ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: KKR vs SRH ಪಂದ್ಯದ ನಂತರ ಪಾಯಿಂಟ್ಸ್ ಟೇಬಲ್; ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ

 IPL 2022: Points Table, Orange Cap, Purple Cap Lists After KKR vs SRH Match; Happy News For RCB Fans

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಶನಿವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ರ 61ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಆಲ್‌ರೌಂಡ್ ಪ್ರದರ್ಶನದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 54 ರನ್‌ಗಳಿಂದ ಸೋಲಿಸಿತು.

ಕೆಕೆಆರ್ ಪರ ಆಂಡ್ರೆ ರಸೆಲ್ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಪರಿಣಾಮಕಾರಿ ಆಟ ಪ್ರದರ್ಶಿಸಿ, ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್, ಆಂಡ್ರೆ ರಸೆಲ್ (ಅಜೇಯ 49 ರನ್‌) ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್‌ಗಳ ಉತ್ತಮ ಮೊತ್ತ ದಾಖಲಿಸಿದರು.

178 ರನ್‌ಗಳ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 123ಕ್ಕೆ ನಿಯಂತ್ರಣಗೊಂಡಿತು. ಆಂಡ್ರೆ ರಸೆಲ್ ಪ್ರಮುಖ ಮೂರು ವಿಕೆಟ್‌ಗಳನ್ನು ಪಡೆದರು, ಇದರಿಂದ ಕೆಕೆಆರ್ 54 ರನ್‌ಗಳಿಂದ ಗೆಲ್ಲಲು ಸಹಾಯವಾಯಿತು. ಈ ಗೆಲುವಿನಿಂದಾಗಿ ಕೆಕೆಆರ್‌ನ ಪ್ಲೇಆಫ್ ಆಸೆ ಇನ್ನೂ ಜೀವಂತವಾಗಿದೆ.

ಐಪಿಎಲ್ 2022ರ ಅಂಕಗಳ ಪಟ್ಟಿ

ಐಪಿಎಲ್ 2022ರ ಅಂಕಗಳ ಪಟ್ಟಿ

ಇನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಶನಿವಾರದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಖುಷಿ ನೀಡಿದೆ. ಆರ್‌ಸಿಬಿ ಪ್ಲೇಆಫ್ ಕನಸಿಗೆ ಕುತ್ತು ತರುತ್ತಿದ್ದ ಎಸ್ಆರ್‌ಎಚ್ ಸೋತಿರುವುದರಿಂದ ಆರ್‌ಸಿಬಿ ನಾಲ್ಕನೇ ಸ್ಥಾನದಲ್ಲಿ ಮುಂದುವರೆದಿದೆ.

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಜಿಗಿದರೆ, ಎಸ್‌ಆರ್‌ಎಚ್ 10 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.

ಆರ್‌ಸಿಬಿ 13 ಪಂದ್ಯಗಳಿಂದ 14 ಅಂಕ

ಆರ್‌ಸಿಬಿ 13 ಪಂದ್ಯಗಳಿಂದ 14 ಅಂಕ

ಈವರೆಗೆ ಗುಜರಾತ್ ಟೈಟನ್ಸ್ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ಏಕೈಕ ತಂಡವಾಗಿದ್ದು, 12 ಪಂದ್ಯಗಳಿಂದ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಿಂದ 14 ಪಂದ್ಯಗಳನ್ನು ಹೊಂದಿದೆ. ಆರ್‌ಸಿಬಿ 13 ಪಂದ್ಯಗಳಿಂದ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಕೂಡ 12 ಅಂಕಗಳನ್ನು ಹೊಂದಿದೆ ಮತ್ತು ಪ್ರಸ್ತುತ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ಏಳನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಕ್ರಮವಾಗಿ ಎಂಟು ಮತ್ತು ಆರು ಅಂಕಗಳೊಂದಿಗೆ ಕೊನೆಯ ಎರಡು ಸ್ಥಾನಗಳಲ್ಲಿವೆ.

ಆರೆಂಜ್ ಕ್ಯಾಪ್ ರೇಸ್

ಆರೆಂಜ್ ಕ್ಯಾಪ್ ರೇಸ್

ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಪ್ರಸ್ತುತ 625 ರನ್ ಗಳಿಸಿ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ 459 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ನ ಡೇವಿಡ್ ವಾರ್ನರ್ 427 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶಿಖರ್ ಧವನ್ 402 ರನ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ 399 ರನ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಈ ಬೌಲರ್ ನ ಹಾಡಿ ಹೊಗಳಿದ ಎಂ ಎಸ್ ಧೋನಿ! | Oneindia Kannada
ಪರ್ಪಲ್ ಕ್ಯಾಪ್ ರೇಸ್

ಪರ್ಪಲ್ ಕ್ಯಾಪ್ ರೇಸ್

ಆರ್‌ಸಿಬಿ ಲೆಗ್ ಸ್ಪಿನ್ನರ್ ವನಿಂದು ಹಸರಂಗಾ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಈ ಋತುವಿನಲ್ಲಿ ಇದುವರೆಗೆ 23 ವಿಕೆಟ್‌ಗಳನ್ನು ಹೊಂದಿದ್ದಾರೆ. ಇಷ್ಟೇ ವಿಕೆಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್‌ನ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಎರಡನೇ ಸ್ಥಾನದಲ್ಲಿದ್ದಾರೆ. ಎಕಾನಮಿ ಆಧಾರದ ಮೇಲೆ ಪರ್ಪಲ್ ಕ್ಯಾಪ್ ವನಿಂದು ಹಸರಂಗಾ ಬಳಿ ಇದೆ.

ಪಜಾಬ್ ಕಿಂಗ್ಸ್‌ನ ಕಗಿಸೊ ರಬಾಡ ಅವರು ತಮ್ಮ ಹೆಸರಿಗೆ 21 ವಿಕೆಟ್‌ಗಳನ್ನು ಹೊಂದಿರುವ ಕಾರಣ ಇಬ್ಬರು ಸ್ಪಿನ್ನರ್‌ಗಳ ನಂತರ ಮೂರನೇ ಸ್ಥಾನದಲ್ಲಿ ಇದ್ದಾರೆ. ಆರ್‌ಸಿಬಿಯ ಇನ್ನೊಬ್ಬ ಬೌಲರ್ ಹರ್ಷಲ್ ಪಟೇಲ್ ಮತ್ತು ಕುಲದೀಪ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

Story first published: Sunday, May 15, 2022, 17:14 [IST]
Other articles published on May 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X