IPL 2022: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ, ಆರ್‌ಸಿಬಿ ಬ್ಯಾಟಿಂಗ್

ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೂ ಪ್ರಶಸ್ತಿ ಗೆದ್ದಿಲ್ಲ, ಅದರ ಜೊತೆಗೆ ಈ ಬಾರಿ ಉಭಯ ತಂಡಗಳ ನಾಯಕರು ಬದಲಾಗಿದ್ದು, ಹೊಸ ತಂಡದೊಂದಿಗೆ ಕಣಕ್ಕಿಳಿದಿವೆ. ಪಂಜಾಬ್ ಕಿಂಗ್ಸ್ ನಾಯಕ ಮಯಾಂಕ್ ಅಗರ್ವಾಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
9 ವರ್ಷಗಳ ನಂತರ ಆರ್‌ಸಿಬಿ ತಂಡದ ನಾಯಕತ್ವದಲ್ಲಿ ಬದಲಾವಣೆಯಾಗಿದ್ದು, ಇದೀಗ ಫಾಫ್ ಡು ಪ್ಲೆಸಿಸ್ ತಂಡವನ್ನು ಮುನ್ನಡೆಸಲಿದ್ದಾರೆ. ಎರಡು ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.
ಆರ್‌ಸಿಬಿ ಪ್ಲೇಯಿಂಗ್ 11
ಫಾಫ್ ಡುಪ್ಲೆಸಿಸ್(ಸಿ), ವಿರಾಟ್ ಕೊಹ್ಲಿ, ಅನುಜ್ ರಾವತ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಮಯಾಂಕ್ ಅಗರ್ವಾಲ್(ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ(ವಿಕೆಟ್ ಕೀಪರ್), ಶಾರುಖ್ ಖಾನ್, ಓಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಸಂದೀಪ್ ಶರ್ಮಾ, ರಾಹುಲ್ ಚಾಹರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications