RR vs DC: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗ

ಸದ್ಯ ನಡೆಯುತ್ತಿರುವ 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 58ನೇ ಪಂದ್ಯದಲ್ಲಿ ಇಂದು (ಮೇ 11) ಮುಂಬೈನ ಡಾ. ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿವೆ.
ಈ ಪಂದ್ಯ ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆಯಲಿರುವ ಎರಡನೇ ಪಂದ್ಯವಾಗಿದ್ದು, ಈ ಮೊದಲು ಏಪ್ರಿಲ್ 22ರಂದು ನಡೆದಿದ್ದ ಪ್ರಥಮ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 15 ರನ್‌ಗಳ ಜಯವನ್ನು ಕಂಡಿತ್ತು.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ 11 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ 7 ಪಂದ್ಯಗಳಲ್ಲಿ ಗೆದ್ದು ಉಳಿದ 4 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ಪ್ಲೇಆಫ್ ಪ್ರವೇಶಿಸಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಅದರಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ.
ಮುಂಬೈನ ಡಾ. ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ದಾಳಿ ನಡೆಸಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪಂದ್ಯದಲ್ಲಿ ಎರಡು ಆಟಗಾರರ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ರಿಪಾಲ್ ಪಟೇಲ್ ಮತ್ತು ಖಲೀಲ್ ಅಹ್ಮದ್ ಬದಲಿಗೆ ಕ್ರಮವಾಗಿ ಲಲಿತ್ ಯಾದವ್ ಮತ್ತು ಚೇತನ್ ಸಕರಿಯಾ ಆಡುತ್ತಿದ್ದಾರೆ.
ಅದೇ ರೀತಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಇಂದು ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಶಿಮ್ರಾನ್ ಹೆಟ್ಮೇಯರ್ ಬದಲಿಗೆ ರಸ್ಸೆ ವಾನ್ ಡೆರ್ ಡಸ್ಸೆನ್ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಹನ್ನೊಂದರ ಬಳಗ
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರಸ್ಸೆ ವಾನ್ ಡೆರ್ ಡಸ್ಸೆನ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಹನ್ನೊಂದರ ಬಳಗ:
ಡೇವಿಡ್ ವಾರ್ನರ್, ಶ್ರೀಕರ್ ಭರತ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಅನ್ರಿಚ್ ನಾರ್ಟ್ಜೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications