For Quick Alerts
ALLOW NOTIFICATIONS  
For Daily Alerts
 

PBKS vs RR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2022: Punjab Kings vs Rajasthan Royals head to head records details in kannada

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 52ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಎರಡೂ ತಂಡಗಳೂ ಸಹ ಪ್ಲೇ ಆಫ್ ರೇಸ್‌ನಲ್ಲಿರುವ ತಂಡಗಳಾದ ಕಾರಣ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಗುರಿಯನ್ನು ಹೊಂದಿವೆ.

ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಜಯ ಸಾದಿಸಿ ಉಳಿದ 4 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು ಉಳಿದ 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ತಲಾ ಹತ್ತು ಪಂದ್ಯಗಳನ್ನಾಡಿ ಪ್ಲೇ ಆಫ್ ಪ್ರವೇಶಿಸುವತ್ತ ಚಿತ್ತ ನೆಟ್ಟಿರುವ ಈ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಬಲಿಷ್ಟವಾಗಿದೆ ಎಂಬುದರ ಕುರಿತಾದ ಮಾಹಿತಿ ಮುಂದೆ ಇದೆ ಓದಿ..

ಒಟ್ಟಾರೆ ಐಪಿಎಲ್ ಮುಖಾಮುಖಿ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಒಟ್ಟು 23 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ರಾಜಸ್ಥಾನ್ ರಾಯಲ್ಸ್ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ 10 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳ ಮುಖಾಮುಖಿ: ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಕೊನೆಯದಾಗಿ ನಡೆದಿರುವ 5 ಪಂದ್ಯಗಳ ಪೈಕಿ ರಾಜಸ್ಥಾನ್ ರಾಯಲ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ ಐದು ಪಂದ್ಯಗಳ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಫಲಿತಾಂಶ: ಇನ್ನು ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲೀಗ್ ಹಂತದ ಎರಡು ಪಂದ್ಯಗಳು ನಡೆದಿತ್ತು. ಈ ಪೈಕಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜಯ ಸಾಧಿಸಿದ್ದರೆ, ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವನ್ನು ಕಂಡಿತ್ತು.

Story first published: Friday, May 6, 2022, 17:24 [IST]
Other articles published on May 6, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+