ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022 ಕ್ವಾಲಿಫೈಯರ್ 2: RCB vs RR; ಟಾಸ್ ಸೋತ ಆರ್‌ಸಿಬಿ ಮೊದಲು ಬ್ಯಾಟಿಂಗ್

IPL 2022 Qualifier 2: RCB vs RR: Royal Challengers Bangalore vs Rajasthan Royals Toss Report And Playing 11

ಹದಿನೈದನೇ ಐಪಿಎಲ್ 2022ರ ಕ್ವಾಲಿಫೈಯರ್ 2 ಇಂದು (ಶುಕ್ರವಾರ ಮೇ 27) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ.

ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ಈ ಋತುವಿನ ಪಂದ್ಯಾವಳಿಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಫೈನಲ್ ಪಂದ್ಯಕ್ಕಾಗಿ ಸೆಣಸುತ್ತಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಮಾಡಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಮಹತ್ವದ ಕ್ವಾಲಿಫೈಯರ್ 2 ಪಂದ್ಯವನ್ನು ಆಡಲು ಸಜ್ಜಾಗಿದ್ದು, ಈ ಪಂದ್ಯದ ವಿಜೇತರು ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಜರಾತ್ ಟೈಟನ್ಸ್ ಐಪಿಎಲ್ 2022ರ ಫೈನಲ್ ಪ್ರವೇಶಿಸಿದ ಮೊದಲ ತಂಡವಾಗಿದೆ.

IPL 2022 Qualifier 2: RCB vs RR: Royal Challengers Bangalore vs Rajasthan Royals Toss Report And Playing 11

ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದರೆ, ಕ್ವಾಲಿಫೈಯರ್ 2 ಮತ್ತು ಫೈನಲ್ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿವೆ.

ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ) ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ, ಒಬೆದ್ ಮೆಕಾಯ್.

Story first published: Friday, May 27, 2022, 19:13 [IST]
Other articles published on May 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X