PBKS vs RR: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್

ಐಪಿಎಲ್‌ನಲ್ಲಿ ಶನಿವಾರ ಡಬಲ್ ಹೆಡ್ಡರ್ ಪಂದ್ಯಗಳು ನಡೆಯುತ್ತಿದ್ದು ಮೊದಲಿಗೆ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ದಾಳಿ ನಡೆಸಲಿದೆ.
ಪಂಜಾಬ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ. ಆದರೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಇಂದು ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಕನ್ನಡಿಗ ಕರುಣ್ ನಾಯರ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನದಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಆಡುವ ಬಳಗ: ಪಂಜಾಬ್ ಕಿಂಗ್ಸ್ : ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಮಯಾಂಕ್ ಅಗರ್ವಾಲ್(ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್
ಈ ಪೈಕಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ ತಂಡಗಳ ನಡುವಿನ ಪಂದ್ಯ 52ನೇ ಮುಖಾಮುಖಿಯಾಗಿದ್ದು ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೂ ಅಂತಿಮ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲು ಅನುಭವಿಸಿದೆ. ಆದರೆ ಪಂಜಾಬ್ ಕಿಂಗ್ಸ್ ಅಂತಿಮ ಪಂದ್ಯದಲ್ಲಿ ಟೂರ್ನಿಯ ಅಗ್ರಸ್ಥಾನಿ ಗುಜರಾತ್ ಟೈಟನ್ಸ್ ವಿರುದ್ಧ ಗೆಲುವು ಸಂಪಾದಿಸಿದ್ದು ಆತ್ಮವಿಶ್ವಾಸದಲ್ಲಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications