ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs RR: ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಈ ತಂಡಕ್ಕೆ ಸೋಲಿನ ಭೀತಿ ಇದೆ ಎಂದ ಸ್ಮಿತ್

IPL 2022: Rajasthan Royals is under more pressure than RCB in the Qualifier 2 says Graeme Smith

ಇಂದು ( ಮೇ 27 ) ಅಹಮದಾಬಾದ್ ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಜಯ ಸಾಧಿಸಲಿರುವ ತಂಡ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟರೆ, ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಹೀಗಾಗಿ ಈ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದ್ದು, ಗೆದ್ದು ಫೈನಲ್ ಪ್ರವೇಶಿಸುವತ್ತ ಇತ್ತಂಡಗಳು ಕಣ್ಣಿಟ್ಟಿವೆ. ಈ ಕುತೂಹಲಕಾರಿ ಹಣಾಹಣಿಯ ಕುರಿತು ಮಾತನಾಡಿರುವ ದಕ್ಷಿಣ ಆಫ್ರಿಕಾದ ಮಾಜಿ ಇತ್ತಂಡಗಳಲ್ಲಿ ಯಾವ ತಂಡ ಹೆಚ್ಚು ಒತ್ತಡಕ್ಕೆ ಸಿಲುಕಿ ಸೋಲುವ ಭೀತಿಯಲ್ಲಿದೆ ಎಂಬುದನ್ನು ತಿಳಿಸಿದ್ದಾರೆ.

RCB vs RR Qualifier 2: ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿRCB vs RR Qualifier 2: ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿ

ಇನ್ನು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇದು ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳ ನಡುವೆ ಈ ಹಿಂದೆ ಲೀಗ್ ಹಂತದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ ಸಾಧಿಸಿದರೆ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವನ್ನು ಪಡೆದುಕೊಂಡಿತ್ತು. ಹೀಗೆ ಲೀಗ್ ಹಂತದ ಮುಖಾಮುಖಿಯಲ್ಲಿ ಸಮಬಲ ಸಾಧಿಸಿ ಪ್ಲೇ ಆಫ್ ಸುತ್ತಿಗೆ ಎರಡೂ ತಂಡಗಳು ಲಗ್ಗೆ ಇಟ್ಟವು.

ಈತನಿಂದಲೇ ಸೋತೆವು; ಎಲಿಮಿನೇಟರ್‌ನಲ್ಲಿ ಆರ್‌ಸಿಬಿ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್!ಈತನಿಂದಲೇ ಸೋತೆವು; ಎಲಿಮಿನೇಟರ್‌ನಲ್ಲಿ ಆರ್‌ಸಿಬಿ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್!

ಪ್ಲೇ ಆಫ್ ಸುತ್ತಿನ ಒಂದನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಿದ ರಾಜಸ್ತಾನ್ ರಾಯಲ್ಸ್ ಸೋಲನ್ನು ಅನುಭವಿಸಿದರೆ, ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಿದೆ. ಹೀಗೆ ತನ್ನ ಕೊನೆಯ ಪಂದ್ಯದಲ್ಲಿ ಸೋಲುಂಡಿರುವ ರಾಜಸ್ಥಾನ್ ರಾಯಲ್ಸ್ ಇಂದು ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕಳೆದೆರಡು ಪಂದ್ಯಗಳಲ್ಲಿ ಗೆದ್ದು ಬೀಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಗ್ರೇಮ್ ಸ್ಮಿತ್ ಪ್ರಕಾರ ಪಂದ್ಯದಲ್ಲಿ ಹೆಚ್ಚಿನ ಒತ್ತಡಕ್ಕೆ ಸಿಲುಕಿರುವ ತಂಡ ಯಾವುದು ಎಂಬುದರ ಕುರಿತಾದ ವಿವರ ಕೆಳಕಂಡಂತಿದೆ.

ಗ್ರೇಮ್ ಸ್ಮಿತ್ ಪ್ರಕಾರ ಒತ್ತಡಕ್ಕೆ ಸಿಲುಕಿರುವ ತಂಡವಿದು

ಗ್ರೇಮ್ ಸ್ಮಿತ್ ಪ್ರಕಾರ ಒತ್ತಡಕ್ಕೆ ಸಿಲುಕಿರುವ ತಂಡವಿದು

ಪಂದ್ಯದ ಕುರಿತಾಗಿ ಮಾತನಾಡಿರುವ ಗ್ರೇಮ್ ಸ್ಮಿತ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋತಿರುವ ರಾಜಸ್ಥಾನ್ ರಾಯಲ್ಸ್ ಹೆಚ್ಚು ಒತ್ತಡಕ್ಕೆ ಸಿಲುಕಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಂದ್ಯದಲ್ಲಿ ಒತ್ತಡಕ್ಕೆ ಸಿಲುಕಿರುವ ರಾಜಸ್ತಾನ ರಾಯಲ್ಸ್ ಹಿನ್ನಡೆ ಅನುಭವಿಸಬಹುದು ಎಂಬ ಅಭಿಪ್ರಾಯವನ್ನು ಗ್ರೇಮ್ ಸ್ಮಿತ್ ವ್ಯಕ್ತಪಡಿಸಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧ ಸೋತು ಹೊಡೆತ ತಿಂದಿರುವ ರಾಜಸ್ತಾನ್ ರಾಯಲ್ಸ್ ಈ ಪಂದ್ಯದಲ್ಲಿ ಮೇಲೆ ಏಳಬಹುದಾ ಎಂಬ ಪ್ರಶ್ನೆಯನ್ನು ಕೂಡ ಗ್ರೇಮ್ ಸ್ಮಿತ್ ಹಾಕಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲುವ ಫೇವರಿಟ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲುವ ಫೇವರಿಟ್

ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಗೆದ್ದು ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯದಲ್ಲಿ ಅಬ್ಬರಿಸುವ ಸಾಧ್ಯತೆಗಳಿದ್ದು ಹೆಚ್ಚು ಹುಮ್ಮಸ್ಸಿನಲ್ಲಿದೆ ಎಂದು ಗ್ರೇಮ್ ಸ್ಮಿತ್ ಅಭಿಪ್ರಾಯಪಟ್ಟಿದ್ದಾರೆ.

ಇವತ್ತು ಈ ಆಟಗಾರನ ವಿಕೆಟ್ ಬೇಗ ಪಡ್ಕೊಂಡ್ರೆ RCB ಫೈನಲ್ ಗೇರೋದು ಗ್ಯಾರೆಂಟಿ | #cricket | Oneindia Kannada
ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ್ದೇ ಮೇಲುಗೈ!

ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ್ದೇ ಮೇಲುಗೈ!

ಇನ್ನು ಇತ್ತಂಡಗಳ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಪಷ್ಟ ಮೇಲುಗೈ ಸಾಧಿಸಿದೆ. ಇತ್ತಂಡಗಳ ನಡುವೆ ನಡೆದಿರುವ 27 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 3 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.

Story first published: Friday, May 27, 2022, 14:33 [IST]
Other articles published on May 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X