PBKS vs GT: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

ಇಂಡಿಯನ್ ಪ್ರೀಮಿಯರ್ ಲೀಗ್‌ನ 48ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಜಿಟಿ ತಂಡದ ಸವಾಲನ್ನು ಪಂಜಾಬ್ ಕಿಂಗ್ಸ ತಂಡ ಹೇಗೆ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಗುಜರಾತ್ ಟೈಟನ್ಸ್ ತಂಡ ಸತತ ಐದು ಪಂದ್ಯಗಳನ್ನು ಗೆದ್ದು ಗೆಲುವಿನ ಓಟವನ್ನು ಮುಂದುವರಿಸುವ ವಿಶ್ವಾಸದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತನ್ನ ಹಿಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲು ಅನುಭವಿಸಿದೆ. ಆದರೆ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಹಿಂದಿನ ಪಂದ್ಯದಲ್ಲಿ ಆಡಿದ ಬಳಗದೊಂದಿಗೆ ಕಣಕ್ಕಿಳಿದಿದೆ. ಆಡುವ ಬಳಗದಲ್ಲಿ ಎರಡೂ ತಂಡಗಳು ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ
ಬೆಂಚ್: ಮ್ಯಾಥ್ಯೂ ವೇಡ್, ವರುಣ್ ಆರೋನ್, ಜಯಂತ್ ಯಾದವ್, ವಿಜಯ್ ಶಂಕರ್, ಗುರುಕೀರತ್ ಸಿಂಗ್ ಮಾನ್, ಅಭಿನವ್ ಮನೋಹರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಯಶ್ ದಯಾಳ್, ನೂರ್ ಅಹ್ಮದ್
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ
ಬೆಂಚ್: ಬೆನ್ನಿ ಹೋವೆಲ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಶಾರುಖ್ ಖಾನ್, ಪ್ರೇರಕ್ ಮಂಕಡ್, ಓಡಿಯನ್ ಸ್ಮಿತ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭುಸಿಮ್ರಾನ್ ಸಿಂಗ್, ಹರ್ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ವೈಭವ್ ಅರೋರಾ, ಅನ್ಶ್ ಪಟೇಲ್, ರಾಜ್ ಬಾವಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications