For Quick Alerts
ALLOW NOTIFICATIONS  
For Daily Alerts
 

LSG vs RR: ನಿರ್ಣಾಯಕ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್; ಎರಡನೇ ಸ್ಥಾನಕ್ಕಾಗಿ ಶುರು ಪೈಪೋಟಿ

IPL 2022: Rajasthan Royals beats Lucknow Super Giants by 24 runs

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್ ಟೂರ್ನಿಯಲ್ಲಿ ಇಂದು ( ಮೇ 15 ) ನಡೆದ 63ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್‌ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಲಕ್ನೋ ಸೂಪರ್‌ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 24 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ.

ಈ ಗೆಲುವಿನ ಮೂಲಕ ಟೂರ್ನಿಯಲ್ಲಿ ತನ್ನ ಎಂಟನೇ ಗೆಲುವನ್ನು ದಾಖಲಿಸಿರುವ ರಾಜಸ್ಥಾನ್ ರಾಯಲ್ಸ್ ಅಂಕಗಳಲ್ಲಿ ಲಕ್ನೋ ಸೂಪರ್‌ ಜೈಂಟ್ಸ್ ತಂಡವನ್ನು ಸರಿದೂಗಿಸಿದ್ದು, ಎರಡನೇ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಹೌದು, ಈ ಪಂದ್ಯದ ಮುಕ್ತಾಯದ ನಂತರ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು 8 ಪಂದ್ಯಗಳಲ್ಲಿ ಜಯ ಸಾಧಿಸಿ, 5 ಪಂದ್ಯಗಳಲ್ಲಿ ಸೋತು, 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಅತ್ತ ಪಂದ್ಯ ‌ಆರಂಭಕ್ಕೂ ಮುನ್ನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಹೌದು, ಲಕ್ನೋ ಸೂಪರ್‌ ಜೈಂಟ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳಲ್ಲಿ ಕಣಕ್ಕಿಳಿದು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 5 ಪಂದ್ಯಗಳಲ್ಲಿ ಸೋತು, 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 178 ರನ್ ಕಲೆ ಹಾಕಿ ಲಕ್ನೋ ಸೂಪರ್‌ ಜೈಂಟ್ಸ್ ತಂಡಕ್ಕೆ ಗೆಲ್ಲಲು 179 ರನ್‌ಗಳ ಗುರಿಯನ್ನು ನೀಡಿತು. ‌ಆದರೆ, ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಲಕ್ನೋ ಸೂಪರ್‌ ಜೈಂಟ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 154 ರನ್ ಕಲೆ ಹಾಕಿದೆ.

ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್:

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 29 ಎಸೆತಗಳಲ್ಲಿ 41 ರನ್ ಗಳಿಸಿ ಅಬ್ಬರಿಸಿದರೆ, ಜೋಸ್ ಬಟ್ಲರ್ 2 ರನ್ ಕಲೆಹಾಕಿದರು. ಸಂಜು ಸ್ಯಾಮ್ಸನ್ 32 ರನ್, ದೇವದತ್ ಪಡಿಕ್ಕಲ್ 39 ರನ್, ರಿಯಾನ್ ಪರಾಗ್ 19 ರನ್, ಜೇಮ್ಸ್ ನೀಶಮ್ 14 ರನ್ ಗಳಿಸಿದರೆ, ರವಿಚಂದ್ರನ್ ಅಶ್ವಿನ್ ಅಜೇಯ 10 ರನ್ ಮತ್ತು ಟ್ರೆಂಟ್ ಬೌಲ್ಟ್ ಅಜೇಯ 17 ರನ್ ಕಲೆ ಹಾಕಿದರು.

ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ರವಿ ಬಿಷ್ಣೋಯಿ 2 ವಿಕೆಟ್ ಪಡೆದರೆ, ಆಯುಷ್ ಬದೋನಿ, ಜೇಸನ್ ಹೋಲ್ಡರ್ ಮತ್ತು ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.

ಲಕ್ನೋ ಸೂಪರ್‌ ಜೈಂಟ್ಸ್ ಇನ್ನಿಂಗ್ಸ್‌:

ರಾಜಸ್ಥಾನ್ ರಾಯಲ್ಸ್ ನೀಡಿದ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿ ಕಾಕ್ ಮತ್ತು ಕೆಎಲ್ ರಾಹುಲ್ ತಂಡಕ್ಕೆ ಉತ್ತಮ ಆರಂಭ ಕಟ್ಟಿ ಕೊಡುವಲ್ಲಿ ವಿಫಲರಾದರು. ಕ್ವಿಂಟನ್ ಡಿ ಕಾಕ್ 7 ರನ್ ಗಳಿಸಿ ಔಟ್ ಆದರೆ, ಕೆಎಲ್ ರಾಹುಲ್ 10 ರನ್ ಗಳಿಸಿ ನಿರ್ಗಮಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಯುಷ್ ಬದೋನಿ ಶೂನ್ಯ ಸುತ್ತಿದರೆ, ದೀಪಕ್ ಹೂಡಾ 39 ಎಸೆತಗಳಲ್ಲಿ 59 ರನ್ ಬಾರಿಸಿ ಮಿಂಚಿದರು, ಕೃಣಾಲ್ ಪಾಂಡ್ಯ 25 ರನ್, ಮಾರ್ಕಸ್ ಸ್ಟಾಯಿನಿಸ್ 27 ರನ್, ಜೇಸನ್ ಹೋಲ್ಡರ್ 1 ರನ್, ದುಷ್ಮಂತ ಚಮೀರ ಶೂನ್ಯ ಕಲೆ ಹಾಕಿದರೆ, ಮೊಹ್ಸಿನ್ ಖಾನ್ ಅಜೇಯ 9 ರನ್ ಮತ್ತು ಅವೇಶ್ ಖಾನ್ ಅಜೇಯ 1 ರನ್ ಕಲೆಹಾಕಿದರು.

ರಾಜಸ್ಥಾನ್ ರಾಯಲ್ಸ್ ಪರ ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ ಮತ್ತು ಒಬೆಡ್ ಮೆಕ್ಕಾಯ್ ತಲಾ 2 ವಿಕೆಟ್‌ ಪಡೆದರೆ, ಯುಜುವೇಂದ್ರ ಚಹಲ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು. ಹಾಗೂ ಪಂದ್ಯದಲ್ಲಿ ಪ್ರಮುಖ ವಿಕೆಟ್ ಪಡೆದ ಟ್ರೆಂಟ್ ಬೌಲ್ಟ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Story first published: Monday, May 16, 2022, 9:03 [IST]
Other articles published on May 16, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+