ಐಪಿಎಲ್ 2022: ಪ್ಲೇಆಫ್ ಪೈಪೋಟಿಗೆ ಟ್ವಿಸ್ಟ್ ನೀಡಿದ ಕೊಲ್ಕತ್ತಾ: ಅಂಕಪಟ್ಟಿಯ ವಿವರ ಹೀಗಿದೆ

ಐಪಿಎಲ್‌ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸತತ ಐದು ಪಂದ್ಯಗಳ ಸೋಲಿನ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆದ್ದು ಬೀಗಿದೆ. ಇತ್ತ ಭರ್ಜರಿ ಯಶಸ್ಸಿನಿಂದ ಬೀಗುತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡ ಸತತ ಎರಡನೇ ಪಂದ್ಯದಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿನ ಪೈಪೋಟಿ ತೀವ್ರಗೊಳ್ಳುವಂತಾಗಿದೆ.
ಈ ಪಂದ್ಯದಲ್ಲಿ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡ 152 ರನ್‌ಗಳನ್ನು ಗಳಿಸಿತ್ತು. ಇದನ್ನು ಬೆನ್ನಟ್ಟಿದ ಕೆಕೆಆರ್ ತಂಡ 3 ವಿಕೆಟ್ ಕಳೆದುಕೊಂಡುಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಕೆಕೆಆರ್ ತಂಡದ ಪರವಾಗಿ ರಿಂಕು ಸಿಂಗ್ ಹಾಗೂ ನಿತೀಶ್ ರಾಣಾ ಮಧ್ಯೆ ಬಂದ ಅದ್ಭುತ ಜೊತೆಯಾಟದಿಂದಾಗಿ ಇನ್ನೂ ಐದು ಎಸೆತಗಳು ಬಾಕಿಯಿರುವಂತೆಯೇ ಕೆಕೆಆರ್ ಗೆದ್ದುಕೊಂಡಿದೆ.
ಹಾಗಾದರೆ ಈ ಪಂದ್ಯದ ಬಳಿಕ ಅಂಕಪಟ್ಟಿಯಲ್ಲಿ ಯಾವ ರೀತಿಯ ಬದಲಾವಣೆಗಳು ಆಗಿದೆ. ಪರ್ಪಲ್ ಕ್ಯಾಪ್ ಪಟ್ಟಿ ಹಾಗೂ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಯಾರೆಲ್ಲಾ ಅಗ್ರಸ್ಥಾನದಲ್ಲಿದ್ದಾರೆ? ಮುಂದೆ ಓದಿ..

ಪಾಯಿಂಟ್ಸ್ ಟೇಬಲ್
ಸೋಮವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸೋಲು ಅನುಭವಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿದ 10 ಪಂದ್ಯಗಳಲ್ಲಿ 4ನೇ ಗೆಲುವು ಸಾಧಿಸಿದೆ. ಈ ಪಂದ್ಯದ ಫಲಿತಾಂಶದ ಬಳಿಕ ತಕ್ಷಣವೇ ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನದಲ್ಲಿಯೇ ಮುಂದುವರಿದಿದ್ದರೆ ಇಂದು ಗೆದ್ದ ಕೆಕೆಆರ್ 8ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಏರಿದೆ. ಆದರೆ ಈ ಪಂದ್ತದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸೋಲು ಅಂಕಪಟ್ಟಿಯಲ್ಲಿ ಟಾಪ್ 4ರಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿರುವ ತಂಡಗಳಿಗೆ ಪೈಪೋಟಿ ತೀವ್ರಗೊಳಿಸಲು ಅವಕಾಶ ನೀಡಿದಂತಾಗಿದೆ. ಆರ್‌ಸಿಬಿ ಸಹಿತ ಇತರ ತಂಡಗಳು ಇಂದಿನ ಈ ಫಲಿತಾಂಶದ ಲಾಭ ಪಡೆಯುವ ಉತ್ಸಾಹದಲ್ಲಿದೆ.

ಆರೆಂಜ್ ಕ್ಯಾಪ್
ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲವಾದರು. ಹಾಗಿದ್ದರೂ 22 ರನ್‌ಗಳ ಕೊಡುಗೆ ಜೋಸ್ ಬಟ್ಲರ್ ಅವರಿಂದ ತಂಡಕ್ಕೆ ಬಂದಿದೆ. ಹೀಗಾಗಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ 588 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಗಟ್ಟಿಯಾಗಿ ನೆಲೆಯೂರಿದ್ದಾರೆ. ಎರಡನೇ ಸ್ಥಾನದಲ್ಲಿರುವ ಕೆಎಲ್ ರಾಹುಲ್ 451 ರನ್‌ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಅಭಿಶೇಕ್ ಶರ್ಮಾ ಇದ್ದರೆ ಶ್ರೇಯಸ್ ಐಯ್ಯರ್ 4 ಹಾಗೂ ಹಾರ್ದಿಕ್ ಪಾಮಡ್ಯ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ನೀಡುವ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಕೂಡ ರಾಜಸ್ಥಾನ್ ರಾಯಲ್ಸ್ ಆಟಗಾರನೇ ಮುಂದಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿಯುಜುವೇಂದ್ರ ಚಾಹಲ್ ಒಮದು ವಿಕೆಟ್ ಪಡೆಯುವಲ್ಲಿಯೂ ವಿಫಲವಾಗಿದ್ದಾರೆ. ಹಾಗಿದ್ದರೂ ವಿಕೆಟ್ ಗಳಿಕೆಯ ಪಟ್ಟಿಯಲ್ಲಿ ಯುಜಿ ಮುಂದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕುಲ್ದೀಪ್ ಯಾದವ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು 17 ವಿಕೆಟ್ ಸಂಪಾದಿಸಿದ್ದಾರೆ. ಯಾರ್ಕರ್ ಸ್ಪೆಶಲಿಸ್ಟ್ ಟಿ ನಟರಾಜನ್ 3ನೇ ಸ್ಥಾನದಲ್ಲಿದ್ದರೆ ಉಮೇಶ್ ಯಾದವ್. ವನಿಂದು ಹಸರಂಗ ನಂತರದ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications