ಆರ್‌ಸಿಬಿ ಸೋತ ನಂತರ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ; ಆರೆಂಜ್, ಪರ್ಪಲ್ ಕ್ಯಾಪ್ ಯಾರ ಮುಡಿಗೆ?

ಕಳೆದ ಮಾರ್ಚ್ 26ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಶೇ.50ರಷ್ಟು ಪಂದ್ಯಗಳು ಏಪ್ರಿಲ್ 23ರಂದು ಮುಕ್ತಾಯಗೊಂಡಿವೆ. ಹೌದು, ಲೀಗ್ ಹಂತದ 36 ಪಂದ್ಯಗಳು ಮುಕ್ತಾಯವಾಗಿದ್ದು, ಪ್ಲೇ ಆಫ್ ಪ್ರವೇಶಿಸಲು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಏಪ್ರಿಲ್ 23ರ ಶನಿವಾರದಂದು 2 ಪಂದ್ಯಗಳು ನಡೆದಿದ್ದು, ಪ್ರಥಮ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆಲುವನ್ನು ಕಂಡಿದ್ದರೆ, ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆದ್ದು ಬೀಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ಪಡೆ ಕೇವಲ 68 ರನ್‌ಗಳಿಗೆ ಆಲ್ ಔಟ್ ಆಗಿ ಟೂರ್ನಿಯಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ತಂಡ ಎಂಬ ಕೆಟ್ಟ ಹಣೆಪಟ್ಟಿಯನ್ನು ಹೊತ್ತುಕೊಂಡಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ ಈ ಅಲ್ಪ ಮೊತ್ತದ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 72 ರನ್ ಬಾರಿಸಿ 9 ವಿಕೆಟ್‍ಗಳ ಭರ್ಜರಿ ಜಯವನ್ನು ದಾಖಲಿಸಿತು.
ಈ ಮೂಲಕ ಟೂರ್ನಿಯ ಆರಂಭದಲ್ಲಿ ಮಂಕಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಂದು ಪಂದ್ಯದಲ್ಲಿ ಸೋತಿದೆ. ಹೀಗೆ ಏಪ್ರಿಲ್ 23ರಂದು ನಡೆದ ಈ 2 ಪಂದ್ಯಗಳು ಮುಕ್ತಾಯಗೊಂಡ ನಂತರ ಅಂಕಪಟ್ಟಿಯಲ್ಲಿ ಯಾವ ತಂಡ ಅಗ್ರಸ್ಥಾನದಲ್ಲಿದೆ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ..

ಅಂಕ ಪಟ್ಟಿ ಹೀಗಿದೆ
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಜಯ ಸಾಧಿಸಿದ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೂ 7 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 12 ಅಂಕಗಳನ್ನು ಪಡೆದುಕೊಂಡಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿದ ಸನ್ ರೈಸರ್ಸ್ ಹೈದರಾಬಾದ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಈ ಎರಡೂ ಪಂದ್ಯಗಳು ಆರಂಭವಾಗುವುದಕ್ಕೂ ಮುನ್ನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದು, ದ್ವಿತೀಯ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಆರೆಂಜ್ ಕ್ಯಾಪ್ ಪಟ್ಟಿ ಹೀಗಿದೆ
ಟೂರ್ನಿಯಲ್ಲಿ ಆಡಿರುವ 7 ಪಂದ್ಯಗಳ ಪೈಕಿ ಈಗಾಗಲೇ 3 ಪಂದ್ಯಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿರುವ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ 491 ರನ್‌ಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 67 ರನ್ ಬಾರಿಸಿದ ಹಾರ್ದಿಕ್ ಪಾಂಡ್ಯ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ ಹಾಗೂ ಕೆಎಲ್ ರಾಹುಲ್ ಈ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ
ಟೂರ್ನಿಯಲ್ಲಿ ಸಾಲು ಸಾಲು ಉತ್ತಮ ಪ್ರದರ್ಶನಗಳೊಂದಿಗೆ ಮಿಂಚುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯುಜುವೇಂದ್ರ ಚಹಲ್ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ತಮ್ಮ ಪಾರುಪತ್ಯ ಮುಂದುವರಿಸಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ಚಹಲ್ 18 ವಿಕೆಟ್ ಪಡೆದು ಅಗ್ರ ಸ್ಥಾನದಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 3 ವಿಕೆಟ್ ಪಡೆದು ಮಿಂಚಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಟಿ ನಟರಾಜನ್ ಒಟ್ಟು 15 ವಿಕೆಟ್ ಕಬಳಿಸಿ ದ್ವಿತೀಯ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ ಹಾಗೂ 13 ವಿಕೆಟ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕುಲದೀಪ್ ಯಾದವ್ ಈ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications