MI vs PBKS: ತನ್ನ ಮಾಜಿ ತಂಡ ಮುಂಬೈಗೆ ದೊಡ್ಡ ವಾರ್ನಿಂಗ್ ನೀಡಿದ ಸ್ಪಿನ್ನರ್ ರಾಹುಲ್ ಚಹರ್!

ಐಪಿಎಲ್‌ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಕಳೆದ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದು ಈ ಬಾರಿ ಪಂಜಾಬ್ ಕಿಂಗ್ಸ್ ತಂಡದಲ್ಲಿರುವ ಯುವ ಸ್ಪಿನ್ನರ್ ರಾಹುಲ್ ಚಹರ್ ತನ್ನ ಮಾಜಿ ತಂಡಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡದ ಯುವ ಸ್ಪಿನ್ನರ್ ರಾಹುಲ್ ಚಹರ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಗುರಿಯಿಟ್ಟುಕೊಂಡಿದ್ದಾರೆ. ಅದರಲ್ಲೂ ಉಂಬೈ ಇಂಡಿಯನ್ಸ್ ತಂಡದ ಪ್ರಮುಖ ಬ್ಯಾಟರ್‌ಗಳಿಗಾಗಿ ರಾಹುಲ್ ಚಹರ್ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಈ ಕದನ ಸಾಕಷ್ಟು ಕುತೂಹಲ ಮೂಡಿಸಿದೆ.
ಬುಧವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಎರಡೂ ತಂಡಗಳಿಗೂ ಮಹತ್ವದ ಪಂದ್ಯವಾಗಿದೆ. ಪಂಜಾಬ್ ಕಿಂಗ್ಸ್ ತಂಡ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ಗೆಲುವು ಎರಡು ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ತಂಡ ಇನ್ನೂ ಗೆಲುವಿನ ಮುಖ ನೋಡದೆ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಪಿಬಿಕೆಸ್ ವಿರುದ್ಧ ಗೆಲವುಉ ಸಾಧಿಸುವ ಯೋಜನೆ ರೂಪಿಸಿದ್ದು ರಾಹುಲ್ ಚಹರ್ ಅವರ ಮಿಸ್ಟ್ರಿ ಸ್ಪಿನ್‌ಅನ್ನು ಯಾವ ರೀತಿಯಾಗಿ ಎದುರಿಸಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಬಗ್ಗೆ ಮಾತನಾಡಿರುವ ರಾಹುಲ್ ಚಹರ್ "ನಾನು ಎಂದಿನಂತೆಯೇ ನನ್ನ ನೂರು ಪ್ರತಿಶತ ಪರಿಶ್ರಮವನ್ನು ಹಾಕಲಿದ್ದೇನೆ. ವಿಶೇಷವಾಗಿ ಆ ತಂಡದಲ್ಲಿ ಎರಡುರಿಂದ ಮೂವರು ದಾಂಡಿಗರು ಬೌಲಿಂಗ್ ಮಾಡಲು ಸವಾಲೆನಿಸುವಂತಾ ಆಟಗಾರರಿದ್ದಾರೆ. ಅವರ ಮೇಲೆ ನನ್ನ ಕಣ್ಣಿದೆ" ಎಂದಿದ್ದಾರೆ ರಾಹುಲ್ ಚಹರ್. ಪಂಜಾಬ್ ಕಿಂಗ್ಸ್ ತಮಡದ ವೆಬ್‌ಸೈಟ್‌ಗೆ ನೀಡಿರುವ ಸಂದರ್ಶನದಲ್ಲಿ ಈ ಮಾತನ್ನು ಹೇಳಿದ್ದಾರೆ.
"ಸೂರ್ಯಕುಮಾರ್ ಯಾದವ್ ಅದ್ಭುತವಾದ ಫಾರ್ಮ್‌ನಲ್ಲಿದ್ದಾರೆ. ರೋಹಿತ್ ಶರ್ಮಾ ಅವರು ಕೂಡ ಶ್ರೇಷ್ಠ ಬ್ಯಾಟರ್. ಅವರಿಗಾಗಿ ನಾನು ವಿಶೇಷ ತಯಾರಿ ನಡೆಸಿದ್ದು ಅವರಿಗೆ ಬೌಲಿಂಗ್ ನಡೆಸಲು ಕಾತರಗೊಂಡಿದ್ದೇನೆ. ಈ ಆಟಗಾರರಿಗಾಗಿ ವಿಶೇಷ ಯೋಜನೆಗಳನ್ನು ನಾನು ಮಾಡಿಕೊಂಡಿದ್ದೇನೆ. ಹೇಗೆ ನಡೆಯಲಿದೆ ಎಂಬುದನ್ನು ಮುಂದೆ ನೋಡೋಣ" ಎಂದಿದ್ದಾರೆ ರಾಹುಲ್ ಚಹರ್.
ಯುವ ಸ್ಪಿನ್ನರ್ ರಾಹುಲ್ ಚಹರ್ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಉತ್ತಮ ಬೌಲಿಂಗ್ ದಾಳಿ ನಡೆಸಿದ್ದಾರೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಚಹರ್ 7 ವಿಕೆಟ್ ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದು ಉತ್ತಮ ಆರಂಭ ಪಡೆದಿದ್ದಾರೆ. ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಅನೇಕ ಆಟಗಾರರು ತಮ್ಮ ಈ ಹಿಂದಿನ ತಂಡಗಳ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಮಿಂಚಿರುವ ಉದಾಹರಣೆಯಿದೆ. ದಿನೇಶ್ ಕಾರ್ತಿಕ್, ಕುಲ್‌ದೀಪ್ ಯಾದವ್ ಅವರಂತಾ ಆಟಗಾರರು ಸಿಡಿದಿದ್ದಾರೆ. ಹೀಗಾಗಿ ರಾಹುಲ್ ಚಹರ್ ಕೂಡ ಈ ಆಟಗಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರ ಎಂಬುದು ಕುತೂಹಲ ಮೂಡಿಸಿದೆ.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್
ಪಂಜಾಬ್ ಕಿಂಗ್ಸ್ : ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications