For Quick Alerts
ALLOW NOTIFICATIONS  
For Daily Alerts
 

IPL 2022 ಕ್ವಾಲಿಫೈಯರ್ 2: ರಾಜಸ್ಥಾನಕ್ಕೆ 158 ರನ್‌ಗಳ ಸಾಧಾರಣ ಟಾರ್ಗೆಟ್ ನೀಡಿದ ಆರ್‌ಸಿಬಿ

IPL 2022 Qualifier 2: Rajasthan Royals Need 158 Runs To Win Against Royal Challengers Bangalore

ಹದಿನೈದನೇ ಐಪಿಎಲ್ 2022ರ ಕ್ವಾಲಿಫೈಯರ್ 2 ಇಂದು (ಶುಕ್ರವಾರ ಮೇ 27) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ.

ರಜತ್ ಪಾಟಿದಾರ್ (58) ಅರ್ಧ ಶತಕದ ಸಹಾಯ ಹಾಗೂ ಕೊನೆಯಲ್ಲಿ ದಿನೇಶ್ ಕಾರ್ತಿಕ್ ಅಮೋಘ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ, ರಾಜಸ್ಥಾನ ರಾಯಲ್ಸ್ ತಂಡಕ್ಕೆ 158 ರನ್‌ಗಳ ಸಾಧಾರಣ ಮೊತ್ತದ ಟಾರ್ಗೆಟ್ ನೀಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿತು.

IPL 2022 Qualifier 2: Rajasthan Royals Need 158 Runs To Win Against Royal Challengers Bangalore

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ (7) ಮತ್ತು ಫಾಫ್ ಡು ಪ್ಲೆಸಿಸ್ (25) ನಿರ್ಣಾಯಕ ಪಂದ್ಯದಲ್ಲಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕೊಟ್ಟು ಹೋದರು.

ಉತ್ತಮವಾಗಿ ಆಡುತ್ತಿರುವಾಗಲೇ ಫಾಫ್ ಡು ಪ್ಲೆಸಿಸ್ ಅವರು ಮಕಾಯ್ ಬೌಲಿಂಗ್‌ನಲ್ಲಿ ವಿಕೆಟ್ ನೀಡಿ ಪೆವಿಲಿಯನ್ ಕಡೆ ಮುಖ ಮಾಡಿದರು. ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಎರಡು ಸಿಕ್ಸರ್ ಬಾರಿಸಿ, ಅಬ್ಬರಿಸುವ ಮುನ್ಸೂಚನೆ ನೀಡಿದರೂ, ಸಿಕ್ಸರ್ ಬಾರಿಸಲು ಹೋಗಿ ಕ್ಯಾಚ್ ನೀಡಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ರಜತ್ ಪಾಟಿದಾರ್ ಹೊರತುಪಡಿಸಿ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ರಾಜಸ್ಥಾನ ಬೌಲರ್‌ಗಳಿಗೆ ಪ್ರತಿರೋಧ ತೋರಲಿಲ್ಲ. ದಿನೇಶ್ ಕಾರ್ತಿಕ್ (6) ಕೂಡ ಮಹತ್ವದ ಪಂದ್ಯದಲ್ಲಿ ಕೈಕೊಟ್ಟರು.ಇನ್ನು ಮಹಿಪಾಲ್ ಲೊಮ್ರೋರ್ (8) ಮತ್ತು ವನಿಂದು ಹಸರಂಗ (0) ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು.

ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಪ್ರಸಿದ್ಧ ಕೃಷ್ಣ 4 ಓವರ್‌ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರೆ, ಮಕಾಯ್ 4 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಟ್ರೆಂಟ್ ಬೌಲ್ಟ್ ಮತ್ತು ಆರ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ) ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್

ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) ಕೆ.ಎಲ್. ರಾಹುಲ್ (ನಾಯಕ), ಎವಿನ್ ಲೇವಿಸ್, ದೀಪಕ್ ಹೂಡಾ, ಮನನ್ ವೋಹ್ರಾ, ಕೃಣಾಲ್ ಪಾಂಡ್ಯ, ಮಾರ್ಕಸ್ ಸ್ಟೋಯ್ನಿಸ್, ಚಮೀರ, ರವಿ ಬಿಷ್ಣೋಯಿ, ಆವೇಶ್ ಖಾನ್, ಮೊಹ್ಸಿನ್ ಖಾನ್

Story first published: Friday, May 27, 2022, 21:26 [IST]
Other articles published on May 27, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+