IPL 2022: MI vs SRH ಪಂದ್ಯದ ನಂತರ ಪಾಯಿಂಟ್ಸ್ ಟೇಬಲ್; ಆರ್‌ಸಿಬಿ ಫ್ಯಾನ್ಸ್‌ಗೆ ನಿರಾಸೆ

ಮಂಗಳವಾರ ರಾತ್ರಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ಸೀಸನ್‌ನ 65ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ಮುಂಬೈ ಇಂಡಿಯನ್ಸ್ (MI) ಅನ್ನು ಮೂರು ರನ್‌ಗಳಿಂದ ರೋಚಕವಾಗಿ ಸೋಲಿಸಿತು.
194 ರನ್‌ಗಳ ಬೃಹತ್ ರನ್ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವನ್ನು 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 190ಕ್ಕೆ ಸನ್‌ರೈಸರ್ಸ್ ಹೈದರಾಬಾದ್ ನಿರ್ಬಂಧಿಸಿತು. ಎಸ್ಆರ್‌ಎಚ್ ಪರವಾಗಿ ಉಮ್ರಾನ್ ಮಲಿಕ್ ಮೂರು ವಿಕೆಟ್ ಪಡೆದರು.
ಆರಂಭದಲ್ಲಿ ರಾಹುಲ್ ತ್ರಿಪಾಠಿ 44 ಎಸೆತಗಳಲ್ಲಿ 76 ರನ್ ಗಳಿಸುವ ಮೂಲಕ ಎಸ್ಆರ್‌ಎಚ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 193 ರನ್ ಗಳಿಸಲು ನೆರವಾಯಿತು. ಮುಂಬೈ ಇಂಡಿಯನ್ಸ್ ಪರ ರಮಣದೀಪ್ ಸಿಂಗ್ ಮೂರು ಓವರ್‌ಗಳಲ್ಲಿ ಮೂರು ವಿಕೆಟ್ ಪಡೆದರು.

ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆ
ಮಂಗಳವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಎಸ್ಆರ್‌ಎಚ್ ತಂಡ ಮೂರು ರನ್‌ಗಳಿಂದ ಗೆದ್ದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಹಿ ಸುದ್ದಿಯಾಗಿದೆ. ಪ್ಲೇಆಫ್ ಸ್ಥಾನಕ್ಕೇರಲು ಆರ್‌ಸಿಬಿ ತಂಡಕ್ಕೆ ಎಸ್ಆರ್‌ಎಚ್ ತಂಡ ಸವಾಲು ಒಡ್ಡಲಿದೆ. ಇದರಿಂದ ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

IPL 2022ರ 65ನೇ ಪಂದ್ಯದ ನಂತರ ಪಾಯಿಂಟ್ಸ್ ಟೇಬಲ್ ಹೀಗಿದೆ
ಐಪಿಎಲ್ 2022ರ 65ನೇ ಪಂದ್ಯದ ನಂತರ ಗುಜರಾತ್ ಟೈಟನ್ಸ್ (ಜಿಟಿ) 13 ಪಂದ್ಯಗಳಿಂದ 20 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 13 ಪಂದ್ಯಗಳಿಂದ 16 ಅಂಕಗಳೊಂದಿಗೆ ರಾಜಸ್ಥಾನ್ ರಾಯಲ್ಸ್ (RR) ಎರಡನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ (LSG) ಮೂರನೇ ಸ್ಥಾನವನ್ನು ಆಕ್ರಮಿಸಿಕೊಂಡಿದೆ ಮತ್ತು ದೆಹಲಿ ಕ್ಯಾಪಿಟಲ್ಸ್ (DC) ನಾಲ್ಕನೇ ಸ್ಥಾನದಲ್ಲಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐದನೇ ಸ್ಥಾನದಲ್ಲಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್), ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಎಸ್‌ಆರ್‌ಎಚ್ ಕ್ರಮವಾಗಿ ಆರು, ಏಳು ಮತ್ತು ಎಂಟನೇ ಸ್ಥಾನದಲ್ಲಿವೆ. ಚೆನ್ನೈ ಸೂಪರ್ ಕಿಂಗ್ಸ್ (CSK) ಒಂಬತ್ತನೇ ಸ್ಥಾನದಲ್ಲಿದ್ದರೆ ಮತ್ತು ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್ ರೇಸ್
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ 13 ಪಂದ್ಯಗಳಲ್ಲಿ 627 ರನ್ ಗಳಿಸಿ ಆರೆಂಜ್ ಕ್ಯಾಪ್ ರೇಸ್‌ನ ಮೊದಲ ಸ್ಥಾನಲ್ಲಿದ್ದಾರೆ.
ಅವರ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (469) ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡದ ಡೇವಿಡ್ ವಾರ್ನರ್ (427) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಶಿಖರ್ ಧವನ್ (421) ನಾಲ್ಕನೇ ಸ್ಥಾನದಲ್ಲಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡದ ದೀಪಕ್ ಹೂಡಾ (406) ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ರೇಸ್
ರಾಜಸ್ಥಾನ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ 13 ಪಂದ್ಯಗಳಲ್ಲಿ 24 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಗ್ ಸ್ಪಿನ್ನರ್ ವನಿಂದು ಹಸರಂಗಾ (23) ಎರಡನೇ ಸ್ಥಾನದಲ್ಲಿದ್ದಾರೆ.
ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಕಗಿಸೊ ರಬಾಡ (22) ಮೂರನೇ ಸ್ಥಾನದಲ್ಲಿದ್ದರೆ, ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಎಸ್‌ಆರ್‌ಎಚ್ ತಂಡದ ಉಮ್ರಾನ್ ಮಲಿಕ್ (21) ನಾಲ್ಕನೇ ಸ್ಥಾನದಲ್ಲಿದ್ದಾರೆ. ದೆಹಲಿ ಕ್ಯಾಪಿಟಲ್ಸ್ ತಂಡದ ಕುಲದೀಪ್ ಯಾದವ್ 20 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications