RCB vs RR Qualifier 2: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇಆಫ್ ಸುತ್ತಿನ ಪಂದ್ಯಗಳು ಆರಂಭವಾಗಿದ್ದು, ಎರಡನೇ ಕ್ವಾಲಿಫೈಯರ್ ಪಂದ್ಯ ನಾಳೆ ( ಮೇ 27 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ರಾಯಲ್‌ಗಳ ಕಾಳಗಕ್ಕೆ ಸಾಕ್ಷಿಯಾಗಲಿದ್ದು, ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಸೆಣಸಾಟ ಏರ್ಪಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಲಿದ್ದು, ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತು 16 ಅಂಕಗಳನ್ನು ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತ ಮುಕ್ತಾದ ಸಮಯಕ್ಕೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿತ್ತು. ಅತ್ತ 14 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 18 ಅಂಕಗಳನ್ನು ಪಡೆದುಕೊಂಡಿದ್ದ ರಾಜಸ್ಥಾನ್ ರಾಯಲ್ಸ್ ಲೀಗ್ ಹಂತದ ಮುಕ್ತಾಯದ ಸಮಯಕ್ಕೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿತ್ತು.
ಹೀಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟ ಕಾರಣ ರಾಜಸ್ಥಾನ್ ರಾಯಲ್ಸ್ ಕ್ವಾಲಿಫೈಯರ್ ಸುತ್ತಿಗೆ ಅರ್ಹತೆ ಪಡೆದುಕೊಂಡರೆ, ನಾಲ್ಕನೇ ಸ್ಥಾನ ಪಡೆದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪಂದ್ಯವನ್ನಾಡಿತು. ಈ ಪೈಕಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋಲನ್ನು ಅನುಭವಿಸಿ ಎರಡನೇ ಕ್ವಾಲಿಫೈಯರ್ ಸುತ್ತಿಗೆ ಪ್ರವೇಶ ಪಡೆದಿದ್ದು, ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶ ಗಿಟ್ಟಿಸಿಕೊಂಡಿದೆ. ಈ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮೂರನೇ ಬಾರಿಗೆ ಕಣಕ್ಕಿಳಿಯಲಿದ್ದು, ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದು ಬಲಿಷ್ಟವಾಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 24 ಪಂದ್ಯಗಳು ನಡೆದಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಜಯ ಸಾಧಸಿದ್ದರೆ, ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಪಷ್ಟ ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳ ಫಲಿತಾಂಶ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬರೋಬ್ಬರಿ 4 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಕೂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಪಷ್ಟ ಮೇಲುಗೈ ಸಾಧಿಸಿದೆ.

ಲೀಗ್ ಹಂತದ ಮುಖಾಮುಖಿ
ಮೊದಲೇ ತಿಳಿಸಿದ ಹಾಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಲೀಗ್ ಹಂತದಲ್ಲಿನ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್‌ಗಳ ಜಯ ಕಂಡಿತ್ತು ಹಾಗೂ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 29 ರನ್‌ಗಳ ಅಂತರದಿಂದ ಜಯ ಸಾಧಿಸಿತ್ತು. ಈ ಮೂಲಕ ಇತ್ತಂಡಗಳ ನಡುವೆ ಈ ಆವೃತ್ತಿಯಲ್ಲಿ ನಡೆದ ಎರಡು ಮುಖಾಮುಖಿ ಪಂದ್ಯಗಳಲ್ಲಿ ಎರಡೂ ತಂಡಗಳೂ ಸಹ ಸಮಬಲ ಸಾಧಿಸಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications