Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs PBKS: ಮಿಂಚಿದ ಮಾರ್ಷ್; ಪಂಜಾಬ್ ಕಿಂಗ್ಸ್ ತಂಡಕ್ಕೆ 160 ರನ್‌ಗಳ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

IPL 2022: Punjab Kings needs 160 runs to win against Delhi Capitals

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 64ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಿಚೆಲ್ ಮಾರ್ಷ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿದ್ದು ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ 160 ರನ್‌ಗಳ ಗುರಿಯನ್ನು ನೀಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಲಿವಿಂಗ್ ಸ್ಟನ್ ಎಸೆದ ಮೊದಲ ಎಸೆತಕ್ಕೆ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕೌಟ್ ಆದರು. ಡೇವಿಡ್ ವಾರ್ನರ್ ಜತೆ ಆರಂಭಿಕನಾಗಿ ಕಣಕ್ಕಿಳಿದ ಮತ್ತೋರ್ವ ಆಟಗಾರ ಸರ್ಫಾರಾಜ್ ಖಾನ್ 16 ಎಸೆತಗಳಲ್ಲಿ 32 ರನ್ ಬಾರಿಸಿದರು. ಡೇವಿಡ್ ವಾರ್ನರ್ ವಿಕೆಟ್ ಬೀಳುತ್ತಿದ್ದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಿಚೆಲ್ ಮಾರ್ಷ್ 48 ಎಸೆತಗಳಲ್ಲಿ 63 ರನ್ ಬಾರಿಸಿ ಆರಂಭಿಕ ಆಘಾತ ಅನುಭವಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾದರು. ಇನ್ನುಳಿದಂತೆ ಲಲಿತ್ ಯಾದವ್ 24 ರನ್, ರಿಷಭ್ ಪಂತ್ 7 ರನ್, ರೋವ್ಮನ್ ಪೊವೆಲ್ 2 ರನ್, ಶಾರ್ದೂಲ್ ಠಾಕೂರ್ 3 ರನ್, ಅಕ್ಷರ್ ಪಟೇಲ್ ಅಜೇಯ 17 ರನ್ ಮತ್ತು ಕುಲದೀಪ್ ಯಾದವ್ ಅಜೇಯ 2 ರನ್ ಕಲೆಹಾಕಿದರು.

ಪಂಜಾಬ್ ಕಿಂಗ್ಸ್ ತಂಡದ ಪರ ಲಿಯಾಮ್ ಲಿವಿಂಗ್ ಸ್ಟನ್ ಮತ್ತು ಅರ್ಷದೀಪ್ ಸಿಂಗ್ ತಲಾ 3 ವಿಕೆಟ್ ಪಡೆದರೆ, ಕಗಿಸೋ ರಬಾಡ 1 ವಿಕೆಟ್ ಪಡೆದರು. ಇನ್ನು ಪಂಜಾಬ್ ಕಿಂಗ್ಸ್ ಈ ಮೊತ್ತವನ್ನು ಚೇಸ್ ಮಾಡಿ ಗೆದ್ದರೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಲಿದ್ದು, ತನ್ನ ಪ್ಲೇಆಫ್ ಹಾದಿಯನ್ನು ಸುಗಮ ಮಾಡಿಕೊಳ್ಳಲಿದೆ.

ಪಂಜಾಬ್ ಕಿಂಗ್ಸ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಮಯಾಂಕ್ ಅಗರ್ವಾಲ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್, ಸರ್ಫರಾಜ್ ಖಾನ್, ಮಿಚೆಲ್ ಮಾರ್ಷ್, ರಿಷಭ್ ಪಂತ್ ( ನಾಯಕ / ವಿಕೆಟ್ ಕೀಪರ್), ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್

Story first published: Monday, May 16, 2022, 21:49 [IST]
Other articles published on May 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+