IPL 2022 ಕ್ವಾಲಿಫೈಯರ್ 1: ರಾಜಸ್ಥಾನ ಬಗ್ಗುಬಡಿದು ಫೈನಲ್ ತಲುಪಿದ ಗುಜರಾತ್ ಟೈಟನ್ಸ್

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಐಪಿಎಲ್ 2022ರ ಫೈನಲ್ ತಲುಪಿದರು.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಅಗ್ರ ಕ್ರಮಾಂಕದ ಗುಜರಾತ್ ಟೈಟನ್ಸ್ ಮತ್ತು ಎರಡನೇ ಸ್ಥಾನದಲ್ಲಿದ್ದ ರಾಜಸ್ಥಾನ ರಾಯಲ್ಸ್ ನಡುವಿನ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಗೆಲುವಿನ ನಗೆ ಬೀರಿ ಚೊಚ್ಚಲ ಬಾರಿಗೆ ಐಪಿಎಲ್ ಫೈನಲ್‌ಗೆ ಲಗ್ಗೆ ಇಟ್ಟರು.
ಮೊದಲು ಟಾಸ್ ಗೆದ್ದಿದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗುರಿ ನೀಡಿತ್ತು. ಬೃಹತ್ ಮೊತ್ತವನ್ನು ಬೆನ್ನತ್ತಿದ ಗುಜರಾತ್ ಟೈಟನ್ಸ್ 7 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿ ನಿಗದಿತ ಗುರಿ ತಲುಪಿತು.

ಶುಭ್‌ಮನ್ ಗಿಲ್ (35) ಮತ್ತು ಮ್ಯಾಥ್ಯೂ ವೇಡ್ (35)
ರಾಜಸ್ಥಾನ ರಾಯಲ್ಸ್ ನೀಡಿದ 189 ರನ್‌ಗಳ ಗುರಿ ಬೆನ್ನತ್ತಿದ ಗುಜರಾತ್ ಟೈಟನ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್ ಸಹಾ ಮತ್ತು ಶುಭ್‌ಮನ್ ಗಿಲ್, ಆದರೆ ಎರಡನೇ ಎಸೆತದಲ್ಲೇ ಸಹಾ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು. ನಂತರ ಆಗಮಿಸಿದ ಮ್ಯಾಥ್ಯೂ ವೇಡ್ ಆರಂಭದಿಂದಲೇ ಅಬ್ಬರಿಸತೊಡಗಿದರು.
ಶುಭ್‌ಮನ್ ಗಿಲ್ (35) ಮತ್ತು ಮ್ಯಾಥ್ಯೂ ವೇಡ್ (35) ಗುಜರಾತ್ ತಂಡಕ್ಕೆ 72 ರನ್‌ಗಳ ಜೊತೆಯಾಟ ನೀಡಿ ತಂಡಕ್ಕೆ ಆಸರೆಯಾದರು. ನಿಧಾನವಾಗಿ ಅಬ್ಬರಿಸುತ್ತಿದ್ದ ಗಿಲ್ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು.

ಗೆಲುವಿನ ದಡ ಸೇರಿಸಿದ ಹಾರ್ದಿಕ್ ಪಾಂಡ್ಯ, ಮಿಲ್ಲರ್
ಮ್ಯಾಥ್ಯೂ ವೇಡ್ ಜೊತೆಗೂಡಿದ ನಾಯಕ ಹಾರ್ದಿಕ್ ಪಾಂಡ್ಯ ಗುರಿಯತ್ತ ಗಮನ ಹರಿಸಿ ರನ್ ಗಳಿಸುತ್ತಿದ್ದರು. ಈ ವೇಳೆ ಮ್ಯಾಥ್ಯೂ ವೇಡ್ ಸಿಕ್ಸರ್ ಬಾರಿಸಲು ವಿಕೆಟ್ ಒಪ್ಪಿಸಿದರು. ಆಗ ಬಂದ ಡೇವಿಡ್ ಮಿಲ್ಲರ್ ಗುಜರಾತ್ ಟೈಟನ್ಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೊನೆಯ ಓವರ್‌ನಲ್ಲಿ ಗೆಲ್ಲಲು 16 ರನ್‌ಗಳು ಬೇಕಿದ್ದಾಗ ಪ್ರಸಿದ್ಧ್ ಕೃಷ್ಣ ಎಸೆದ ಮೊದಲ ಮೂರು ಎಸೆತಗಳನ್ನು ಸಿಕ್ಸರ್‌ಗೆ ಅಟ್ಟಿ ಗೆಲುವಿನ ಕೇಕೆ ಹಾಕಿದರು. ಈ ಮೂಲಕ ತಮ್ಮ ಚೊಚ್ಚಲ ಐಪಿಎಲ್ ಟೂರ್ನಿಯಲ್ಲೇ ಗುಜರಾತ್ ಟೈಟನ್ಸ್ ಫೈನಲ್ ತಲುಪಿತು.
ಅಂತಿಮವಾಗಿ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಡೇವಿಡ್ ವಾರ್ನರ್ ಸೇರಿ ಮುರಿಯದ ನಾಲ್ಕನೇ ವಿಕೆಟ್ ಜೊತೆಯಾಟಕ್ಕೆ 106 ರನ್ ಸೇರಿಸಿದರು. ಡೇವಿಡ್ ಮಿಲ್ಲರ್ 38 ಎಸೆತಗಳಲ್ಲಿ 68 ರನ್ ಬಾರಿಸಿದರೆ, ನಾಯಕ ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ 40 ಬಾರಿಸಿದರು.

ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್
ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ಪವರ್ ಪ್ಲೇ ಓವರ್‌ಗಳಲ್ಲಿ ಅಬ್ಬರಿಸಿದರು. ಇದೇ ವೇಳೆ ಯಶಸ್ವಿ ಜೈಸ್ವಾಲ್ 3 ರನ್ ಗಳಿಸಿ ಯಶ್ ದಯಾಳ್‌ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಗುಜರಾತ್ ಟೈಟನ್ಸ್ ಬೌಲರ್‌ಗಳ ಬೆವರಿಳಿಸಿದರು. 26 ಎಸೆತಗಳಲ್ಲಿ 47 ರನ್ ಗಳಿಸಿ ಸಾಯಿ ಕಿಶೋರ್ ಬೌಲಿಂಗ್‌ನಲ್ಲಿ ಬೌಂಡರಿ ಲೈನ್ ಬಳಿ ಕ್ಯಾಚ್ ನೀಡಿದರು.
ಆರಂಭಿಕ ಜೋಸ್ ಬಟ್ಲರ್ ಜೊತೆಗೂಡಿದ ಕನ್ನಡಿಗ ದೇವದತ್ ಪಡಿಕ್ಕಲ್ 20 ಎಸೆತಗಳಲ್ಲಿ 28 ರನ್ ಬಾಚಿದರು. ಇನ್ನು ಅಬ್ಬರಿಸುವ ಮುನ್ಸೂಚನೆ ನೀಡಿದ್ದ ಪಡಿಕ್ಕಲ್ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಬೌಲ್ಡ್ ಆದರು.
ತದನಂತರ ಶಿಮ್ರೋನ್ ಹೆಟ್ಮೆಯರ್ ಕ್ರೀಸ್‌ಗೆ ಆಗಮಿಸಿ ಆರಂಭದಲ್ಲಿ ರನ್ ಗಳಿಸಲು ಪರದಾಡುತ್ತಿರುವಾಗಲೇ 4 ರನ್ ಗಳಿಸಿ ಔಟಾದರು. ಆರಂಭಿಕರಾಗಿ ಕಣಕ್ಕಿಳಿದಿದ್ದ ಜೋಸ್ ಬಟ್ಲರ್ 56 ಎಸೆತೆಗಳಲ್ಲಿ 89 ರನ್ ಬಾರಿಸಿ ಅಬ್ಬರಿಸಿ ಕೊನೆಯಲ್ಲಿ ರನೌಟ್ ಆದರು.

ಗುಜರಾತ್ ಟೈಟನ್ಸ್ ಬೌಲಿಂಗ್
ಇನ್ನು ಗುಜರಾತ್ ಟೈಟನ್ಸ್ ಪರ ರಶೀದ್ ಖಾನ್ ಹೊರತುಪಡಿಸಿ ಉಳಿದ ಬೌಲರ್‌ಗಳು ದುಬಾರಿಯಾದರು. ರಶೀದ್ ಖಾನ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿದರು. ಇನ್ನುಳಿದಂತೆ ಮೊಹಮ್ಮದ್ ಶಮಿ 4 ಓವರ್‌ಗಳಲ್ಲಿ 43 ನೀಡಿ ಒಂದು ವಿಕೆಟ್ ಪಡೆದರು. ಸಾಯಿ ಕಿಶೋರ್ 4 ಓವರ್‌ಗಳಲ್ಲಿ 43 ನೀಡಿ ಒಂದು ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಎರಡು ಓವರ್‌ಗಳಲ್ಲಿ 14 ರನ್ ನೀಡಿ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications