ಐಪಿಎಲ್ 2022: ಹರಾಜಿನ ನಂತರ ಹೆಚ್ಚು ಕನ್ನಡಿಗರನ್ನು ಹೊಂದಿರುವ ಬಲಿಷ್ಠ ರಾಜಸ್ಥಾನ್ ತಂಡ ಹೀಗಿದೆ

ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುರಿತಾದ ಚಟುವಟಿಕೆಗಳು ಈಗಾಗಲೇ ಗರಿಗೆದರಿದ್ದು, ಇತ್ತೀಚೆಗಷ್ಟೇ ಮುಕ್ತಾಯಗೊಂಡ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಟೂರ್ನಿ ಮೇಲಿನ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ.
ಹೌದು, ಕಳೆದ ಶನಿವಾರ ಹಾಗೂ ಭಾನುವಾರದಂದು ಬೆಂಗಳೂರು ನಗರದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2022 ಮೆಗಾ ಹರಾಜಿನಲ್ಲಿ 66 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 203 ಆಟಗಾರರು ಹರಾಜಾಗಿದ್ದಾರೆ ಹಾಗೂ ಈ ಪೈಕಿ 108 ಆಟಗಾರರು 1 ಕೋಟಿಗಿಂತ ಅಧಿಕ ಬೆಲೆಗೆ ಬಿಕರಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಐಪಿಎಲ್ ಅಭಿಮಾನಿಗಳಲ್ಲಿ ಇದ್ದ ಯಾವ ಆಟಗಾರರು ಯಾವ ಫ್ರಾಂಚೈಸಿಗಳ ಪಾಲಾಗಲಿದ್ದಾರೆ ಎಂಬ ಕುತೂಹಲ ಹಾಗೂ ಪ್ರಶ್ನೆಗಳಿಗೆ ಉತ್ತರ ಸಿಕ್ಕಂತಾಗಿದೆ. ಎಲ್ಲಾ 10 ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಬಲಿಷ್ಠಗೊಳಿಸಿಕೊಳ್ಳಲು ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಪ್ರಯತ್ನಿಸಿದ್ದು ಬಹುತೇಕ ಯಶಸ್ಸು ಸಾಧಿಸಿವೆ.
ಇನ್ನು ಮೆಗಾ ಹರಾಜಿಗೂ ಮುನ್ನ ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಈ ಮೂರು ಆಟಗಾರರನ್ನು ರಿಟೈನ್ ಮಾಡಿಕೊಂಡಿದ್ದ ರಾಜಸ್ಥಾನ್ ರಾಯಲ್ಸ್ 62 ಕೋಟಿಯೊಂದಿಗೆ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿತು. ಹೀಗೆ ಉತ್ತಮ ಮೊತ್ತವನ್ನು ಕೈಯಲ್ಲಿಟ್ಟುಕೊಂಡು ಹರಾಜಿನಲ್ಲಿ ಭಾಗವಹಿಸಿದ ರಾಜಸ್ಥಾನ್ ರಾಯಲ್ಸ್ ಉತ್ತಮ ಆಟಗಾರರನ್ನು ತನ್ನ ತೆಕ್ಕೆಗೆ ಹಾಕಿಕೊಂಡು ಬಲಿಷ್ಠ ತಂಡ ಕಟ್ಟುವಲ್ಲಿ ಯಶಸ್ವಿಯಾಗಿದೆ ಎಂದೇ ಹೇಳಬಹುದು. ರವಿಚಂದ್ರನ್ ಅಶ್ವಿನ್, ಶಿಮ್ರಾನ್ ಹೆಟ್ಮಾಯೆರ್, ಯುಜುವೇಂದ್ರ ಚಾಹಲ್ ಹಾಗೂ ಇತ್ತೀಚಿಗಷ್ಟೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಿದ ಪ್ರಸಿದ್ಧ್ ಕೃಷ್ಣ ಈ ರೀತಿಯ ಬಲಿಷ್ಠ ಆಟಗಾರರನ್ನು ಖರೀದಿಸಿದ ರಾಜಸ್ಥಾನ್ ರಾಯಲ್ಸ್ ಮೆಗಾ ಹರಾಜು ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಂಡ ನಂತರ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ರಾಜಸ್ಥಾನ್ ರಾಯಲ್ಸ್ ಸಂಪೂರ್ಣ ತಂಡ
ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ನಂತರ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ ಇಲ್ಲಿದೆ: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಡೇವಿಡ್ ಮಿಲ್ಲರ್

ಹೆಚ್ಚು ಕನ್ನಡಿಗರನ್ನು ಖರೀದಿಸಿದ ಫ್ರಾಂಚೈಸಿ
ಇನ್ನು ರಾಜಸ್ಥಾನ್ ರಾಯಲ್ಸ್ ಈ ಬಾರಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಹೆಚ್ಚು ಕರ್ನಾಟಕದ ಆಟಗಾರರನ್ನು ಖರೀದಿಸಿದ ಫ್ರಾಂಚೈಸಿ ಎನಿಸಿಕೊಂಡಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ ಬಿಕರಿಯಾದ ಒಟ್ಟು 16 ಕರ್ನಾಟಕ ಮೂಲದ ಆಟಗಾರರ ಪೈಕಿ 4 ಆಟಗಾರರು ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿದ್ದಾರೆ. ಪ್ರಸಿದ್ಧ್ ಕೃಷ್ಣ, ದೇವದತ್ ಪಡಿಕ್ಕಲ್, ಕೆ ಸಿ ಕಾರಿಯಪ್ಪ ಮತ್ತು ಕರುಣ್ ನಾಯರ್ ಈ ನಾಲ್ವರು ಕನ್ನಡಿಗರನ್ನು ರಾಜಸ್ಥಾನ್ ರಾಯಲ್ಸ್ ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಪ್ರಸಿದ್ಧ್ ಕೃಷ್ಣ ಮತ್ತು ದೇವದತ್ ಪಡಿಕ್ಕಲ್‌ಗಾಗಿ ಜಿದ್ದಾಜಿದ್ದಿನ ಹರಾಜು
ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮಿಂಚಿದ್ದ ದೇವದತ್ ಪಡಿಕ್ಕಲ್ ಅವರನ್ನು 7.75 ಕೋಟಿಗೆ ಖರೀದಿಸಿದ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿ ಮತ್ತೋರ್ವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನು ಖರೀದಿಸಲು 10 ಕೋಟಿ ನೀಡಿದೆ. ಹೀಗೆ ಈ ಇಬ್ಬರು ಆಟಗಾರರನ್ನು ಬೃಹತ್ ಮೊತ್ತಕ್ಕೆ ಜಿದ್ದಾಜಿದ್ದಿನ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ಖರೀದಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications