IPL 2022 ಕ್ವಾಲಿಫೈಯರ್ 1: GT vs RR ಟಾಸ್ ವರದಿ, ಆಡುವ 11ರ ಬಳಗ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ಲೀಗ್ ಹಂತದ ಪಂದ್ಯಗಳು ಮುಗಿದಿದ್ದು, ಇಂದಿನಿಂದ (ಮೇ 24, ಮಂಗಳವಾರ) ಪ್ಲೇಆಫ್‌ಗಳು ಆರಂಭವಾಗಲಿವೆ. ಅಗ್ರ ಕ್ರಮಾಂಕದ ಗುಜರಾತ್ ಟೈಟನ್ಸ್ ತಂಡ ಎರಡನೇ ಸ್ಥಾನದ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣಸಲಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ.
ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮಹತ್ವದ ಪಂದ್ಯವನ್ನು ಆಡಲು ಸಜ್ಜಾಗಿದ್ದು, ಕ್ವಾಲಿಫೈಯರ್ 1ರ ವಿಜೇತರು ಐಪಿಎಲ್ 2022ರ ಫೈನಲ್‌ಗೆ ನೇರ ಪ್ರವೇಶ ಪಡೆಯುತ್ತಾರೆ ಮತ್ತು ಸೋತವರು ಕ್ವಾಲಿಫೈಯರ್ 2 ಅನ್ನು ಆಡುತ್ತಾರೆ.

ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದ್ದರೆ, ಕ್ವಾಲಿಫೈಯರ್ 2 ಮತ್ತು ಫೈನಲ್ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಆಡುವ ಬಳಗಗಳು:
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ ನಾಯಕ), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications