RR vs KKR: ರಾಜಸ್ಥಾನ್ ರಾಯಲ್ಸ್ vs ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ XI

ಐಪಿಎಲ್ 2022ರ ಆವೃತ್ತಿಯ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಮಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪಡೆ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಈ ಎರಡು ತಂಡಗಳು ಕೂಡ ಹಿಂದಿನ ಪಂದ್ಯದಲ್ಲಿ ಸೋಲಿನೊಂದಿಗೆ ಈ ಪಂದ್ಯವನ್ನಾಡಲು ಕಣಕ್ಕಿಳಿದಿದೆ. ಅದರಲ್ಲೂ ಕೆಕೆಆರ್ ಪಡೆ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು ಇಂದು ಗೆಲುವು ಸಾಧಿಸಲೇಬೇಕೆಂದು ಪಣತೊಟ್ಟಿದೆ. ಇತ್ತ ರಾಜಸ್ಥಾನ್ ರಾಯಲ್ಸ್ ಕೂಡ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿದ ಕಾರಣ ಈ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳುವ ಉತ್ಸಾಹದಲ್ಲಿದೆ.
ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಒಂದು ಬದಲಾವಣೆ ಮಾಡಿ ಕಣಕ್ಕಿಳಿದಿದೆ. ಶಿವಂ ಮಾವಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು ಅಮನ್ ಖಾನ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಇನ್ನು ರಾಜಸ್ಥಾನ್ ರಾಯಲ್ಸ ತಂಡದಲ್ಲಿ ಮೂರು ಬದಲಾವಣೆಯಾಗಿದೆ. ಕರುಣ್ ನಾಯರ್, ಒಬೆಡ್ ಮೆಕ್‌ಕಾಯ್ ಹಾಗೂ ಟ್ರೆಂಟ್ ಬೋಲ್ಟ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ರಾಸ್ಸಿ ವಾಂಡರ್‌ಡಸ್ಸೆನ್, ಕುಲ್ದೀಪ್ ಸೇನ್ ಹಾಗೂ ಜಿಮ್ಮಿ ನೀಶಮ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ.
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್
ಬೆಂಚ್: ಕುಲದೀಪ್ ಸೇನ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ನಾಥನ್ ಕೌಲ್ಟರ್-ನೈಲ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಧ್ರುವ ಜುರೆಲ್, ಶುಭಂ ಗರ್ವಾಲ್
ಕೊಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಆರೋನ್ ಫಿಂಚ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಬೆಂಚ್: ಅಮನ್ ಹಕೀಮ್ ಖಾನ್, ಟಿಮ್ ಸೌಥಿ, ಸ್ಯಾಮ್ ಬಿಲ್ಲಿಂಗ್ಸ್, ಮೊಹಮ್ಮದ್ ನಬಿ, ಚಾಮಿಕಾ ಕರುಣಾರತ್ನೆ, ಅಜಿಂಕ್ಯ ರಹಾನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜಿತ್ ತೋಮರ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ಹರ್ಷಿತ್ ರಾಣಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications