಕೆಎಲ್ ರಾಹುಲ್ ಹಾಗೂ ಕೃನಾಲ್ ಪಾಂಡ್ಯ ಆರ್‌ಸಿಬಿ ಬೌಲರ್‌ಗಳ ದಾಳಿಯನ್ನು ಕೆಲ ಕಾಲ ಸಮರ್ಥವಾಗಿ ಎದುರಿಸಿದರು. ಆದರೆ ಮತ್ತೆ ಆರ್‌ಸಿಬಿ ಬೌಲರ್‌ಗಳು ಮೇಲುಗೈ ಸಾಧಿಸಿದರು. ಅದರಲ್ಲೂ ವೇಗಿ ಜೋಶ್ ಹೇಜಲ್‌ವುಡ್ ಈ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಲಕ್ನೋ ತಂಡಕ್ಕೆ ಆಘಾತ ನೀಡಿದ್ದಾರೆ. ಈ ಮೂಲಕ ಆರ್‌ಸಿಬಿ ಈ ಪಂದ್ಯದಲ್ಲಿ 18 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ.
ಹಾಗಾದರೆ ಈ ಪಮದ್ಯದ ಬಳಿಕ ಆರ್‌ಸಿಬಿ ಅಂಕಪಟ್ಟಿಯಲ್ಲಿ ಯಾವ ಸ್ಥಾನದಲ್ಲಿದೆ. ಪರ್ಪಲ್ ಕ್ಯಾಪ್ ಪಟ್ಟಿ ಹಾಗೂ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆಗಿರುವ ಬದಲಾವಣೆಗಳು ಏನು? ಮುಂದೆ ಓದಿ..

ಅಂಕ ಪಟ್ಟಿ ಹೀಗಿದೆ
ಈ ಪಂದ್ಯದಲ್ಲಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಏರಿಕೆ ಕಂಡಿದ್ದು ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಆರ್‌ಸಿಬಿ ತಂಡ 7 ಪಂದ್ಯಗಳನ್ನಾಡಿದ್ದು 5 ಪಂದ್ಯಗಳಲ್ಲಿ ಗೆದ್ದು 10 ಅಂಕಗಳನ್ನು ಪಡೆದುಕೊಂಡಿದೆ. ಇನ್ನು 6 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಗುಜರಾತ್ ಟೈಟನ್ಸ್ ಅಗ್ರಸ್ಥಾನದಲ್ಲಿಯೇ ಉಳಿದುಕೊಂಡಿದೆ. ಇನ್ನುಳಿದಂತೆ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿರುವ ರಾಜಸ್ಥಾನ್ ರಾಯಲ್ಸ್ ತೃತೀಯ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಅಂಕಗಳನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ಪಟ್ಟಿ
ಟೂರ್ನಿಯಲ್ಲಿ ಅತೊ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಮುಂದುವರಿದಿದ್ದಾರೆ. ಇಂದಿನ ಪಂದ್ಯದಲ್ಲಿ 30 ರನ್‌ಗಳಿಸಿರುವ ಕೆಎಲ್ ರಾಹುಲ್ 2ನೇ ಸ್ಥಾನವನ್ನು ಪಡೆದಿದ್ದು ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಕೂಡ ಆರೆಂಜ್ ಕ್ಯಾಪ್ ಸ್ಪರ್ಧೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಫಾಫ್ 7 ಇನ್ನಿಂಗ್ಸ್‌ಗಳಲ್ಲಿ 250 ರನ್‌ಗಳಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಐಯ್ಯರ್ ಇದ್ದಾರೆ.

ಬದಲಾಗದ ಪರ್ಪಲ್‌ಕ್ಯಾಪ್ ಪಟ್ಟಿ
ರಾಯಲ್ ಚಾಲೆಂಜರ್ಸ್ ಬೆಂಗಳುರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧಧ ಪಂದ್ಯದ ಬಳಿಕ ಪರ್ಪಲ್‌ಕ್ಯಾಪ್ ಪಟ್ಟಿಯ ಅಗ್ರಸ್ಥಾನದಲ್ಲಿ ಬದಲಾವಣೆಯಾಗಿಲ್ಲ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಹ್ಯಾಟ್ರಿಕ್ ಸಹಿತ 5 ವಿಕೆಟ್ ಕಬಳಿಸಿದ ಯುಜುವೇಂದ್ರ ಚಾಹಲ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. 6 ಪಂದ್ಯಗಳನ್ನಾಡಿ 17 ವಿಕೆಟ್ ಪಡೆದಿರುವ ಚಾಹಲ್ ಅಗ್ರಸ್ಥಾನದಲ್ಲಿದ್ದರೆ, 6 ಪಂದ್ಯಗಳನ್ನಾಡಿ 12 ವಿಕೆಟ್ ಪಡೆದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ಟಿ ನಟರಾಜನ್ ದ್ವಿತೀಯ ಸ್ಥಾನದಲ್ಲಿದ್ದಾರೆ ಹಾಗೂ 5 ಪಂದ್ಯಗಳನ್ನಾಡಿ 11 ವಿಕೆಟ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕುಲ್ದೀಪ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ ಕೇವಲ ಮೂರು ಪಂದ್ಯಗಳಲ್ಲಿ ಆಡಿ 8 ವಿಕೆಟ್ ಸಂಪಾದಿಸಿರುವ ಜೋಶ್ ಹೇಜಲ್‌ವುಡ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಟಾಪ್ 10ನಲ್ಲಿ ಸ್ಥಾನ ಪಡೆದಿರುವುದು ಗಮನಾರ್ಹ ಅಂಶ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications