PBKS vs LSG: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 42ನೇ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆಯುತ್ತಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು:
ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಸಂದೀಪ್ ಶರ್ಮಾ, ಅರ್ಶ್‌ದೀಪ್ ಸಿಂಗ್
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್
ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ನಾಯಕ ಮಯಾಂಕ್ ಅಗರ್ವಾಲ್ ಹೇಳಿಕೆ ನೀಡಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಮನೀಶ್ ಪಾಂಡೆ ಹೊರಬಿದ್ದಿದ್ದು, ಅವೇಶ್ ಖಾನ್ ತಂಡ ಸೇರಿದ್ದಾರೆ ಎಂದು ನಾಯಕ ಕೆಎಲ್ ರಾಹುಲ್ ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications