IPL 2022: ಸೋಲಿನ ಬೆನ್ನಲ್ಲೇ ರಾಜಸ್ಥಾನ್‌ಗೆ ಆಘಾತ: ಪ್ರಮುಖ ಆಲ್‌ರೌಂಡರ್ ಟೂರ್ನಿಯಿಂದ ಔಟ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿನ ಸೋಲಿನ ಮರುದಿನವೇ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಸಂಪೂರ್ಣ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಸ್ವತಃ ಫ್ರಾಂಚೈಸಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು ಆಟಗಾರನನ್ನು ಫ್ರಾಂಚೈಸಿ ಬೀಳ್ಕೊಟ್ಟಿದೆ.
ಈ ಬಾರಿಯ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಥಮ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ನಥನ್ ಕೌಲ್ಟರ್‌ನೈಲ್ ಈಗ ಟೂರ್ನಿಯಿಂದ ಹೊರಗುಳಿಯುತ್ತಿರುವ ಆಟಗಾರ. ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿಯೇ ಕೌಲ್ಟರ್‌ನೈಲ್ ಗಾಯಕ್ಕೆ ತುತ್ತಾಗಿ ಬೌಲಿಂಗ್ ಕೋಟಾವನ್ನು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಫೀಲ್ಡಿಂಗ್‌ಗೂ ಅವರು ಇಳಿದಿರಲಿಲ್ಲ. ಇದೀಗ ಆಸಿಸ್ ಆಟಗಾರ ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿಯುವುದು ಖಚಿತವಾಗಿದೆ.
ಈ ಬಾರಿಯ ಟೂರ್ನಿಗೂ ಮುನ್ನ ನಡೆದ ಹರಾಜಿನ್ಲಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಕೌಲ್ಟರ್‌ನೈಲ್ ಅವರನ್ನು ಮೂಲಬೆಲೆ 2 ಕೋಟಿ ನೀಡಿ ಖರೀದಿಸಿತ್ತು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ನೈಲ್ ಕಣಕ್ಕಿಳಿದಿದ್ದರು. ಈ ಪಂದ್ಯವನ್ನು ಸಂಜು ಸ್ಯಾಮ್ಸನ್ ಬಳಗ 61 ರನ್‌ಗಳ ಅಂತರದಿಂದ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಗಾಯಗೊಂಡು ಹೊರಬಿದ್ದ ಕೌಲ್ಟರ್ನೈಲ್ ಅವರ ಸ್ಥಾನದಲ್ಲಿ ಮುಂದಿನ ಎರಡು ಪಂದ್ಯಗಳಲ್ಲಿ ನವ್‌ದೀಪ್ ಸೈನಿ ಕಣಕ್ಕಿಳಿದಿದ್ದರು.
ಇನ್ನು ನಾಥನ್ ಕೌಲ್ಟರ್ ನೈಲ್ ಅವರಿಗೆ ಬೀಳ್ಕೊಡುವ ವಿಡಿಯೋವನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಕೌಲ್ಟರ್ ನೇಲ್ ಅವರಿಗೆ ಫ್ರಾಂಚೈಸಿ ಪರವಾಗಿ ಶುಭಹಾರೂಸಿದ್ದು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಲಾಗಿದೆ. ನಾಥನ್ ಕೌಲ್ಟರ್ ನೈಲ್ ಆಡಿದ ಒಂದು ಪಂದ್ಯದಲ್ಲಿ ಮೂರು ಓವರ್‌ಗಳನ್ನು ಎಸೆದ್ದರು. ಆದರೆ ಈ ಮೂರು ಓವರ್‌ಗಳಲ್ಲಿ 48 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡ ಮೊದಲ ಎರಡು ಪಂದ್ಯಗಳನ್ನು ಗೆದ್ದು ಉತ್ಸಾಹದಲ್ಲಿತ್ತು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಆರ್‌ಆರ್ ತಂಡ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಈ ಮೂಲಕ ಆತ್ಮವಿಶ್ವಾಸದಿಂದ ಬೀಗುತ್ತಿತ್ತು ಸಂಜು ಸ್ಯಾಮ್ಸನ್ ಬಳಗ. ಆದರೆ ಮಂಗಳವಾರ ನಡೆದ ರಾಯಲ್ ಚಾಲೆಂಜರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಆಘಾತಕಾರಿ ರೀತಿಯಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಬಾರಿಗೆ ಸೋಲಿನ ರುಚಿ ಕಂಡಿದೆ. ಈ ಸೋಲಿನ ಹೊರತಾಗಿಯೂ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ ಸದ್ಯಕ್ಕೆ ಮೊದಲ ಸ್ಥಾನದಲ್ಲಿಯೇ ಮುಂದುವರಿದಿದೆ.

ರಾಜಸ್ಥಾನ್ ರಾಯಲ್ಸ್ ಸ್ಕ್ವಾಡ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications