CSK vs RR: ಮೊಯಿನ್ ಅಲಿ ಶತಕ ಜಸ್ಟ್ ಮಿಸ್; ರಾಜಸ್ಥಾನ್‌ಗೆ ಸಾಧಾರಣ ರನ್‌ಗಳ ಗುರಿ ನೀಡಿದ ಸಿಎಸ್‌ಕೆ

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಇಂದು ನಡೆಯುತ್ತಿರುವ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಪಂದ್ಯಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಬ್ರಬೌರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಬ್ಯಾಟಿಂಗ್ ಆಯ್ದುಕೊಂಡರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ150 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 151 ರನ್‌ಗಳ ಗುರಿ ನೀಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್ ಮತ್ತು ಡಿವೋನ್ ಕಾನ್ವೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ರುತುರಾಜ್ ಗಾಯಕ್ವಾಡ್ 2 ರನ್ ಗಳಿಸಿ ಔಟ್ ಆದರೆ, ಡಿವೋನ್ ಕಾನ್ವೆ 16 ರನ್ ಗಳಿಸಿದರು. ಪಂದ್ಯದ ಮೊದಲ ಓವರ್‌ನ ಅಂತಿಮ ಎಸೆತದಲ್ಲಿ ರುತುರಾಜ್ ಗಾಯಕ್ವಾಡ್ ಔಟ್ ಆದ ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಯಿನ್ ಅಲಿ 57 ಎಸೆತೆಗಳಲ್ಲಿ 93 ರನ್ ಬಾರಿಸಿ ಅಬ್ಬರಿಸಿದರು. ಹೀಗೆ ಸ್ಪೋಟಕ ಆಡವಾಡಿದ ಮೊಯಿನ್ ಅಲಿ ಹೊರತುಪಡಿಸಿ ತಂಡದ ಉಳಿದ ಯಾವುದೇ ಆಟಗಾರರೂ ಸಹ ಹೇಳಿಕೊಳ್ಳುವಂತ ಪ್ರದರ್ಶನ ನೀಡಲಿಲ್ಲ. ಇನ್ನುಳಿದಂತೆ ಎನ್ ಜಗದೀಶನ್ 1 ರನ್ ಕಲೆಹಾಕಿದರೆ, ಅಂಬಟಿ ರಾಯುಡು 3 ರನ್, ಎಂಎಸ್ ಧೋನಿ 28 ಎಸೆತಗಳಲ್ಲಿ 26 ರನ್, ಮಿಚೆಲ್ ಸ್ಯಾಂಟ್ನರ್ ಅಜೇಯ 1 ರನ್ ಮತ್ತು ಸಿಮರ್‌ಜೀತ್ ಸಿಂಗ್ ಅಜೇಯ 3 ರನ್ ಕಲೆಹಾಕಿದರು.
ಆಡುವ ಪಂದ್ಯಗಳು:
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಅಂಬಟಿ ರಾಯುಡು, ಎನ್ ಜಗದೀಸನ್, ಎಂಎಸ್ ಧೋನಿ (ವಿಕೆಟ್ ಕೀಪರ್ / ನಾಯಕ), ಮಿಚೆಲ್ ಸ್ಯಾಂಟ್ನರ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಮಥೀಶ ಪತಿರಾನ, ಮುಖೇಶ್ ಚೌಧರಿ
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್ / ನಾಯಕ), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications