ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ಟೂರ್ನಿ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್‌ಗೆ ಕೈಕೊಟ್ಟ ಬೆನ್ ಸ್ಟೋಕ್ಸ್

IPL 2022: Rajasthan Royals Ben Stokes likely to pull out himself from tournament

ಈ ಬಾರಿ ನಡೆಯಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನವೇ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು ದಿನದಿಂದ ದಿನಕ್ಕೆ ನಿರೀಕ್ಷೆ ಹಾಗೂ ಕುತೂಹಲದ ಮಟ್ಟವನ್ನು ಹೆಚ್ಚಿಸುತ್ತಿದೆ. ಈ ಬಾರಿ ಹತ್ತು ತಂಡಗಳ ನಡುವೆ ಟ್ರೋಫಿಗಾಗಿ ಸೆಣಸಾಟ ನಡೆಯಲಿದ್ದು, ಕಳೆದ ವರ್ಷ ನಡೆದ ಫ್ರಾಂಚೈಸಿಗಳ ಹರಾಜು ಪ್ರಕ್ರಿಯೆಯಲ್ಲಿ ಲಕ್ನೋ ಮತ್ತು ಅಹ್ಮದಾಬಾದ್ ನೂತನ ತಂಡಗಳಾಗಿ ಹೊರಹೊಮ್ಮಿವೆ.

ಹೀಗೆ ಲಕ್ನೋ ಮತ್ತು ಅಹ್ಮದಾಬಾದ್ ಫ್ರಾಂಚೈಸಿಗಳು ಆಯ್ಕೆಯಾದ ನಂತರ ಈಗಾಗಲೇ ಟೂರ್ನಿಯಲ್ಲಿ ಅಸ್ತಿತ್ವದಲ್ಲಿರುವ 8 ಫ್ರಾಂಚೈಸಿಗಳ ಆಟಗಾರರ ರಿಟೆನ್ಷನ್ ಪ್ರಕ್ರಿಯೆ ನಡೆಯಿತು. ಹೀಗೆ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಅಸ್ತಿತ್ವದಲ್ಲಿ ಇರುವ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ( ಗರಿಷ್ಠ 4 ) ರಿಟೈನ್ ಮಾಡಿಕೊಂಡು, ಉಳಿದ ಆಟಗಾರರನ್ನು ಹೊರಗಿಟ್ಟವು. ಹೀಗೆ ರಿಟೈನ್ ಆದ ಆಟಗಾರರಲ್ಲಿ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರ ಬೆನ್ ಸ್ಟೋಕ್ಸ್ ಕೂಡ ಒಬ್ಬರು.

ಕೊಹ್ಲಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಪಂದ್ಯವನ್ನು ಬೇಡ ಎಂದು ತಡೆದದ್ದು ಇವರೇ!ಕೊಹ್ಲಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಪಂದ್ಯವನ್ನು ಬೇಡ ಎಂದು ತಡೆದದ್ದು ಇವರೇ!

2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಪರ ಕಣಕ್ಕಿಳಿದಿದ್ದ ಇಂಗ್ಲೆಂಡ್ ಮೂಲದ ಆಲ್ ರೌಂಡರ್ ಆಟಗಾರ ಬೆನ್ ಸ್ಟೋಕ್ಸ್ ಕಳೆದ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿದಿರಲಿಲ್ಲ. ಆದರೂ ಸಹ ಇತ್ತೀಚೆಗಷ್ಟೇ ನಡೆದ ಆಟಗಾರರ ರಿಟೆನ್ಷನ್ ಪ್ರಕ್ರಿಯೆಯಲ್ಲಿ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡು ತನ್ನ ತಂಡದಲ್ಲಿಯೇ ಉಳಿಸಿಕೊಂಡಿದೆ. ಆದರೆ ಇದೀಗ ತನ್ನನ್ನು ರೀಟೈನ್ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗೆ ಬೆನ್ ಸ್ಟೋಕ್ಸ್ ಕೈಕೊಟ್ಟಿದ್ದಾರೆ. ಮೂಲಗಳು ತಿಳಿಸಿರುವ ಪ್ರಕಾರ ಬೆನ್ ಸ್ಟೋಕ್ಸ್ ಈ ಬಾರಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸದೇ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದಾರಂತೆ.

ಹೇಗಿದೆ ರೋಹಿತ್ ಶರ್ಮಾ ಫಿಟ್‌ನೆಸ್? ವೆಸ್ಟ್ ಇಂಡೀಸ್ ಸರಣಿಗೆ ನಾಯಕ ರೋಹಿತ್ ಅಥವಾ ರಾಹುಲ್?ಹೇಗಿದೆ ರೋಹಿತ್ ಶರ್ಮಾ ಫಿಟ್‌ನೆಸ್? ವೆಸ್ಟ್ ಇಂಡೀಸ್ ಸರಣಿಗೆ ನಾಯಕ ರೋಹಿತ್ ಅಥವಾ ರಾಹುಲ್?

ತಮ್ಮ ಇಂಗ್ಲೆಂಡ್ ತಂಡ ಸದ್ಯ ಟೆಸ್ಟ್ ಕ್ರಿಕೆಟ್ ಮಾದರಿಯಲ್ಲಿ ಕಳೆದೊಂದು ವರ್ಷದಿಂದ ಹೀನಾಯ ಹಂತವನ್ನು ತಲುಪಿದ್ದು, ಹಲವಾರು ಪಂದ್ಯಗಳಲ್ಲಿ ಸೋಲುಂಡಿದೆ. ಅದರಲ್ಲಿಯೂ ಇತ್ತೀಚಿಗಷ್ಟೆ ಮುಕ್ತಾಯವಾಗಿರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯಲ್ಲಿ 0 - 4 ಅಂತರದಲ್ಲಿ ಇಂಗ್ಲೆಂಡ್ ಸೋಲುಂಡಿರುವುದು ದೊಡ್ಡ ಮಟ್ಟದ ಹಿನ್ನಡೆಗೆ ಕಾರಣವಾಗಿದೆ. ಅತ್ತ ತಮ್ಮ ತಂಡದ ಆಟಗಾರರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಇತರೆ ಫ್ರಾಂಚೈಸಿ ಕ್ರಿಕೆಟ್ ಟೂರ್ನಿಗಳಲ್ಲಿ ತಮ್ಮ ಆಟಗಾರರು ಭಾಗವಹಿಸಬಾರದೆಂದು ತಾಕೀತು ಮಾಡಿದೆ ಎಂಬ ಸುದ್ದಿಯೂ ಹೊರಬಿದ್ದಿದೆ.

ಈ ಕಾರಣದಿಂದಾಗಿಯೇ ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರ ಬೆನ್ ಸ್ಟೋಕ್ಸ್ ತಮ್ಮ ಅಂತರರಾಷ್ಟ್ರೀಯ ತಂಡದ ಕಡೆ ಹೆಚ್ಚಿನ ಗಮನ ಹರಿಸುವ ಸಲುವಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಹಿಂದೆ ಸರಿಯುವ ತೀರ್ಮಾನವನ್ನು ಕೈಗೊಂಡಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

Usman Khawajaರನ್ನು stage ಮೇಲೆ ಕರೆಯಲು Pat Cummins ಮಾಡಿದ್ದೇನು | Oneindia Kannada

ಇನ್ನು ಬೆನ್ ಸ್ಟೋಕ್ಸ್ ಅವರಿಗೂ ಮುನ್ನ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್ ಕೂಡ ಇದೇ ರೀತಿಯ ನಿರ್ಧಾರವನ್ನು ವ್ಯಕ್ತಪಡಿಸಿದ್ದರು. ಆ್ಯಶಸ್ ಟೆಸ್ಟ್ ಸರಣಿ ಮುಗಿದ ನಂತರ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜಿನಲ್ಲಿ ನೀವು ಭಾಗವಹಿಸುತ್ತೀರಾ ಎಂಬ ಪ್ರಶ್ನೆ ಎದುರಾದಾಗ ಜೋ ರೂಟ್ ನನ್ನ ಮೊದಲ ಆದ್ಯತೆ ಏನಿದ್ದರೂ ಟೆಸ್ಟ್ ಕ್ರಿಕೆಟ್‌ನತ್ತ ಎಂಬ ಹೇಳಿಕೆ ನೀಡುವುದರ ಮೂಲಕ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಭಾಗವಹಿಸುವುದಿಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದರು.

Story first published: Tuesday, January 18, 2022, 14:21 [IST]
Other articles published on Jan 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X