
ಪಾಯಿಂಟ್ಸ್ ಟೇಬಲ್
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿರುವ ಆರ್‌ಸಿಬಿ ಆಡಿರುವ 12 ಪಂದ್ಯಗಳ ಪೈಕಿ 7ನೇ ಗೆಲುವು ಸಂಪಾದಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 14 ಅಂಕಗಳನ್ನು ಸಂಪಾದಿಸಿದೆ. ಭೀರೀ ಕುಸಿದಿದ್ದ ರನ್‌ರೇಟ್ ಪ್ರಮಾಣವನ್ನು ಕೂಡ ಒಂದು ಹಂತಕ್ಕೆ ಉತ್ತಮ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು -0.115 ನೆಟ್ ರನ್‌ರೇಟ್ ಹೊಂದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಭದ್ರವಾಗಿದೆ. ಆರ್‌ಸಿಬಿ ವಿರುದ್ಧ ಸೋಲು ಅನುಭವಿಸಿರುವ ಎಸ್‌ಆರ್‌ಹೆಚ್ ತಂಡ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಫಿಟಲ್ಸ್ ತಂಡದ ಫಲಿತಾಂಶ ಕೂಡ ಆರ್‌ಸಿಬಿ ತಂಡಕ್ಕೆ ಪೂರಕವಾಗಿಯೇ ಬಂದಿದೆ. ಈಗಾಗಲೇ ಪ್ಲೇಆಫ್ ಹಂತಕ್ಕೆರುವ ಸ್ಪರ್ಧೆಯಿಂದ ಬಹುತೇಕ ಹೊರಬಿದ್ದಿರುವ ಸಿಎಸ್‌ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೂ ಪ್ಲೇ ಆಫ್ ಹಾದಿ ದುರ್ಗಮವಾಗುವಂತೆ ಮಾಡಿದೆ. ಆಡಿರುವ 11 ಪಂದ್ಯಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ 5 ಗೆಲುವು ಹಾಗೂ 6 ಸೋಲು ಅನುಭವಿಸಿದ್ದು 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ 4ನೇ ಗೆಲುವು ಸಂಪಾದಿಸಿದ್ದು 8 ಅಂಕಗಳನ್ನು ಹೊಂದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 8ನೆ ಸ್ಥಾನ ಪಡೆದುಕೊಂಡಿದೆ.

ಆರೆಂಜ್ ಕ್ಯಾಪ್
ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಮೂರು ಶತಕದ ಮೂಲಕ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. 11 ಪಂದ್ಯಗಳಲ್ಲಿ ಬಟ್ಲರ್ 618 ರನ್‌ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಇದು ಮೂರು ಶತಕ ಹಾಗೂ ಮೂರು ಅರ್ಧ ಶತಕಗಳನ್ನು ಒಳಗೊಂಡಿದೆ. ಎರಡನೇ ಸ್ಥಾನದಲ್ಲಿ ಲಕ್ನೋ ಸೂಪರ್ ಕೈಂಟ್ಸ್ ನಾಯಕ ಕೆ.ಎಲ್ ರಾಹುಲ್ ಇದ್ದು 451 ರನ್‌ಗಳಿಸಿದ್ದಾರೆ. ನಂತರದಲ್ಲಿ ಸ್ಥಾನದಲ್ಲಿ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಇದ್ದು 389 ರನ್‌ಗಳನ್ನು ಗಳಿಸಿದ್ದಾರೆ. ಎಸ್‌ಆರ್‌ಹೆಚ್ ಪಂದ್ಯದಲ್ಲಿ ಫಾಫ್ ಗಳಿಸಿದ 73 ರನ್‌ಗಳಿಸಿದ್ದು ಆರೆಂಜ್ ಕ್ಯಾಪ್ ಪಟ್ಟಿಯಲ್ಲಿಯೂ ಉತ್ತಮ ಸ್ಥಾನ ಪಡೆಯುವಂತೆ ಮಾಡಿದೆ. ನಂತರ ಶಿಖರ್ ಧವನ್ 381 ರನ್ ಹಾಗೂ, ಡೇವಿಡ್ ವಾರ್ನರ್ 375 ರನ್‌ಗಳ ಮೂಲಕ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್
ಪರ್ಪಲ್‌ಕ್ಯಾಪ್ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುಜುವೇಂದ್ರ ಚಾಹಲ್‌ಗೆ ಆರ್‌ಸಿಬಿ ತಂಡದ ವನಿಂದು ಹಸರಂಗಾ ಅವರಿಂದ ತೀವ್ರ ಪೈಪೋಟಿ ಎದುರಾಗಿದೆ. ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಕಬಳಿಸುವ ಮೂಲಕ ಹಸರಂಗಾ 21 ವಿಕೆಟ್‌ಗಳನ್ನು ಪಡೆದಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿರುವ ಚಾಹಲ್ ಖಾತೆಯಲ್ಲಿ 22 ವಿಕೆಟ್‌ಗಳಿವೆ. ಮೂರನೇ ಸ್ಥಾನದಲ್ಲಿ ಕಗಿಸೋ ರಬಾಡ, ನಾಲ್ಕನೇ ಸ್ಥಾನದಲ್ಲಿ ಕುಲ್‌ದೀಪ್ ಯಾದವ್ ಹಾಗೂ ನಂತರ ಟಿ ನಟರಾಜನ್ ಇದ್ದಾರೆ


Click it and Unblock the Notifications












