Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS vs LSG: ಪಂಜಾಬ್ ಬೌಲಿಂಗ್ ದಾಳಿಗೆ ಮಂಕಾದ ಲಕ್ನೋ; ಪಂಜಾಬ್‌ಗೆ ಗೆಲ್ಲಲು 154 ರನ್‌ಗಳ ಗುರಿ

IPL 2022: Punjab Kings need 154 runs to win against Lucknow Super Giants

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 42ನೇ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆಯುತ್ತಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 153 ರನ್ ಕಲೆಹಾಕಿ ಎದುರಾಳಿ ಲಕ್ನೋ ಸೂಪರ್‌ ಜೈಂಟ್ಸ್ ತಂಡಕ್ಕೆ ಗೆಲ್ಲಲು 154 ರನ್‌ಗಳ ಗುರಿಯನ್ನು ನೀಡಿದೆ.

ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 11 ಎಸೆತಗಳಲ್ಲಿ 6 ರನ್ ಕಲೆಹಾಕಿ ಔಟ್ ಆದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ರನ್‌ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡು ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಇತ್ತ ಕೆಎಲ್ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಮತ್ತೋರ್ವ ಆಟಗಾರ ಕ್ವಿಂಟನ್ ಡಿ ಕಾಕ್ ಹಾಗೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪಕ್ ಹೂಡಾ 85 ರನ್‌ಗಳ ಜತೆಯಾಟವಾಡಿದರು. ಕ್ವಿಂಟನ್ ಡಿ ಕಾಕ್ 46 ರನ್ ಗಳಿಸಿ ಔಟ್ ಆದರೆ, ದೀಪಕ್ ಹೂಡಾ 34 ರನ್ ಗಳಿಸಿ ರನ್ಔಟ್ ಆದರು. ಇನ್ನುಳಿದಂತೆ ಕೃನಾಲ್ ಪಾಂಡ್ಯ 7 ರನ್, ಮಾರ್ಕಸ್ ಸ್ಟಾಯಿನಿಸ್ 1 ರನ್, ಆಯುಷ್ ಬದೋನಿ 4 ರನ್, ಜೇಸನ್ ಹೋಲ್ಡರ್ 11 ರನ್, ದುಷ್ಮಂತ ಚಮೀರ 17 ರನ್ ಕಲೆಹಾಕಿದರೆ, ಮೊಹ್ಸಿನ್ ಖಾನ್ ಅಜೇಯ 13 ರನ್ ಹಾಗೂ ಅವೇಶ್ ಖಾನ್ ಅಜೇಯ 2 ರನ್ ದಾಖಲಿಸಿದರು.

ಪಂಜಾಬ್ ಕಿಂಗ್ಸ್ ಪರ ಕಗಿಸೋ ರಬಾಡ 4 ವಿಕೆಟ್ ಪಡೆದರೆ, ರಾಹುಲ್ ಚಹರ್ 2 ವಿಕೆಟ್ ಮತ್ತು ಸಂದೀಪ್ ಶರ್ಮಾ ಒಂದು ವಿಕೆಟ ಪಡೆದರು.

ಆಡುವ ಬಳಗಗಳು:

ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಸಂದೀಪ್ ಶರ್ಮಾ, ಅರ್ಶ್‌ದೀಪ್ ಸಿಂಗ್

ಲಕ್ನೋ ಸೂಪರ್‌ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್

Story first published: Friday, April 29, 2022, 21:37 [IST]
Other articles published on Apr 29, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+