RCB vs DC: ಪಂಜಾಬ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ XI

ಐಪಿಎಲ್‌ನಲ್ಲಿ ಈ ಭಾನುವಾರ ಡಬಲ್ ಹೆಡ್ಡರ್ ಪಂದ್ಯಗಳು ನಡೆಯುತ್ತಿದ್ದು ಇಂದಿನ ಮೊದಲ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸೆಣೆಸಾಡಲು ಕಣಕ್ಕಿಳಿಯುತ್ತಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳು ಕೂಡ ಕಳೆದ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ಈ ಪಂದ್ಯದಲ್ಲಿಯೂ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಹೋಗುವ ಉತ್ಸಾಹದಲ್ಲಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದು ಹ್ಯಾಟ್ರಿಕ್ ಗೆಲುವಿನೊಂದಿಗೆ ಮುನ್ನುಗ್ಗುತ್ತಿದೆ. ಇತ್ತ ಪಂಜಾಬ್ ಕಿಂಗ್ಸ್ ನೇತೃತ್ವದ ತಂಡದಲ್ಲಿಯೂ ಅತ್ಯುತ್ತಮ ಆಟಗಾರರಿದ್ದು ಇಂದು ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಕುತೈಹಲ ಮೂಡಿಸಿದೆ.

ಇನ್ನು ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿ ಶಿಖರ್ ಧವನ್ ಕಣಕ್ಕಿಳಿದಿದ್ದಾರೆ. ಮಯಾಂಕ್ ಅಗರ್ವಾಲ್ ಸಣ್ಣ ಪ್ರಮಾಣದ ಗಾಯಕ್ಕೆ ಒಳಗಾಗಿರುವ ಕಾರಣ ಈ ಪಂದ್ಯದಿಂದ ಹೊಇರಗುಳಿಯುತ್ತಿದ್ದು ಮುಂದಿನ ಪಂದ್ಯದಿಂದ ಲಭವಾಗಲಿದ್ದಾರೆ ಎಂದು ಧವನ್ ತಿಳಿಸಿದ್ದಾರೆ. ಹೀಗಾಗಿ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದ್ದು ಪ್ರಭ್‌ಸಿಮ್ರಾನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ.
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಶಿಖರ್ ಧವನ್(ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಷ್‌ದೀಪ್ ಸಿಂಗ್
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications